ಬಿಎಸ್​ವೈ ಪೂರ್ಣಾವಧಿ ಸಿಎಂ ಆಗಿದ್ದರೆ ಇನ್ನಷ್ಟು ಅಭಿವೃದ್ಧಿಯಾಗುತ್ತಿತ್ತು; ಚುನಾವಣೆ ಹೊತ್ತಲ್ಲೇ ವಿಜಯೇಂದ್ರ ಹೇಳಿಕೆ

ಬಿಎಸ್​​​ ಯಡಿಯೂರಪ್ಪ ಅವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿದ್ದಿದ್ದರೆ ರಾಜ್ಯವು ಇನ್ನಷ್ಟು ಅಭಿವೃದ್ಧಿ ಕಾಣುತ್ತಿತ್ತು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬಿಎಸ್​ವೈ ಪೂರ್ಣಾವಧಿ ಸಿಎಂ ಆಗಿದ್ದರೆ ಇನ್ನಷ್ಟು ಅಭಿವೃದ್ಧಿಯಾಗುತ್ತಿತ್ತು; ಚುನಾವಣೆ ಹೊತ್ತಲ್ಲೇ  ವಿಜಯೇಂದ್ರ ಹೇಳಿಕೆ
ಬಿಎಸ್​​ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ
Follow us
Ganapathi Sharma
|

Updated on:Apr 07, 2023 | 7:33 PM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ನಾಯಕರೂ ಇದಕ್ಕೆ ಹೊರತಲ್ಲ. ಮುಖ್ಯಮಂತ್ರಿ ಹುದ್ದೆಗೆ ಸ್ವ ಇಚ್ಛೆಯಿಂದಲೇ ರಾಜೀನಾಮೆ ನೀಡಿದ್ದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಪಕ್ಷದ ಹಿರಿಯ ನಾಯಕ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿಎಸ್​​ ಯಡಿಯೂರಪ್ಪ (BS Yediyurappa) ಹಲವು ಬಾರಿ ಹೇಳಿದ್ದಾರೆ. ಜತೆಗೆ, ರಾಜ್ಯದ ಹಲವು ಕಡೆ ಪ್ರಚಾರ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಅವರ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರಗೆ (BY Vijayendra) ಶಿಕಾರಿಪುರದಿಂದ ಟಿಕೆಟ್​ ದೊರೆಯುವುದು ಬಹುತೇಕ ಖಚಿತವಾಗಿದೆ. ಈ ಮಧ್ಯೆ, ‘ನ್ಯೂಸ್​​ 9’ಗೆ ಎಕ್ಸ್​ಕ್ಲೂಸಿಬವ್ ಸಂದರ್ಶನ ನೀಡಿರುವ ವಿಜಯೇಂದ್ರ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಬಿಎಸ್​​​ ಯಡಿಯೂರಪ್ಪ ಅವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿದ್ದಿದ್ದರೆ ರಾಜ್ಯವು ಇನ್ನಷ್ಟು ಅಭಿವೃದ್ಧಿ ಕಾಣುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಇರಲು ಅವರಿಂದಾಗಲಿಲ್ಲ ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಯಡಿಯೂರಪ್ಪನವರು ಈ ವಿಚಾರದಲ್ಲಿ ಏನೂ ಮಾತನಾಡಿಲ್ಲ. ಆದರೆ, ಅವರು ಕರ್ನಾಟಕದ ಬಗ್ಗೆ ಹೊಂದಿದ್ದ ದೂರದೃಷ್ಟಿಯಿಂದಾಗಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಬೇಕಾದ ಒಬ್ಬ ನಾಯಕ ಎಂದು ಎಲ್ಲರೂ ಭಾವಿಸಿದರು. ಅವರು ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯಲಕ್ಷ್ಮಿ ಯೋಜನೆ, ಶಾಲಾ ಮಕ್ಕಳಿಗೆ ಬೈಸಿಕಲ್ ಯೋಜನೆ ಸೇರಿದಂತೆ ಅನೇಕ ವಿಶಿಷ್ಟ ಯೋಜನೆಗಳನ್ನು ನೀಡಿದ್ದರು. ಹಾಗಾಗಿಯೇ ಇಂದಿಗೂ ಜನ ಯಡಿಯೂರಪ್ಪ ಅವರನ್ನು ಗೌರವಿಸುತ್ತಿದ್ದಾರೆ. ಬಹುಶಃ ಅವರು ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದರೆ, ನೀವು ರಾಜ್ಯಾದ್ಯಂತ ಇನ್ನಷ್ಟು ಅಭಿವೃದ್ಧಿಯನ್ನು ಕಾಣುತ್ತಿದ್ದಿರಿ ಎಂದು ಹೇಳಿದ್ದಾರೆ.

ಸ್ವಜನ ಪಕ್ಷಪಾತದ ಆರೋಪಗಳನ್ನು ಅಲ್ಲಗಳೆದಿರುವ ವಿಜಯೇಂದ್ರ, ತಮ್ಮನ್ನು ಶಿಕಾರಿಪುರದ ಅಭ್ಯರ್ಥಿ ಎಂದು ಯಡಿಯೂರಪ್ಪ ಘೋಷಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: BS Yediyurappa: ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಯಾರೆಂಬ ತೀರ್ಮಾನ; ಯಡಿಯೂರಪ್ಪ

ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಬಿಟ್ಟರೆ 80 ವರ್ಷ ವಯಸ್ಸು ದಾಟಿದವರು ಸಕ್ರಿಯ ರಾಜಕಾರಣದಲ್ಲಿ ಕಾಣಿಸುವುದು ವಿರಳ. ಯಡಿಯೂರಪ್ಪ ನಿರಂತರ ಪ್ರಚಾರದಲ್ಲಿಯೂ ತೊಡಗಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಅದು ಅವr ಶಕ್ತಿ. ವಯಸ್ಸಿಗೂ ಯಡಿಯೂರಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ. 81ರ ಹರೆಯದಲ್ಲೂ ಅವರು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಅವರ ಹೆಸರು ಆವರಿಸಿದೆ. ಇಂದಿಗೂ ಜನರು ಅವರನ್ನು ಪ್ರೀತಿಸುತ್ತಾರೆ ಮತ್ತು ಅದು ಅವರ ಶಕ್ತಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಎಸ್​ವೈ ನಿವಾಸಕ್ಕೆ ತೆರಳಿ ಬೆಳಗ್ಗಿನ ಉಪಾಹಾರ ಸೇವಿಸಿದ್ದರು. ಆ ಸಂದರ್ಭದಲ್ಲಿ ಅಮಿತ್ ಶಾ ಅವರಿಗೆ ಬಿಎಸ್​ವೈ ಹೂಗುಚ್ಛ ನೀಡಲು ಮುಂದಾಗಿದ್ದರು. ಆದರೆ, ಅದನ್ನು ಸ್ವೀಕರಿಸದ ಶಾ, ಹೂಗುಚ್ಛವನ್ನು ವಿಜಯೇಂದ್ರ ಕೈಗೆ ನೀಡುವಂತೆ ಸೂಚಿಸಿ ಅವರಿಂದ ಸ್ವೀಕರಿಸಿದ್ದರು. ನಂತರ ವಿಜಯೇಂದ್ರ ಅವರನ್ನು ತಬ್ಬಿಕೊಂಡು ಬೆನ್ನು ತಟ್ಟಿದ್ದರು. ಇದು ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:32 pm, Fri, 7 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ