ಕೆಜೆಪಿ ಕಟ್ಟಿದ್ದು ನನ್ನ ಬದುಕಿನಲ್ಲಿ ಮಾಡಿದ ಅಕ್ಷಮ್ಯ ಅಪರಾಧ: ಬಿಎಸ್ ಯಡಿಯೂರಪ್ಪ
ಕೆಜೆಪಿ ಕಟ್ಟಿದ್ದು ನನ್ನ ಬದುಕಿನಲ್ಲಿ ಮಾಡಿದ ಅಕ್ಷಮ್ಯ ಅಪರಾಧ. ಈ ಕುರಿತಾಗಿ ನಾನು ಹಿಂದೆ ಜನರಿಗೆ ಕ್ಷಮೆ ಕೇಳಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೆಂಗಳೂರು: ಕೆಜೆಪಿ ಕಟ್ಟಿದ್ದು ನನ್ನ ಬದುಕಿನಲ್ಲಿ ಮಾಡಿದ ಅಕ್ಷಮ್ಯ ಅಪರಾಧ. ಈ ಕುರಿತಾಗಿ ನಾನು ಹಿಂದೆ ಜನರಿಗೆ ಕ್ಷಮೆ ಕೇಳಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS Yediyurappa) ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿವೃತ್ತಿಯಾಗಿ ಅಂತಾ ಜಗದೀಶ್ ಶೆಟ್ಟರ್ಗೆ ಯಾರೂ ಹೇಳಿಲ್ಲ. ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಆದರೂ ಅವರು ಬಿಜೆಪಿ ಬಿಟ್ಟಿದಾರೆ. ಜನ ಅವರನ್ನ ಕ್ಷಮಿಸಲ್ಲ. ನಾನು ಅವರೊಂದಿಗೆ ಎರಡು ಮೂರು ಸಲ ಮಾತಾಡಿದೆ. ಯಾರೇ ಪಕ್ಷ ಬಿಟ್ಟರೂ ನಮಗೆ ಸಮಸ್ಯೆ ಆಗಲ್ಲ. ಅಧಿಕಾರಕ್ಕೆ ಬಂದಾಗ ಸವದಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇವರ ಬಣ್ಣ ಬಯಲು ಮಾಡುತ್ತೇನೆ ಎಂದು ವಾಗ್ದಾಳಿ ಮಾಡಿದರು.
ಶೆಟ್ಟರ್, ಸವದಿ ಪುನಃ ಪಕ್ಷಕ್ಕೆ ಬಂದರೆ ಸ್ವಾಗತ
ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಅವರು ಮತ್ತೆ ಪಕ್ಷಕ್ಕೆ ಬಂದ್ದರೆ ನಾನು ಸ್ವಾಗತಿಸುತ್ತೇನೆ. ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ವಿರುದ್ದ ಹೈಕಮಾಂಡ್ ಮಾತ್ನಾಡುಸುತ್ತಿದ್ದೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಹೌದು ಹೈಕಮಾಂಡ್ ಹೇಳಿದಂತೆ ಕೇಳಬೇಕು. ಸವದಿಗೆ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸಚಿವರನ್ನಾಗಿ ಮಾಡೋದಾಗಿ ನಾನೇ ಕರೆ ಮಾಡಿ ಹೇಳಿದ್ದೆ.
ಇದನ್ನೂ ಓದಿ: ರಾಜೀನಾಮೆ ಪತ್ರ ಹಿಡಿದು ಬಂದ ಜಗದೀಶ್ ಶೆಟ್ಟರ್ ಮನವೊಲಿಕೆಗೆ ಸ್ಪೀಕರ್ ಕಚೇರಿಯಲ್ಲಿ ಅಂತಿಮ ಕಸರತ್ತು: ಬಗ್ಗದ ಮಾಜಿ ಸಿಎಂ
ನನಗೆ 80 ವರ್ಷ ಆಗಿದೆ. ನಾನಿನ್ನೂ ಗಟ್ಟಿ ಇದ್ದೇನೆ. ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರುತ್ತೇವೆ. ಉತ್ತರ ಕರ್ನಾಟಕ ಭಾಗದಲ್ಲೂ ಸುತ್ತಿ ಪಕ್ಷ ಗೆಲ್ಲುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ನನ್ನ ಸಂಪೂರ್ಣ ಬದುಕನ್ನು ಬಿಜೆಪಿ, ದೇಶಕ್ಕೆ ಮುಡಿಪಿಟ್ಟಿದ್ದೇನೆ. BJP ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಈ ಚುನಾವಣೆಯಲ್ಲಿ ಹೊಸಮುಖಗಳಿಗೆ ಅವಕಾಶ ಕೊಟ್ಟಿದ್ದೇವೆ. ಎಲ್ಲಾ ಸಮುದಾಯಗಳ ಕೊಂಡೊಯ್ಯುವ ಪ್ರಯತ್ನ ಮಾಡಿದ್ದೇವೆ. ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಮೀಸಲಾತಿ ಹೆಚ್ಚಿಸಿ ಅನೇಕ ದಶಕಗಳ ಬೇಡಿಕೆ ಈಡೇರಿಸಿದ್ದೇವೆ. ಬಿಜೆಪಿ ಸಾಮಾಜಿಕ ನ್ಯಾಯ ಪಾಲನೆ ಮಾಡಿದೆ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಸಿದರು.
ಇದನ್ನೂ ಓದಿ: Karnataka Assembly Election: ಪಕ್ಷವನ್ನು ಮುಳುಗಿಸಿದ ಕೀರ್ತಿ ಯಡಿಯೂರಪ್ಪಗೂ ಇದೆ: ಲಕ್ಷ್ಮಣ್ ಸವದಿ ತಿರುಗೇಟು
ಬಿಜೆಪಿ ತೊರೆದು ಕೆಜೆಪಿ ಪಕ್ಷ ಸ್ಥಾಪನೆ
2013ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಪಕ್ಷ ಸ್ಥಾಪಿಸಿದ್ದರು. ಆದರೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಬಿಎಸ್ವೈಗೆ ಚುನಾವಣೆ ಫಲಿತಾಂಶ ಮಾತ್ರ ಸಾಕಷ್ಟು ನಿರಾಶೆ ಮೂಡಿಸಿತ್ತು. ಏಕೆಂದರೆ ಆ ಚುನಾವಣೆಯಲ್ಲಿ ಬಿಎಸ್ವೈ ಪಕ್ಷದಿಂದ ಕೇವಲ ಆರು ಮಂದಿ ಮಾತ್ರ ಆಯ್ಕೆಯಾಗಿದ್ದರು. ವರ್ಷದ ಬಳಿಕ ಮತ್ತೆ ಬಿಜೆಪಿ ಸೇರಿದ ಬಿಎಸ್ವೈ 2014ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧಿಸಿ, ಸಂಸದರಾಗಿ ಆಯ್ಕೆಯಾದ್ದರು.
ಮತ್ತಷ್ಟು ಕರ್ನಾಟಕ ವಿಧಾನಸಭೆ ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ