AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pradeep Eshwar: ಚಿಕ್ಕಬಳ್ಳಾಪುರ ನೂತನ ಶಾಸಕ ಪ್ರದೀಪ್‌ ಈಶ್ವರ್‌ ಸಾಕು ತಾಯಿ ನಿಧನ

ಕಾಂಗ್ರೆಸ್​ನ ನೂತನ ಶಾಸಕ ಪ್ರದೀಶ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ ಇಂದು ನಿಧನರಾಗಿದ್ದಾರೆ. ಸಿಎಂ ಮತ್ತು ಡಿಸಿಎಂ ಸೇರಿದಂತೆ ಕೆಲ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದಾರೆ. ಸದ್ಯ ವಿಷಯ ತಿಳಿಯುತ್ತಿದ್ದಂತೆ ಪ್ರದೀಪ್ ಈಶ್ವರ್ ಪೇರೇಸಂದ್ರದತ್ತ ತೆರಳುತ್ತಿದ್ದಾರೆ.

Pradeep Eshwar: ಚಿಕ್ಕಬಳ್ಳಾಪುರ ನೂತನ ಶಾಸಕ ಪ್ರದೀಪ್‌ ಈಶ್ವರ್‌ ಸಾಕು ತಾಯಿ ನಿಧನ
ಪ್ರದೀಪ್‌ ಈಶ್ವರ್‌
ಆಯೇಷಾ ಬಾನು
ಆಯೇಷಾ ಬಾನು|

Updated on:May 20, 2023 | 11:23 AM

Share

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವರಾಗಿದ್ದ, ಪ್ರಭಾವಿ ಬಿಜೆಪಿ ನಾಯಕ ಡಾ ಕೆ ಸುಧಾಕರ್‌(Dr k Sudhakar) ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಗೆಲುವಿನ ಉತ್ಸಾಹದಲ್ಲಿದ್ದ ಪ್ರದೀಪ್‌ ಈಶ್ವರ್‌ (Pradeep Eshwar) ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಕಾಂಗ್ರೆಸ್​ನ ನೂತನ ಶಾಸಕ ಪ್ರದೀಶ್ ಈಶ್ವರ್ (MLA Pradeep Eshwar) ಅವರ ಸಾಕು ತಾಯಿ ರತ್ನಮ್ಮ ಇಂದು ನಿಧನರಾಗಿದ್ದಾರೆ.

72 ವರ್ಷ ವಯಸ್ಸಿನ ರತ್ನಮ್ಮ ಪೇರೇಸಂದ್ರ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ರತ್ನಮ್ಮ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇನ್ನು ಮತ್ತೊಂದೆಡೆ ಇಂದು ಸಿಎಂ ಮತ್ತು ಡಿಸಿಎಂ ಸೇರಿದಂತೆ ಕೆಲ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದಾರೆ. ಸದ್ಯ ವಿಷಯ ತಿಳಿಯುತ್ತಿದ್ದಂತೆ ಪ್ರದೀಪ್ ಈಶ್ವರ್ ಪೇರೇಸಂದ್ರದತ್ತ ತೆರಳುತ್ತಿದ್ದಾರೆ. ಪೇರೇಸಂದ್ರ ಗ್ರಾಮಕ್ಕೆ ತೆರಳಿ ತಾಯಿ ರತ್ನಮ್ಮ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.

ಇದನ್ನೂ ಓದಿ: ಸುಧಾಕರ್​ನನ್ನು ಸೋಲಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಹೇಗೆಲ್ಲ ಸಂಭ್ರಮಿಸಿದರು ಗೊತ್ತಾ?ನೂತನ ಶಾಸಕ ಪ್ರದೀಪ್ ಈಶ್ವರ್ ಮಾತು ಕೇಳಿ

pradeep eshwar

ಪ್ರದೀಪ್‌ ಈಶ್ವರ್‌ ಸಾಕು ತಾಯಿ ನಿಧನ

ಪ್ರದೀಪ್ ಚಿಕ್ಕ ವಯಸ್ಸಿನಲ್ಲಿ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾಗ ಪ್ರದೀಪ್ ಹಾಗೂ ಆತನ ತಮ್ಮ ಚೇತನ್ ನನ್ನು ಸಂಬಂಧಿ ರತ್ನಮ್ಮನವರೇ ಸಾಕಿ ಸಲುಹಿ ದೊಡ್ಡವರನ್ನಾಗಿ ಮಾಡಿದ್ರು. ಕಡು ಬಡತನದಲ್ಲಿ ಬೆಳೆದಿದ್ದ ಪ್ರದೀಪ್ ಸದ್ಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕನಾದ ಸಂತೋಷದಲ್ಲಿ ಇದ್ರು. ಇನ್ನೂ ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಎಕ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡುವ ಸಂಭ್ರಮದಲ್ಲಿ ಪ್ರದೀಪ್ ಈಶ್ವರ್ ಇದ್ರು. ಆದ್ರೆ ಸಾಕು ತಾಯಿ ನಿಧನದ ಸುದ್ದಿ ಪ್ರದೀಪ್ ಈಶ್ವರ್ ದುಃಖತಪ್ತರಾಗುವಂತೆ ಮಾಡಿದೆ. ಇದ್ರಿಂದ ಬೆಳಿಗ್ಗೆ ಪಾರ್ಥೀವ ಶರೀರದ ದರ್ಶನ ಪಡೆದ ಪ್ರದೀಪ್ ಪಾರ್ಥಿವ ಶರೀರದ ಪಾದಗಳನ್ನು ಗಟ್ಟಿಯಾಗಿ ಹಿಡಿದು ನಮಸ್ಕರಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:01 am, Sat, 20 May 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ