
Chamarajanagar Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ (Chamarajanagar Assembly Constituency) ಕಾಂಗ್ರೆಸ್ನಿಂದ ಸಿ ಪುಟ್ಟರಂಗಶೆಟ್ಟಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಸಚಿವ ವಿ ಸೋಮಣ್ಣಗೆ ಸೋಲಿನ ಆಘಾತ ಸಿಕ್ಕಿದೆ. ಜೆಡಿಎಸ್ನಿಂದ ಮಲ್ಲಿಕಾರ್ಜುನ್ ಸ್ವಾಮಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಿದೆ.
ಚಾಮರಾಜನಗರದಲ್ಲಿ ಮೊದಲಿಗೆ ಬಿಜೆಪಿ ಒಳಗಡಯೇ ಭಿನ್ನಾಭಿಪ್ರಾಯ ಬುಗಿಲೆದ್ದಿತ್ತು. ಪಕ್ಷದ ಜಿಲ್ಲಾಧ್ಯಕ್ಷ ರುದ್ರೇಶ್ ವಿ.ಸೋಮಣ್ಣರ ವಿರುದ್ಧ ಬಂಡಾಯವೆದ್ದು, ಗೋ ಬ್ಯಾಕ್ ಸೋಮಣ್ಣ ಅಭಿಯಾನ ನಡೆಸಲು ಮುಂದಾಗಿದ್ದರು. ಆದರೆ ಇದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸಭೆ ನಂತರ ಶಮನವಾಯಿತು. 15 ಚುನಾವಣೆಗಳನ್ನು ಎದುರಿ ಸಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚು ಅಂದರೆ 8 ಬಾರಿ ಗೆದ್ದಿದ್ದಾರೆ. ಕ್ಷೇತ್ರದಲ್ಲಿ ಸಿ ಪುಟ್ಟರಂಗಶೆಟ್ಟಿ ಹ್ಯಾಟ್ರಿಕ್ ವಿಜಯಸಾಧಿಸಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪ್ರಬಲ ಪೈಪೋಟಿ ಇದೆ.
1999ರಲ್ಲಿ ಗುರುಸ್ವಾಮಿ ಮೊದಲ ಬಾರಿಗೆ ಚಾಮರಾಜನಗರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಲು ಸಾಧ್ಯ ಆಗಿಲ್ಲ. ಇದೀಗ 23 ವರ್ಷದ ಬಳಿಕ ಕ್ಷೇತ್ರದಲ್ಲಿ ಕಮಲ ಅರಳಿಸಲು ಪ್ರಬಲ ನಾಯಕ ವಿ.ಸೋಮಣ್ಣ ಅವರನ್ನೇ ಕಣಕ್ಕಿಳಿಸಲು ಮುಂದಾಗಿದೆ.
Published On - 4:04 am, Sat, 13 May 23