Byadagi Election Results: ಬ್ಯಾಡಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ವಿರೂಪಾಕ್ಷಪ್ಪ ಬಳ್ಳಾರಿ, ಬಸವರಾಜ್ ಎನ್ ಶಿವಣ್ಣನರ್ ಮಧ್ಯೆ ಪೈಪೋಟಿ
Byadgi Assembly Election Result 2023 Live Counting Updates: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿರೂಪಾಕ್ಷಪ್ಪ ಬಳ್ಳಾರಿ, ಕಾಂಗ್ರೆಸ್ನಿಂದ ಬಸವರಾಜ್ ಎನ್ ಶಿವಣ್ಣನರ್ ಹಾಗೂ ಜೆಡಿಎಸ್ನಿಂದ ಸುನೀತಾ ಎಂ ಪೂಜಾರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.
Byadagi Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಬ್ಯಾಡಗಿ ವಿಧಾನಸಭಾ ಕ್ಷೇತ್ರದಿಂದ (Byadgi Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸ್ಪರ್ಧಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ 91,721 ಮತಗಳನ್ನ ಪಡೆದಿದ್ದು, 21,271 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಬಾರಿ ಕೂಡ ಇವರಿಗೆ ಟಿಕೆಟ್ ನೀಡಲಾಗಿದ್ದು, ಭರ್ಜರಿ ಪ್ರಚಾರವನ್ನ ಕೂಡ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಶಾಸಕನವಾಗುವ ಭರವಸೆ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನಿಂದ ಬಸವರಾಜ್ ಎನ್ ಶಿವಣ್ಣನರ್ ಸ್ಪರ್ಧಿಸಿದ್ದು, ಈ ಹಿಂದೆ 2013 ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದರು. ಅದಾದ ಬಳಿಕ ಇದೀಗ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗಿಳಿದಿದ್ದಾರೆ. ಇನ್ನು ಕ್ಷೇತ್ರದಲ್ಲಿ ಉತ್ತಮ ಜನಬೆಂಬಲ ಹೊಂದಿರುವ ಇವರು ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಜೆಡಿಎಸ್ ಪಕ್ಷದಿಂದ ಸುನೀತಾ ಎಂ ಪೂಜಾರ್ ಸ್ಪರ್ಧಿಸಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಇನ್ನು ಕಾಂಗ್ರೆಸ್ನಿಂದ ಬಸವರಾಜ್ ಎನ್ ಶಿವಣ್ಣನರ್ ಹಾಗೂ ಹಾಲಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಅವರಿಗೆ ನೇರಾನೇರ ಸ್ಪರ್ಧೆ ಏರ್ಪಟ್ಟಿದ್ದು, ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಹಿಂದೆ ಇಬ್ಬರು ಕೂಡ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದು. ಈ ಬಾರಿಯ ಕದನ ರೋಚಕವಾಗಿದೆ.