ರಾಹುಲ್ ಗಾಂಧಿ ಅವನ್ಯಾವ ನಾಯಕರೀ?: ರಾಯಚೂರಿನಲ್ಲಿ ಗುಡುಗಿದ ಯಡಿಯೂರಪ್ಪ

ಗುಟುರು ಹಾಕಿದ ಟಗರುಗೆ ರಾಜಹುಲಿ ರಾಯಚೂರಿನಲ್ಲಿ ತಿರುಗೇಟು ನೀಡಿದೆ. ಮೋದಿ ನೂರು ಬಾರಿ ಬಂದರೂ BJP ಗೆಲ್ಲಲ್ಲ ಎಂದು ಹೇಳಿದ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಯಡಿಯೂರಪ್ಪ, ಕಾಂಗ್ರೆಸ್​ನವರು ಯಾಕೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಪ್ರಚಾರ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಅವನ್ಯಾವ ನಾಯಕರೀ?: ರಾಯಚೂರಿನಲ್ಲಿ ಗುಡುಗಿದ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ ಮತ್ತು ರಾಹುಲ್ ಗಾಂಧಿ
Follow us
|

Updated on:Apr 29, 2023 | 3:51 PM

ರಾಯಚೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ನೂರು ಬಾರಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ (BJP) ಗೆಲ್ಲಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ (BS Yediyurappa), ಕಾಂಗ್ರೆಸ್​ನವರು ಯಾಕೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಪ್ರಚಾರ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೋದಿ, ಅಮಿತ್ ಶಾ (Amit Shah), ಜೆಪಿ ನಡ್ಡಾರಂತಹ ನಾಯಕರಿದ್ದಾರೆ. ಇವರನ್ನು ಎದುರಿಸಲು ಕೈ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ನವರು ಮನಬಂದಂತೆ ಮಾತನಾಡುತ್ತಾರೆ ಎಂದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿದ ನಂತರ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಒತ್ತಾಯಪೂರ್ವಕವಾಗಿ ಕೆಳಗಿಳಿಸಿದೆ ಎಂಬ ಟೀಕೆಯನ್ನು ಮಾಡುತ್ತಿದೆ. ಬಿಜೆಪಿಯವರು ಯಡಿಯೂರಪ್ಪ ಅವರು ಕಣ್ಣೀರು ಹಾಕುವಂತೆ ಮಾಡಿದರು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಾನು ಕಣ್ಣೀರು ಹಾಕುವ ಪ್ರಶ್ನೆಯೇ ಇಲ್ಲ. ನನ್ನನ್ನು ಯಾರೂ ಒತ್ತಾಯಪೂರ್ವಕವಾಗಿ ಕೆಳಗಿಳಿಸಿಲ್ಲ. ಸ್ವಂತ ನಿರ್ಧಾರ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ದೇವರು ಶಕ್ತಿ ಕೊಟ್ಟರೆ ಮುಂದಿನ ಚುನಾವಣೆಯಲ್ಲೂ ಪ್ರಚಾರ ಮಾಡಿ ಬಿಜೆಪಿ‌ ಅಧಿಕಾರಕ್ಕೆ ತರುತ್ತೇನೆ. ನಿಮ್ಮ ಆಶಿರ್ವಾದ ನಮ್ಮ ಮೇಲಿರಬೇಕು ಎಂದರು.

ಇದನ್ನೂ ಓದಿ: Karnataka Assembly Polls: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ಅತ್ತಿದ್ದನ್ನು ಮಿಮಿಕ್ ಮಾಡಿದ ಸಿದ್ದರಾಮಯ್ಯ

ರಾಹುಲ್ ಗಾಂಧಿಯನ್ನು ಅವನ್ಯಾವ ನಾಯಕರೀ ಎಂದು ಪ್ರಶ್ನಿಸಿದ ಯಡಿಯೂರಪ್ಪ, ಕಾಂಗ್ರೆಸ್​ ಮುಳುಗುತ್ತಿರುವ ಹಡಗು. ರಾಹುಲ್ ಗಾಂಧಿಯನ್ನು ಮೋದಿಗೆ ಸಮಾನ ಎನ್ನಲು ಸಾಧ್ಯನಾ? ವಿಶ್ವವೇ ಕೊಂಡಾಡುತ್ತಿರುವ ವಿಶ್ವ ನಾಯಕ ಮೋದಿ ಎಲ್ಲಿ? ಉತ್ತರಪ್ರದೇಶದಲ್ಲಿ 400 ಸ್ಥಾನಗಳಲ್ಲಿ ಕೇಲವ 4 ಸೀಟುಗಳನ್ನು ಗೆದ್ದಿರುವ ಕಾಂಗ್ರೆಸ್ ಪಕ್ಷ ಎಲ್ಲಿ? ಎಂದು ಖಾರವಾಗಿ ಪ್ರಶ್ನಿಸಿದರು.

ಗೊಂದಲ, ಮುನಿಸು ಶಮನಕ್ಕೆ ಯಡಿಯೂರಪ್ಪ ಸೂಚನೆ

ಅಲ್ಲೋಬ್ಬ ಇಲ್ಲೊಬ್ಬ ವ್ಯಕ್ತಿ ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ. ಹೀಗಾಗಿ ನಾಳೆಯಿಂದ ಅಭ್ಯರ್ಥಿ ಗೆಲುವಿಗಾಗಿ ಹಾಗೂ ಮನೆ ಮನೆಗೆ ಹೋಗಿ ಜನರನ್ನ ಭೇಟಿ ಮಾಡಿ ಅದನ್ನ ಸರಿಪಡಿಸಿ ಅಂತ ಕಾರ್ಯಕರ್ತರಿಗೆ ಕರೆ ನೀಡಿದರು. ಇದೇ ವೇಳೆ ಪ್ರಸಕ್ತ ಚುನಾವಣೆಯಲ್ಲಿ ನಾವು 140ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Sat, 29 April 23