ಇದೇ ಮೊದಲ ಬಾರಿ ವಿಧಾನಸಭಾ ಚುಣಾವಣೆಗೆ ಸ್ಪರ್ಧೆ ಮಾಡಿರುವ ವಿಜಯೇಂದ್ರ ಆಸ್ತಿ ಎಷ್ಟಿದೆ? ಇಲ್ಲಿದೆ ವಿವರ

|

Updated on: Apr 18, 2023 | 7:57 AM

ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಶಿಕಾರಿಪುದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ವಿಜಯೇಂದ್ರ ಕುಟುಂಬದ ಆಸ್ತಿ ಎಷ್ಟಿದೆ? ಅವರ ಬಳಿ ಏನೆಲ್ಲ ಇದೆ? ಎನ್ನುವುದು ಈ ಕೆಳಗಿನಂತಿದೆ ನೋಡಿ .

ಇದೇ ಮೊದಲ ಬಾರಿ ವಿಧಾನಸಭಾ ಚುಣಾವಣೆಗೆ ಸ್ಪರ್ಧೆ ಮಾಡಿರುವ ವಿಜಯೇಂದ್ರ ಆಸ್ತಿ ಎಷ್ಟಿದೆ? ಇಲ್ಲಿದೆ ವಿವರ
Follow us on

ಶಿವಮೊಗ್ಗ: ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ(BY Vijayendra) ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa) ಉತ್ತರಾಧಿಕಾರಿಯಾಗಿ ಶಿಕಾರಿಪುರದಲ್ಲಿ(shikaripura) ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದು ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಅದರಂತೆ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತಮ್ಮ ಕುಟುಂಬದ ಆಸ್ತಿ ಎಷ್ಟು? ಅವರ ಬಳಿ ಏನೆಲ್ಲಾ ಇದೆ ಎನ್ನುವುದನ್ನು ವಿಜಯೇಂದ್ರ ಅವರು ನಾಮಿನೇಷನ್​ನಲ್ಲಿ ಮಾಹಿತಿ ನೀಡಿದ್ದಾರೆ. ಬಿವೈ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ  ಒಟ್ಟು 126.18 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಆದರೆ, ದಂಪತಿಗೆ ಒಂದೇ ಒಂದು ಸ್ವಂತ ಕಾರು ಇಲ್ಲ.

ಇದನ್ನೂ ಓದಿ: ಹೆಚ್​.ಡಿ ರೇವಣ್ಣ ಆಸ್ತಿ ವಿವರ ಬಹಿರಂಗ: ದೊಡ್ಡಗೌಡರ ಸೊಸೆ ಭವಾನಿ ಬಳಿ ಕೆಜಿಗಟ್ಟಲೆ ಬಂಗಾರ, ಬೆಳ್ಳಿ

47 ವರ್ಷದ ವಿಜಯೇಂದ್ರ ಅವರು 46.82 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 7.85 ಕೋಟಿ ಮೌಲ್ಯದ ಚರಾಸ್ತಿಯ ಒಡತಿಯಾಗಿದ್ದಾರೆ. ಇನ್ನು ಈ ದಂಪತಿ ಬಳಿ ಪ್ರಸ್ತುತ 70.11 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ನಾಮಪತ್ರದ ಅಫಿಡವಿಟ್​ನಲ್ಲಿ ತಿಳಿಸಲಾಗಿದೆ.

ಇನ್ನು ವಿಜಯೇಂದ್ರ ಒಟ್ಟು 1.75 ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್ ಮತ್ತು ಟ್ರೇಲರ್ ಹೊಂದಿದ್ದಾರೆ. ದಂಪತಿ ಬಳಿ ಒಟ್ಟು 2.29 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳು ಇವೆ. ವಿಜಯೇಂದ್ರ ಅವರ ಬಳಿ 1.34 ಕೆಜಿ ಚಿನ್ನ ಇದ್ದರೆ, ಅವರ ಪತ್ನಿ 1.25 ಕೆಜಿ ಚಿನ್ನಾಭರಣಗಳನ್ನು ಹೊಂದಿದ್ದಾರೆ.

ಶಿಕಾರಿಪುರದಲ್ಲಿ ಕೃಷಿ ಭೂಮಿ, ದೊಡ್ಡಬಳ್ಳಾಪುರ, ರಾಮನಗರ, ಶಿಕಾರಿಪುರ, ಶಿವಮೊಗ್ಗ, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಕೃಷಿಯೇತರ ಭೂಮಿ ಹೊಂದಿದ್ದಾರೆ. ಹಾಗೇ ಏಳು ಮನೆಗಳ್ನು ಹೊಂದಿದ್ದಾರೆ. ಇನ್ನು ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ಅಫಿಡವಿಟ್​ನಲ್ಲಿ ಘೋಷಿಸಿಕೊಂಡಿದ್ದಾರೆ.  ಲಂಚ ಆರೋಪದ ಬಗ್ಗೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದರೆ, ಮತ್ತೊಂದು ಪ್ರಕರಣ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ್ದು ಎಂದು ತಿಳಿಸಿದ್ದಾರೆ.

ಶಿಕಾರಿಪುರ ಬಿ. ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ. ಒಟ್ಟು 9 ಬಾರಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸಿರುವ ಅವರು 8 ಬಾರಿ ಗೆದ್ದಿದ್ದಾರೆ. 1999ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಹಾಲಿಂಗಪ್ಪ ಎದುರು ಅವರು ಸೋಲು ಕಂಡಿದ್ದರು. ಇದೀಗ ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರ ಅವರಗೆ ಬಿಟ್ಟು ಕೊಟ್ಟಿದ್ದು, ವಿಜಯೇಂದ್ರ ಅವರಿಗೆ ಇದು ಮೊದಲ ಚುನಾವಣೆಯಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ