ಕಾಫಿನಾಡಿನಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ: ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ನಲ್ಲಿ ಲಕ್ಷಾಂತರ ಮೌಲ್ಯದ ನಗದು, ಗಿಫ್ಟ್​ ಜಪ್ತಿ

ಕಾಫಿನಾಡಿನಲ್ಲಿ ಚುನಾವಣಾ ಅಧಿಕಾರಿಗಳ ಭರ್ಜರಿ ಬೇಟೆ ಮಾಡಿದ್ದು, ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್​ಗಳಲ್ಲಿ 20 ಲಕ್ಷ ರೂಪಾಯಿ ನಗದು, ಲಕ್ಷಾಂತರ ಮೌಲ್ಯದ ಗಿಫ್ಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಕಾಫಿನಾಡಿನಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ: ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ನಲ್ಲಿ ಲಕ್ಷಾಂತರ ಮೌಲ್ಯದ ನಗದು, ಗಿಫ್ಟ್​ ಜಪ್ತಿ
ಹಣ, ಗಿಫ್ಟ್‌ ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 12, 2023 | 7:53 PM

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್​ಗಳಲ್ಲಿ 20 ಲಕ್ಷ ರೂಪಾಯಿ ನಗದು, ಲಕ್ಷಾಂತರ ಮೌಲ್ಯದ ಗಿಫ್ಟ್‌ಗಳನ್ನು ಜಪ್ತಿ (seized) ಮಾಡಲಾಗಿದೆ. ಕಡೂರು ಚೆಕ್‌ಪೋಸ್ಟ್‌ನಲ್ಲಿ 6 ಲಕ್ಷಕ್ಕೂ ಹೆಚ್ಚು, ತರೀಕೆರೆ ಚೆಕ್‌ಪೋಸ್ಟ್‌ನಲ್ಲಿ 3 ಲಕ್ಷಕ್ಕೂ, ಲಕ್ಕವಳ್ಳಿ ಎಂ.ಎನ್.ಕ್ಯಾಂಪ್‌ನಲ್ಲಿ ಒಂದು ಲಕ್ಷ ನಗದು ಸೀಜ್​ ಮಾಡಲಾಗಿದೆ. ಕೊರಿಯರ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 7.5 ಲಕ್ಷ ಮೌಲ್ಯದ 760 ಜೀನ್ಸ್‌ ಪ್ಯಾಂಟ್‌ ಮತ್ತು ಬೀರೂರಿನಲ್ಲಿ 68 ಸಾವಿರಕ್ಕೂ ಮೌಲ್ಯದ 47 ಕುಕ್ಕರ್‌, 77 ಸೀರೆಗಳನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹಾಗಾಗಿ ಜಿಲ್ಲೆಯ ಚೆಕ್​ಪೋಸ್ಟ್​ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮಂಡ್ಯದಲ್ಲಿ ದಾಖಲೆ ಇಲ್ಲದ ನಗದು, ಮದ್ಯ, ಡ್ರಗ್ಸ್​​​ ಸೇರಿ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದು, 1 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.

ಬಿಜೆಪಿ ಪ್ರಚಾರಕ್ಕಾಗಿ ಬಳಸುತ್ತಿದ್ದ ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನ ಪತ್ತೆ

ಬಿಜೆಪಿ ಚುನಾವಣೆ ಪ್ರಚಾರಕ್ಕಾಗಿ ಬಳಸುತ್ತಿದ್ದ ನಕಲಿ ನಂಬರ್ ಪ್ಲೇಟ್​ ಹೊಂದಿದ್ದ ಟಾಟಾ ಏಸ್ ವಾಹನ ಪತ್ತೆಯಾಗಿದೆ. ಚುನಾವಣಾಧಿಕಾರಿಗಳು ಪರಿಶೀಲಿಸಿದಾಗ ಅನುಮತಿ ಪಡೆದ ವಾಹನ ಹಾಗೂ ಪ್ರಚಾರಕ್ಕೆ ಬಳಸುತ್ತಿದ್ದ ವಾಹನ ಬೇರೆಯಾಗಿತ್ತು. ಬಳಿಕ ನಂಬರ್ ಪ್ಲೇಟ್ ಚಾರ್ಸಿ ಸಂಖ್ಯೆಯನ್ನು ಅಧಿಕಾರಿಗಳು ಪರಿಶೀಲನೆ ಮಾಡಿದ ವೇಳೆ ವಾಹನಕ್ಕೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿ: Karnataka Assembly Election 2023: ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 100 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ ವಶಕ್ಕೆ: ಚುನಾವಣಾ ಆಯೋಗ

ಪ್ರಕರಣ ಸಂಬಂಧ ಚುನಾವಾಣಾಧಿಕಾರಿಗಳಿಂದ ಶೇಷಾದ್ರಿಪುರ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ 1988 ಕಾಯ್ದೆಯಡಿ ವಿಶ್ವ ಮತ್ತು ಅರ್ಜುನ್ ಎಂಬ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಹುನ್ನೂರು: ದಾಖಲೆ ಇಲ್ಲದ ಬಾರಿ ಮೊತ್ತದ ಹಣ ರವಾನೆ: 2.10 ಕೋಟಿ ರೂ. ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ₹2.10 ಕೋಟಿ ರೂ. (cash) ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಚೆಕ್​​ಪೋಸ್ಟ್​ನಲ್ಲಿ ಜಪ್ತಿ ಮಾಡಲಾಗಿದೆ. ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನದಲ್ಲಿ ಬಾರಿ ಮೊತ್ತದ ಹಣ ರವಾನೆ ಮಾಡಲಾಗುತ್ತಿತ್ತು. ಸಹಕಾರಿ ಬ್ಯಾಂಕ್​​​​ನ ಬೇರೆ ಶಾಖೆಗೆ ಹಣ ಸಾಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಸಹ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಹಾಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಜೆಪಿ ನಡ್ಡಾ ಜೊತೆ ಇಂಗಿತ ವ್ಯಕ್ತಪಡಿಸಿದ್ದೇನೆ: ಜಗದೀಶ್ ಶೆಟ್ಟರ್

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಜಗದಪುರ ಗ್ರಾಮ ಬಳಿಯ ಚೆಕ್​ಪೋಸ್ಟ್​ನಲ್ಲಿ 38 ಲಕ್ಷ ಹಣ ಪತ್ತೆ ಆಗಿದೆ. ಹಲಗೂರಿನಿಂದ ಚನ್ನಪಟ್ಟಣಕ್ಕೆ ಕಾರಿನಲ್ಲಿ ಸಾಗಿಸುತ್ತಿದ್ದು, ಚುನಾವಣಾಧಿಕಾರಿಗಳ ತಪಾಸಣೆ ವೇಳೆ 38 ಲಕ್ಷ ರೂ. ಹಣ ಪತ್ತೆಯಾಗಿದೆ. ಬ್ಯಾಂಕ್​ಗೆ ಡಿಪಾಸಿಟ್ ಮಾಡುವ ರೆಡಿಯಂಟ್​ಗೆ ಸೇರಿದ ಹಣವೆನ್ನಲಾಗುತ್ತಿದ್ದು, ಚುನಾವಣಾಧಿಕಾರಿಗಳು ದಾಖಲೆ ಪತ್ರ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಲ್ಲಿ 53.83 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು, ನಗದು ಜಪ್ತಿ

ಮಾರ್ಚ್ 29ರಿಂದ ಈವರೆಗೆ ಬೆಂಗಳೂರಲ್ಲಿ 53.83 ಕೋಟಿ ರೂ. ಹಣ, ಮದ್ಯ, ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಬರೋಬ್ಬರಿ 1187 ಎಫ್​ಐಆರ್​ ದಾಖಲಾಗಿವೆ. 8.26 ಕೋಟಿ ರೂ. ನಗದು, 22.16 ಕೋಟಿ ರೂ. ಮೌಲ್ಯದ ಮದ್ಯ, 9.51 ಕೋಟಿ ರೂ. ಮೌಲ್ಯದ ಡ್ರಗ್ಸ್, 4.73 ಲಕ್ಷ ರೂ. ಮೌಲ್ಯದ ಗೃಹಪಯೋಗಿ ವಸ್ತುಗಳು, 4.87 ಕೋಟಿ ರೂ. ಮೌಲ್ಯದ ಉಡುಗೊರೆ ಮತ್ತು 4.27 ಕೋಟಿ ರೂ. ಮೌಲ್ಯದ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Wed, 12 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ