ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಕಾಂಗ್ರೆಸ್​ಗೆ ಬಿಗ್ ಶಾಕ್, ಜೆಡಿಎಸ್ ಸೇರುವುದಾಗಿ ಘೋಷಿಸಿದ ಕೈ​ ಸಂಭಾವ್ಯ ಅಭ್ಯರ್ಥಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಉದ್ಯಮಿ ಇದೀಗ ಜೆಡಿಎಸ್​ ಸೇರುವುದಾಗಿ ಘೋಷಿಸಿದ್ದಾರೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲೇ ಹಿನ್ನಡೆಯಾದಂತಾಗಿದೆ. ಅಲ್ಲದೇ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಕಾಂಗ್ರೆಸ್​ಗೆ ಬಿಗ್ ಶಾಕ್, ಜೆಡಿಎಸ್ ಸೇರುವುದಾಗಿ ಘೋಷಿಸಿದ ಕೈ​ ಸಂಭಾವ್ಯ ಅಭ್ಯರ್ಥಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್Image Credit source: hindustantimes.com
Follow us
ರಮೇಶ್ ಬಿ. ಜವಳಗೇರಾ
|

Updated on: Mar 26, 2023 | 1:49 PM

ರಾಮನಗರ: ಚನ್ನಪಟ್ಟಣ ಕ್ಷೇತ್ರದ(Channapatna Constituency )ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನಗೌಡ( prasanna Gowda) ಅವರು ಜೆಡಿಎಸ್ (JDS)​ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಚನ್ನಪಟ್ಟಣ ಟಿಕೆಟ್ ಸಿಗುವುದು ಅನುಮಾನ ಎನ್ನುವ ಸುಳಿವು ಸಿಗುತ್ತಿದ್ದಂತೆಯೇ ಪ್ರಸನ್ನಗೌಡ ಕಾಂಗ್ರೆಸ್ ತೊರೆದು ಜೆಡಿಎಸ್​ನತ್ತ ಮುಖ ಮಾಡಿದ್ದಾರೆ. ಇಂದು(ಮಾರ್ಚ್​ 26) ಸಂಜೆ ಮೈಸೂರಿನಲ್ಲಿ ನಡೆಯಲಿರುವ ಜೆಡಿಎಸ್​ ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಅಧಿಕೃತವಾಗಿ ಕೈ ಬಿಟ್ಟು ತೆನೆ ಹಿಡಿಯಲಿದ್ದಾರೆ. ಇದರಿಂದ ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ತವರು ಜಿಲ್ಲೆಯಲ್ಲೇ ಕಾಂಗ್ರೆಸ್​ಗೆ ಬಿಗ್ ಶಾಕ್ ಆಗಿದೆ.

ಇದನ್ನೂ ಓದಿ: Karnataka Polls: ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

ಪ್ರಸನ್ನ ಗೌಡ ಹೇಳಿದ್ದೇನು?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಪ್ರಸನ್ನ ಗೌಡ ಜೆಡಿಎಸ್ ಸೇರುವುದಾಗಿ ಘೋಷಿಸಿದ್ದಾರೆ. ಮೈಸೂರಿನಲ್ಲಿ ನಡೆದಿರುವ ಪಂಚರತ್ನ ಯಾತ್ರೆ ಸಮಾರೋಪಕ್ಕೂ‌ ಮುನ್ನ ಕುಮಾರಸ್ವಾಮಿ ಎದುರು ಅವರು ಈ ಘೋಷಣೆ ಮಾಡಿದರು. ಈ ವೇಳೆ ಮಾಧ್ಯಮಗಳಿಗೆ ಮಾತನಾಡಿದ ಪ್ರಸನ್ನ ಗೌಡ, ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಬೇಕಿತ್ತು. ಆದ್ರೆ, ಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತಿದ್ದೇನೆ. ಆ ಪಕ್ಷದಲ್ಲಿ ಸ್ಪಷ್ಟ ನಿಲುವು ಇಲ್ಲ. ಸುಳ್ಳು ಘೋಷಣೆಗಳನ್ನು ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ನಾಯಕತ್ವ ಮೆಚ್ಚಿಕೊಂಡು ಜೆಡಿಎಸ್ ಸೇರುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ (Congress) ಮೊದಲ ಪಟ್ಟಿಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಪೈಕಿ ಮೂರು ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದ್ರೆ, ಚನ್ನಪಟ್ಟಣ ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗದ ಕಾರಣ ಮಾಜಿ ಸಚಿವ ಸಿಪಿ ಯೋಗೇಶ್ವರ್‌ (CP Yogeshwar) ಗೆ ಕೈ ನಾಯಕರು ಗಾಳ ಹಾಕಿದ್ದು, ಕೊನೆ ಕ್ಷಣದಲ್ಲಿ ಸಿಪಿವೈ ಕಾಂಗ್ರೆಸ್ ಸೇರ್ತಾರಾ ಎಂಬ ಪ್ರಶ್ನೆ ಹುಟ್ಟುಹಾಕಿದೆ. ಅಲ್ಲದೇ ನಟಿ ರಮ್ಯಾ ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಟಿಕೆಟ್​ ಸಿಗದಿರುವುದು ಸುಳಿವು ಸಿಗುತ್ತಿದ್ದಂತೆಯೇ ಚನ್ನಪಟ್ಟಣ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನ ಗೌಡ ಜೆಡಿಎಸ್ ಸೇರುವ ನಿರ್ಧಾರ ಪ್ರಕಟಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್​ ಸಂಭಾವ್ಯ ಅಭ್ಯರ್ಥಿ ಎಂದು ಬಿಂಬಿತರಾಗಿದ್ದ ಪ್ರಸನ್ನ ಗೌಡ ಕ್ಷೇತ್ರದಾದ್ಯಂತ ಓಡಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಈ ಹಿಂದೆ ಸ್ವತಃ ಸಂಸದ ಡಿಕೆ ಸುರೇಶ್​ ಸಹ ಸಭೆಯೊಂದರಲ್ಲಿ ಪ್ರಸನ್ನ ಗೌಡ ಅವರ ಹೆಸರನ್ನು ಹೇಳಿ ಅವರೇ ಅಭ್ಯರ್ಥಿ ಎಂದು ಘೋಷಿಸಿದ್ದರು. ಇನ್ನು ಉದ್ಯಮಿ ಪ್ರಸನ್ನ ಪಿ.ಗೌಡ ನೀವು ನನಗೆ ಹಾಕುವ ಮತ ಡಿ.ಕೆ.ಶಿವಕುಮಾರ್‌ ಅವರಿಗೆ ಮತ ಹಾಕಿದಂತೆ ಎಂದು ಹೇಳುವ ಮೂಲಕ ನಾನೇ ಅಭ್ಯರ್ಥಿ ಎಂದು ನೇರವಾಗಿ ಘೋಷಿಸಿಕೊಂಡಿದ್ದರು. ಇಷ್ಟಾದರೂ ಪ್ರಸನ್ನಗೌಡಗೆ ಟಿಕೆಟ್ ಫೈನಲ್ ಮಾಡದೇ ಕಾಂಗ್ರೆಸ್​ ಕಾದುನೋಡುವ ತಂತ್ರ ಅನುಸರಿಸಿದೆ. ಇದರಿಂದ ಮನನೊಂದು ಪ್ರಸನ್ನಗೌಡ ಕಾಂಗ್ರೆಸ್​ ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್​​ಗೆ ತವರು ಜಿಲ್ಲೆಯಲ್ಲೇ ಹಿನ್ನಡೆಯಾದಂತಾಗಿದೆ.

ಹಾಗಾದ್ರೆ, ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಯಾರು? ಕಾಂಗ್ರೆಸ್​ ಟಿಕೆಟ್​​ನಿಂದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ಯೋಗೇಶ್ವರ್​  ಸ್ಪರ್ಧೆ ಮಾಡುತ್ತಾರಾ| ಇಲ್ಲ ಕುಮಾರಸ್ವಾಮಿ ವಿರುದ್ಧ ನಟಿ ರಮ್ಯಾ ಅವರನ್ನು ಕಾಂಗ್ರೆಸ್​ ಕಣಕ್ಕಿಳಿಸುತ್ತಾ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ