ರಾಮನಗರ: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ 96,592 ಮತಗಳ ಮೂಲಕ 15,915 ಮತಗಳ ಅಂತರದಲ್ಲಿ ಗೆದ್ದುಬೀಗಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 80,677 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ 15,374 ಮತಗಳನ್ನು ಪಡೆದಿದ್ದಾರೆ. 2018ರ ಚುನಾವಣೆಯಲ್ಲಿ 21 ಸಾವಿರ ಮತಗಳ ಅಂತರದಿಂದ ಹೆಚ್.ಡಿ.ಕೆ. ಗೆಲುವು ಸಾಧಿಸಿದ್ದರು. ಈ ಬಾರಿ 15,915 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.
ಇನ್ನು ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಜಿಲ್ಲೆಯಲ್ಲಿ ಪ್ರತ್ಯೇಕ ಮತ ಬ್ಯಾಂಕ್ ಇತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 2,30,327 ಮತದಾರರಲ್ಲಿ 1,96,408 ಮತ ಚಲಾವಣೆ ಮಾಡಿದ್ದಾರೆ. ಇನ್ನು ಚುನಾವಣೆ ಫಲಿತಾಂಶದ ಬಗ್ಗೆ ಟ್ವಿಟರ್ ಮೂಲಕ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: Channapatna Assembly Election: ಚನ್ನಪಟ್ಟಣ ಕ್ಷೇತ್ರ ನೋಟ, ಇಲ್ಲಿ ಗೆಲುವು ಯಾರದು? ಮತದಾರನ ಆಯ್ಕೆ ಏನು?
ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜೊತೆಯಲ್ಲೇ ಇರುತ್ತೇನೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜೊತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು. 1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 13, 2023