Challakere Election Results: ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್​ನ ಟಿ ರಘುಮೂರ್ತಿ

Challakere Assembly Election Results 2023 Live Counting Updates: 2013ರಿಂದ ಕಾಂಗ್ರೆಸ್​ನ ಟಿ ರಘುಮೂರ್ತಿ ಅವರ ಹಿಡಿತದಲ್ಲಿರುವ ಚಳ್ಳಕೆರೆಯಲ್ಲಿ ಜೆಡಿಎಸ್​ 2ನೇ ಸ್ಥಾನದಲ್ಲಿದ್ದು, ಬಿಜೆಪಿ ನಂತರದ ಸ್ಥಾನದಲ್ಲಿದೆ.

Challakere Election Results: ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್​ನ ಟಿ ರಘುಮೂರ್ತಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಚನಾವಣೆ ಫಲಿತಾಂಶ

Updated on: May 13, 2023 | 2:58 AM

Challakere Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಫೈಟ್ ಏರ್ಪಡಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಟಿ ರಘುಮೂರ್ತಿ, ಜೆಡಿಎಸ್​ನಿಂದ ರವೀಶ್, ಬಿಜೆಪಿಯಿಂದ ಅನಿಲ್ ಕುಮಾರ್ ಹಾಗೂ ಆಮ್ ಆದ್ಮಿ ಪಕ್ಷದಿಂದ ಪಾಪಣ್ಣ ಕಣದಲ್ಲಿದ್ದಾರೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಅವರು ಗೆದ್ದಿದ್ದರು. 2018ರಲ್ಲೂ ಅವರು 13,539 ಮತಗಳ ಅಂತರದಿಂದ ಜೆಡಿಎಸ್​ನ ರವೀಶ್ ಅವರನ್ನು ಸೋಲಿಸಿದ್ದರು. ರಘುಮೂರ್ತಿ ಅವರು 72874 ಮತಗಳನ್ನು ಪಡೆದಿದ್ದರೆ, ರವೀಶ್ ಅವರು 59,335 ಹಾಗೂ ಬಿಜೆಪಿಯ ಕೆಟಿ ಕುಮಾರಸ್ವಾಮಿ ಅವರು 33471 ಮತಗಳನ್ನು ಪಡೆದಿದ್ದರು.

ಪ್ರಸಕ್ತ ಚುನಾವಣೆಯಲ್ಲಿ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಅವರು ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇತ್ತ ಜೆಡಿಎಸ್ ಅಭ್ಯರ್ಥಿ ರವೀಶ್ ಅವರು ರಘುಮೂರ್ತಿ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ