ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ, ಬಿಜೆಪಿಯಲ್ಲಿ ಸಿಕ್ಕಾಪಟ್ಟೆ ನಾಯಕರಿದ್ದಾರೆ: ಬಿಎಲ್​ ಸಂತೋಷ್

|

Updated on: Apr 21, 2023 | 2:48 PM

ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿದ ಬಿ.ಎಲ್. ಸಂತೋಷ್(BL santhosh) ‘ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ, ಬಿಜೆಪಿಯಲ್ಲಿ ಸಿಕ್ಕಾಪಟ್ಟೆ ಲೀಡರ್​ಗಳಿದ್ದಾರೆ ಎನ್ನುವ ಮೂಲಕ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್ ಮಾರ್ಮಿಕವಾಗಿ ಉತ್ತರಿಸಿದ್ದಾರೆ.

ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ, ಬಿಜೆಪಿಯಲ್ಲಿ ಸಿಕ್ಕಾಪಟ್ಟೆ ನಾಯಕರಿದ್ದಾರೆ: ಬಿಎಲ್​ ಸಂತೋಷ್
ಬಿಎಲ್​ ಸಂತೋಷ್​
Follow us on

ಮೈಸೂರು: ಬಿ.ಎಲ್. ಸಂತೋಷ್(BL Santhosh) ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳ ಮುಂದೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿದ ಅವರು  ‘ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ, ಬಿಜೆಪಿಯಲ್ಲಿ ಸಿಕ್ಕಾಪಟ್ಟೆ ಲೀಡರ್​ಗಳಿದ್ದಾರೆ ಎನ್ನುವ ಮೂಲಕ ಬಿಜೆಪಿ(BJP) ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್ ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಮೈಸೂರಿನ ಬನ್ನಿಮಂಟಪದ ಖಾಸಗಿ ಹೋಟೆಲ್‌ ಏರ್ಪಡಿಸಿದ್ದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು ‘ನಮ್ಮಲ್ಲಿ ಮಾತನಾಡಲು ಪ್ರತಾಪ್​ ಸಿಂಹರಂತಹ ನಾಯಕ ಇದ್ದಾರೆ. ನಾನು ಯಾರಿಗೂ ಕಾಂಪಿಟೇಟರ್​ ಆಗಲ್ಲ ಎಂದರು.

ಇತ್ತೀಚೆಗಷ್ಟೇ ಬಿಎಲ್ ಸಂತೋಷ ವಿರುದ್ದ ಜಗದೀಶ್​ ಶೆಟ್ಟರ್​ ಆರೋಪಗಳ ಸುರಿಮಳೆಯನ್ನೇ ಹರಿಸಿದ್ದರು

ಹೌದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ತುರ್ತು ಸುದ್ದಿಗೋಷ್ಠಿ ನಡೆಸಿ ತಮಗೆ ಟಿಕೆಟ್​ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್​ ಕಾರಣ ಎಂದು ನೇರವಾಗಿ ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದರು. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದ್ದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿತ್ತು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ ಎಂದು ಹೊಸ ಬಾಂಬ್ ಸಿಡಿಸಿದ್ದರು.

ಇದನ್ನೂ ಓದಿ:Prathap Simha : ಸೋಮಣ್ಣ ಪರ ಮತಯಾಚನೆಗೆ ಹೋಗಿದ್ದ ಪ್ರತಾಪ್​ಸಿಂಹಗೆ ಸ್ಥಳೀಯರಿಂದ ತರಾಟೆ

ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದ್ರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ಜೊತೆಗೆ ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ. ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು ಎಂದಿದ್ದರು. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್​ಚಾರ್ಜ್ ಮಾಡಿದ್ರು ಒಂದು ಸೀಟ್ ಬರಲಿಲ್ಲ. ತಮಿಳುನಾಡಿನಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Fri, 21 April 23