AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur Election 2023: ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಸೋಲು

CT Ravi: ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿಟಿ ರವಿ ಹೀನಾಯ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಹೆಚ್. ಡಿ. ತಿಮ್ಮಯ್ಯ 64552 ಮತಗಳನ್ನು ಪಡೆದು ಗೆದ್ದಿದ್ದಾರೆ

Chikmagalur Election 2023: ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಸೋಲು
ಸಿಟಿ ರವಿ
ನಯನಾ ರಾಜೀವ್
|

Updated on:May 13, 2023 | 4:00 PM

Share

ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿಟಿ ರವಿ ಹೀನಾಯ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಹೆಚ್. ಡಿ. ತಿಮ್ಮಯ್ಯ 64552 ಮತಗಳನ್ನು ಪಡೆದು ಗೆದ್ದಿದ್ದಾರೆ. ಸಿ. ಟಿ. ರವಿ 55678 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಸತತ ನಾಲ್ಕು ಬಾರಿ ವಿಜಯ ಸಾಧಿಸಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿನಿಧಿಸುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ, ಈಗ ಅವರಿಗೆ ಆಪ್ತ ಎಚ್​ಡಿ ತಮ್ಮಯ್ಯ ಟಕ್ಕರ್ ನೀಡಿದ್ದಾರೆ.

1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿಗೆ ಈ ಬಾರಿ ಮತ್ತೆ ಬಿಜೆಪಿ ಮಣೆ ಹಾಕಿತ್ತು. ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿ ಬಿಜೆಪಿಯಿಂದ ಕರೆತಂದ ಎಚ್​ಡಿ ತಮ್ಮಯ್ಯಗೆ ಟಿಕೆಟ್ ನೀಡಿತ್ತು, ಅತ್ತ ಜೆಡಿಎಸ್​ನಿಂದ ತಿಮ್ಮಶೆಟ್ಟಿ ಸ್ಪರ್ಧಿಸಿದ್ದರೆ ಎಎಪಿಯಿಂದ ಈರೇಗೌಡ ಸ್ಪರ್ಧಿಸಿದ್ದಾರೆ.

1999ರಲ್ಲಿ ಸುಮಾರು 900 ಮತಗಳಿಂದ ಸೋತಿದ್ದ ಸಿಟಿ ರವಿ ನಂತರದ ಚುನಾವಣೆಯಲ್ಲಿ ಕ್ರಮವಾಗಿ 25 ಸಾವಿರ, 15 ಸಾವಿರ, 11 ಸಾವಿರ, 26 ಮತಗಳಿಂದ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

ಈ ಬಾರಿ ಸಿಟಿ ರವಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಗ್ಗೂಡಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸ್ನೇಹಿತರಾದ ಸಿಟಿ ರವಿ ಹಾಗೂ ತಮ್ಮಯ್ಯ ಪರಸ್ಪರ ಜಿದ್ದಾಜಿದ್ದಿಗೆ ಇಳಿದಿದ್ದಾರೆ. 1999ರ ಬಳಿಕ ಸಿಟಿ ರವಿಗೆ ಇದು ಅತ್ಯಂತ ತುರುಸಿನ ಸ್ಪರ್ಧೆಯಾಗಿತ್ತು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Sat, 13 May 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ