Sign In

By signing in or creating an account, you agree with Associated Broadcasting Company's Terms & Conditions and Privacy Policy.

Channapatna Election 2023 Winner: ಚನ್ನಪಟ್ಟಣದಲ್ಲಿ ಗೆಲುವಿನ ನಗೆ ಬೀರಿದ ಹೆಚ್​ಡಿ ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ 96,592 ಮತಗಳ ಮೂಲಕ 15,915 ಮತಗಳ ಅಂತರದಲ್ಲಿ ಗೆದ್ದುಬೀಗಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 80,677 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ 15,374 ಮತಗಳನ್ನು ಪಡೆದಿದ್ದಾರೆ.

Channapatna Election 2023 Winner: ಚನ್ನಪಟ್ಟಣದಲ್ಲಿ ಗೆಲುವಿನ ನಗೆ ಬೀರಿದ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on: May 13, 2023 | 4:51 PM

ರಾಮನಗರ: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ 96,592 ಮತಗಳ ಮೂಲಕ 15,915 ಮತಗಳ ಅಂತರದಲ್ಲಿ ಗೆದ್ದುಬೀಗಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 80,677 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ 15,374 ಮತಗಳನ್ನು ಪಡೆದಿದ್ದಾರೆ. 2018ರ ಚುನಾವಣೆಯಲ್ಲಿ 21 ಸಾವಿರ ಮತಗಳ ಅಂತರದಿಂದ ಹೆಚ್.ಡಿ.ಕೆ. ಗೆಲುವು ಸಾಧಿಸಿದ್ದರು. ಈ ಬಾರಿ 15,915 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ಇನ್ನು ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಜಿಲ್ಲೆಯಲ್ಲಿ ಪ್ರತ್ಯೇಕ ಮತ ಬ್ಯಾಂಕ್‌ ಇತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 2,30,327 ಮತದಾರರಲ್ಲಿ 1,96,408 ಮತ ಚಲಾವಣೆ ಮಾಡಿದ್ದಾರೆ. ಇನ್ನು ಚುನಾವಣೆ ಫಲಿತಾಂಶದ ಬಗ್ಗೆ ಟ್ವಿಟರ್ ಮೂಲಕ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Channapatna Assembly Election: ಚನ್ನಪಟ್ಟಣ ಕ್ಷೇತ್ರ ನೋಟ, ಇಲ್ಲಿ ಗೆಲುವು ಯಾರದು? ಮತದಾರನ ಆಯ್ಕೆ ಏನು?

ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜೊತೆಯಲ್ಲೇ ಇರುತ್ತೇನೆ ಎಂದು ಜೆಡಿಎಸ್‌ ನಾಯಕ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜೊತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ