AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರು ಬಡವರಾಗಿಯೇ ಇರಲಿ ಎಂದು ಬಯಸಿದ್ದ ಕಾಂಗ್ರೆಸ್; ವಿಜಯೇಂದ್ರ ವಾಗ್ದಾಳಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗುತ್ತಿದ್ದಂತೆಯೇ ಮೈಸೂರು ಜಿಲ್ಲೆಯ ವಿಧಾನಸಭೆ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Ganapathi Sharma
|

Updated on:Apr 21, 2023 | 10:17 PM

Share

ಮೈಸೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗುತ್ತಿದ್ದಂತೆಯೇ ಮೈಸೂರು ಜಿಲ್ಲೆಯ ವಿಧಾನಸಭೆ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಆರ್ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಉಚಿತ ಘೋಷಣೆಗಳ ಮೂಲಕ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹೊರಟಿದೆ. ಆದರೆ ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಬಡವರು ಬಡವರಾಗಿಯೇ ಇರಲಿ ಎಂದು ಬಯಸಿತ್ತು ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್​ನವರು ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರು ಹೇಳಿಕೊಂಡು ಓಡಾಡುತ್ತಾರೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಿದರು. ಅಂಬೇಡ್ಕರ್ ಮೃತಪಟ್ಟಾಗ ಅಂತ್ಯ ಸಂಸ್ಕಾರಕ್ಕೂ ಕಾಂಗ್ರೆಸ್‌ನವರು ಜಾಗ ಕೊಡಲಿಲ್ಲ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ದೂರದೃಷ್ಟಿ ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿಯನ್ನು ಅಲ್ಪಸಂಖ್ಯಾತ ವಿರೋಧಿ ಎನ್ನುತ್ತಾರೆ. ಆದರೆ ಕಾಂಗ್ರೆಸ್ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಏನೂ ಕೊಡುಗೆ ನೀಡಿಲ್ಲ. ಅಲ್ಪಸಂಖ್ಯಾತರನ್ನು ಕೇವಲ ಓಟ್ ಬ್ಯಾಂಕ್ ಮಾಡಿಕೊಂಡಿತ್ತು ಅಷ್ಟೆ. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮನೆಯ ಗೂಡು ಸೇರಿಕೊಳ್ಳುತ್ತಾರೆ ಎಂದು ಕೊಂಡಿದ್ದರು. ಆದರೂ ವಿರಮಿಸದ ಯಡಿಯೂರಪ್ಪ ಅವರು ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದ ಉದ್ಧಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರ ಉತ್ಸಾಹ ಪಕ್ಷದ ಕಾರ್ಯಕರ್ತರಲ್ಲೂ ಹುರುಪು ತಂದಿದೆ. ರಾಜ್ಯಾದ್ಯಂತ ಲಕ್ಷಾಂತರ ಕಾರ್ಯಕರ್ತರು ಅವರ ಜತೆಗೆ ಇದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕಾರ್ಯಕರ್ತರು ಪಕ್ಷದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ಅಧಿಕಾರಕ್ಕೆ ಬಂದಿದೆ ಎಂದು ವಿಜಯೇಂದ್ರ ಹೇಳಿದರು.

ಇದನ್ನೂ ಓದಿ: ನನ್ನ ಉಸಿರು ಇರೋವರೆಗೂ ವರುಣ ಜನರನ್ನು ಕೈಬಿಡುವುದಿಲ್ಲ ಎಂದ ಬಿವೈ ವಿಜಯೇಂದ್ರ

‘ಪಕ್ಷ ಬಿಟ್ಟವರ ಬಗ್ಗೆ ಚಿಂತೆ ಬೇಡ, ಬಿಜೆಪಿ ಕಾರ್ಯಕರ್ತರ ಪಕ್ಷ’

ಕಾಂಗ್ರೆಸ್ ಹಾಗೂ ಜೆಡಿಎಸ್​ನವರು ಏನೇ ಬೊಬ್ಬೆ ಹೊಡೆದರೂ ರಾಜ್ಯದ ಜನರು ಅತಂತ್ರ ವಿಧಾನಸಭೆಗೆ ಅವಕಾಶ ಮಾಡಿಕೊಡುವುದಿಲ್ಲ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದ್ದರೆ ಒಳಿತು. ಡಬಲ್ ಇಂಜಿನ್ ಸರ್ಕಾರ ಬೇಕೆಂದು ಜನರು ಬಯಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಯಾರು ಪಕ್ಷ ಬಿಟ್ಟು ಹೋಗಿದ್ದರೂ ಚಿಂತಿಸುವ ಅಗತ್ಯವಿಲ್ಲ. ಬಿಜೆಪಿ ಲಕ್ಷಾಂತರ ಕಾರ್ಯಕರ್ತರನ್ನು ಆಧರಿಸಿರುವ ಪಕ್ಷವಾಗಿದೆ. ಹೀಗಾಗಿ ಕೆಲ ನಾಯಕರು ಪಕ್ಷ ಬಿಟ್ಟು ಹೋಗಿದ್ದರೂ ಸಹ ಯಾರು ಕೂಡ ಭಯಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

‘ಹಳೇ ಮೈಸೂರು ಭಾಗದಲ್ಲಿ ತ್ರಿಕೋನ ಸ್ಪರ್ಧೆ’

ಹಳೇ ಮೈಸೂರು ಭಾಗವನ್ನು ಗಂಭೀರವಾಗಿ ಪರಿಗಣಿಸಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮೈಸೂರು ಚಾಮರಾಜನಗರ ಜಿಲ್ಲೆಗಳ 15 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:16 pm, Fri, 21 April 23

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್