Ticket Fight: ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಬೆಳೆಯಲು ಸಾಧ್ಯ: ಸಿ.ಟಿ ರವಿಗೆ ಟಾಂಗ್ ಕೊಟ್ಟ ವಿಜಯೇಂದ್ರ

|

Updated on: Mar 15, 2023 | 7:52 AM

ಟಿಕೆಟ್ ನೀಡುವ ಬಗ್ಗೆ ಕುಟುಂಬದಲ್ಲಿ ತೀರ್ಮಾನವಾಗುವುದಿಲ್ಲ, ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎನ್ನುವ ಸಿಟಿ ರವಿ ಹೇಳಿಕೆಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

Ticket Fight: ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಬೆಳೆಯಲು ಸಾಧ್ಯ: ಸಿ.ಟಿ ರವಿಗೆ ಟಾಂಗ್ ಕೊಟ್ಟ ವಿಜಯೇಂದ್ರ
ವಿಜಯೇಂದ್ರ, ಸಿ.ಟಿ ರವಿ
Follow us on

ಕೊಪ್ಪಳ: ಶಿಕಾರಿಪುರ ವಿಧಾನಸಭಾ(Shikaripura Ticket) ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ(BS Yediyurappa) ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ(ct ravi) ಆಕ್ಷೇಪಿಸಿದ್ದಾರೆ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದು ಪರೋಕ್ಷವಾಗಿ ಬಿಎಸ್​ವೈಗೆ ಟಾಂಗ್ ಕೊಟ್ಟಿದ್ದಾರೆ. ಇನ್ನು ಇದಕ್ಕೆ ಇದೀಗ ಸ್ವತಃ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ( by vijayendra )ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಬಿಜೆಪಿ ಕಟ್ಟಿದ್ದು ಬಿಎಸ್‌ವೈ ಎಂದು ಸಿ.ಟಿ.ರವಿಗೂ ಗೊತ್ತಿದೆ. ಈ ರೀತಿ ಹೇಳಿಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಸಿಟಿ ರವಿಗೆ ಟಾಂಗ್​ ಕೊಟ್ಟರು.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ಮಾತನಾಡಿರುವ ವಿಜಯೇಂದ್ರ, ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಎತ್ತರಕ್ಕೆ ಬೆಳೆಯೊಕೆ ಸಾಧ್ಯ. ಸಿ.ಟಿ.ರವಿಯವರು ಹಿರಿಯರಿದ್ದಾರೆ. ಬಿ.ಎಸ್‌ ಯಡಿಯೂರಪ್ಪನವರು ಎಷ್ಟು ಹಿರಿಯರಿದ್ದಾರೆ. ಬಿಜೆಪಿ ಕಟ್ಟಿದ್ದು ಬಿಎಸ್ ವೈ ಅಂತ ಅವರಿಗೂ ಗೊತ್ತಿದೆ. ಈ ರೀತಿ ಹೇಳಿಕೆಗಳಿಗೆ ನಾನು ಉತ್ತರ ಕೊಡುವದಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಎಲ್ಲವನ್ನ ನಿರ್ಧರಿಸುತ್ತೆದೆ. ಪಕ್ಷ ನನಗೆ ನೀಡಿರುವ ಜವಾಬ್ದಾರಿಯನ್ನು ಮಾತ್ರ ನಿರ್ವಹಿಸ್ತಿದ್ದೇನೆ/ ಪಕ್ಷ ಹೇಳಿದ ಕಡೆ ಸ್ಪರ್ಧಿಸುತ್ತೇನೆ, ಬೇಡ ಅಂದ್ರೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಟಿ ರವಿ ಹೇಳಿದ್ದೇನು?

ಟಿಕೆಟ್ ನೀಡುವ ಬಗ್ಗೆ ಕುಟುಂಬದಲ್ಲಿ ತೀರ್ಮಾನವಾಗುವುದಿಲ್ಲ, ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ನಮ್ಮ ಪಕ್ಷದಲ್ಲಿ ಕಿಚನ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಸಿಕ್ಕಲ್ಲ. ಈಗ ವಿಜಯೇಂದ್ರ ಬಗ್ಗೆ ಕೇಳಿದ್ದೀರಿ. ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ ಎಂದು ಸಿಟಿ ರವಿ ನಿನ್ನೆ(ಮಾ.15) ವಿಜಯಪುರದಲ್ಲಿ ಹೇಳಿದ್ದರು. ಸಿಟಿ ರವಿ ಅವರ ಈ ಹೇಳಿಕೆಗೆ ಯಡಿಯೂರಪ್ಪನವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.


ತಾನು ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರು 2023 ರ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಇತ್ತೀಚಿಗೆ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದರು.