Karnataka Assembly Election 2023: ಬಿವೈ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ: ಬಿಎಸ್​ ಯಡಿಯೂರಪ್ಪ

ಪುತ್ರ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾನೆ. ವರುಣ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ ಸ್ಪರ್ಧಿಸಬೇಕೆಂದು ಒತ್ತಡ ಇದೆ. ಆದರೆ ವರುಣ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

Karnataka Assembly Election 2023: ಬಿವೈ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ: ಬಿಎಸ್​ ಯಡಿಯೂರಪ್ಪ
ಬಿಎಸ್​ ಯಡಿಯೂರಪ್ಪ
Follow us
ವಿವೇಕ ಬಿರಾದಾರ
|

Updated on:Mar 31, 2023 | 6:03 PM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Election 2023) ದಿನಾಂಕ ಘೋಷಣೆಯಾಗಿದ್ದು, ಬಿಜೆಪಿ (BJP) ಅಭ್ಯರ್ಥಿಗಳ ಪಟ್ಟಿ ಇನ್ನು ಬಿಡುಗಡೆಯಾಗಬೇಕಿದೆ. ಮೈಸೂರಿನ ವರುಣಾ (Varuna) ಕ್ಷೇತ್ರದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸ್ಪರ್ಧಿಸೋದು ಪಕ್ಕಾ ಆಗಿದ್ದು ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಬಿವೈ ವಿಜಯೇಂದ್ರ (BY Vijayendra) ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ನಿನ್ನೆ (ಮಾ.30) ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಸುಳಿವು ನೀಡಿದ್ದರು. ಆದರೆ ಈಗ ಯಾವುದೇ ಕಾರಣಕ್ಕೂ ಬಿವೈ ವಿಜಯೇಂದ್ರ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲ್ಲ ಎನ್ನುವ ಮೂಲಕ ಯುಟರ್ನ್​​ ಆಗಿದ್ದಾರೆ. ಆದರೆ ಅಂತಿಮ ಹಂತ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆವರೆಗು ಕಾದು ನೋಡಬೇಕಿದೆ.

ಇದನ್ನೂ ಓದಿ: ಬಿಜೆಪಿ ತೊರೆದು ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪುತ್ರ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾನೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸಬೇಕೆಂದು ಒತ್ತಡ ಇದೆ. ಆದರೆ ವರುಣ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧಿಸಬೇಕು ಎಂದು ಸೂಚಿಸಿದ್ದೇನೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧಿಸಬೇಕೆಂದು ವರಿಷ್ಠರಿಗೆ ಹೇಳುವೆ. ವಿಜಯೇಂದ್ರಗೂ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡು ಅಂತಾ ತಿಳಿಸ್ತೇನೆ. ಇನ್ನು 4-5 ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದರು. ಬಿ ವೈ ವಿಜಯೇಂದ್ರ ಅವರದ್ದು ಮೊದಲ ಚುನಾವಣೆಯಾಗಿದ್ದು, ಪ್ರಬಲ ಅಭ್ಯರ್ಥಿ ಎದರು ಮಗನನ್ನು ನಿಲ್ಲಿಸಿ ಸಂಕಷ್ಟಕ್ಕೆ ದೂಡುವುದಕ್ಕಿಂತ ಸೇಫ್​​ ಆಗಿ ಗೆದ್ದು ಬರಲಿ ಎಂದು ರಾಜಕೀಯ ಭವಿಷ್ಯದಿಂದ ಪುತ್ರನ ರಕ್ಷಣೆಗೆ  ಎಸ್​ ಯಡಿಯೂರಪ್ಪ ಮುಂದಾಗಿದ್ದಾರಂತೆ.

ಹುಲಿ ಜೊತೆ ಹುಲಿಯೆ ಸ್ಪರ್ಧೆ ಮಾಡಲಿ

ಮೈಸೂರು: ಹುಲಿ ಜೊತೆ ಹುಲಿಯೇ ಸ್ಪರ್ಧೆ ಮಾಡಲಿ. ಹುಲಿ ಜೊತೆ ಆಡು ಮರಿಯನ್ನು ಸ್ಪರ್ಧೆಗೆ ಬಿಡಬೇಡಿ. ಹುಲಿಯನ್ನು ಹೊಡೆಯಲು ಹುಲಿಯೆ ಬೇಕು. ಕ್ಷೇತ್ರಕ್ಕೆ ವಿಜಯೇಂದ್ರ ಬಂದರೆ ನಾನೇ 2 ಲಕ್ಷ ಕೊಡುತ್ತೇನೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ  ವರುಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ವೇಳೆ ಓರ್ವ ಕಾರ್ಯಕರ್ತ ಘೋಷಿಸಿದ್ದಾರೆ.

ವರುಣ ಅಪ್ಪ ಮಕ್ಕಳ ಪಕ್ಷ ಇದೆ. ಸಿದ್ದರಾಮಯ್ಯ ಜೊತೆ ಒಳ ಒಪ್ಪಂದ ಅನ್ನೋ ಕಳಂಕ ಇದೆ. ನೀವು ಸ್ಪರ್ಧೆ ಮಾಡಿದರೆ ಅದನ್ನು ತೊಡೆದು ಹಾಕಬಹುದು. ನೀವು ವರುಣ ಕ್ಷೇತ್ರಕ್ಕೆ ಬಂದರೆ ಸಿದ್ದರಾಮಯ್ಯ ಅವರನ್ನು ವರುಣದಲ್ಲಿ ಕಟ್ಟಿ ಹಾಕಬಹುದು. ರಾಜ್ಯಾದ್ಯಂತ ಅವರು ಓಡಾಡಲು ಸಾಧ್ಯವಾಗುವುದಿಲ್ಲ. ರಾಜ್ಯದಲ್ಲಿ ಈ ಮೂಲಕ ಹಲವು ಸ್ಥಾನ ಕಾಂಗ್ರೆಸ್ ಕಳೆದುಕೊಳ್ಳುತ್ತದೆ ಎಂದು ಕುರುಬ, ಎಸ್​ಸಿ ಸೇರಿ‌ ಬೇರೆ ಬೇರೆ ಸಮುದಾಯದವರು ಒತ್ತಾಯ ಮಾಡಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Fri, 31 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ