AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar Election Results: ಚಾಮರಾಜನಗರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ವಿ. ಸೋಮಣ್ಣಗೆ ಸೋಲು; ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಿನ ನಗೆ

Chamarajanagar Assembly Election Results 2023 Live Counting Updates: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಿ ಪುಟ್ಟರಂಗಶೆಟ್ಟಿ ಗೆಲುವು ಸಾಧಿಸಿದ್ದಾರೆ, ಬಿಜೆಪಿಯ ವಿ. ಸೋಮಣ್ಣಗೆ ಸೋಲಿನ ಆಘಾತವಾಗಿದೆ, ಮತ ಎಣಿಕೆಯ ವಿವರ ಇಲ್ಲಿದೆ.

Chamarajanagar Election Results: ಚಾಮರಾಜನಗರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ವಿ. ಸೋಮಣ್ಣಗೆ ಸೋಲು; ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಿನ ನಗೆ
ಕಾಂಗ್ರೆಸ್​​, ಬಜೆಪಿ
ವಿವೇಕ ಬಿರಾದಾರ
| Edited By: |

Updated on:May 13, 2023 | 12:27 PM

Share

Chamarajanagar Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ (Chamarajanagar Assembly Constituency) ಕಾಂಗ್ರೆಸ್​ನಿಂದ ಸಿ ಪುಟ್ಟರಂಗಶೆಟ್ಟಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಸಚಿವ ವಿ ಸೋಮಣ್ಣಗೆ ಸೋಲಿನ ಆಘಾತ ಸಿಕ್ಕಿದೆ. ಜೆಡಿಎಸ್​​ನಿಂದ ಮಲ್ಲಿಕಾರ್ಜುನ್​​ ಸ್ವಾಮಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಿದೆ.

ಚಾಮರಾಜನಗರದಲ್ಲಿ ಮೊದಲಿಗೆ ಬಿಜೆಪಿ ಒಳಗಡಯೇ ಭಿನ್ನಾಭಿಪ್ರಾಯ ಬುಗಿಲೆದ್ದಿತ್ತು. ಪಕ್ಷದ ಜಿಲ್ಲಾಧ್ಯಕ್ಷ ರುದ್ರೇಶ್​ ವಿ.ಸೋಮಣ್ಣರ ವಿರುದ್ಧ ಬಂಡಾಯವೆದ್ದು, ಗೋ ಬ್ಯಾಕ್​​ ಸೋಮಣ್ಣ ಅಭಿಯಾನ ನಡೆಸಲು ಮುಂದಾಗಿದ್ದರು. ಆದರೆ ಇದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮತ್ತು ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸಭೆ ನಂತರ ಶಮನವಾಯಿತು. 15 ಚುನಾವಣೆಗಳನ್ನು ಎದುರಿ ಸಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚು ಅಂದರೆ 8 ಬಾರಿ ಗೆದ್ದಿದ್ದಾರೆ. ಕ್ಷೇತ್ರದಲ್ಲಿ ಸಿ ಪುಟ್ಟರಂಗಶೆಟ್ಟಿ ಹ್ಯಾಟ್ರಿಕ್​​ ವಿಜಯಸಾಧಿಸಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್​ ಮತ್ತು ಬಿಜೆಪಿ ಮಧ್ಯೆ ಪ್ರಬಲ ಪೈಪೋಟಿ ಇದೆ.

1999ರಲ್ಲಿ ಗುರುಸ್ವಾಮಿ ಮೊದಲ ಬಾರಿಗೆ ಚಾಮರಾಜನಗರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಲು ಸಾಧ್ಯ ಆಗಿಲ್ಲ.‌ ಇದೀಗ 23 ವರ್ಷದ ಬಳಿಕ ಕ್ಷೇತ್ರದಲ್ಲಿ ಕಮಲ ಅರಳಿಸಲು ಪ್ರಬಲ ನಾಯಕ ವಿ.ಸೋಮಣ್ಣ ಅವರನ್ನೇ ಕಣಕ್ಕಿಳಿಸಲು ಮುಂದಾಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:04 am, Sat, 13 May 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ