AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chincholi Election Results: ಚಿಂಚೋಳಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಇಲ್ಲಿ ಗೆದ್ದವರ ಪಕ್ಷಕ್ಕೇ ಅಧಿಕಾರ, ಹೀಗೊಂದು ಇತಿಹಾಸ

Chincholi Assembly Election Result 2023 Live Counting Updates: ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದಿ ಬಿಜೆಪಿಯು ಹಾಲಿ ಶಾಸಕ ಡಾ. ಅವಿನಾಶ್ ಜಾಧವ್ ಅವರನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ ಕಳೆದ ಬಾರಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಸುಭಾಷ್ ವಿ. ರಾಠೋಡ್ ಅವರನ್ನೇ ಮತ್ತೆ ಕಣಕ್ಕಿಳಿಸಿದೆ.

Chincholi Election Results: ಚಿಂಚೋಳಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಇಲ್ಲಿ ಗೆದ್ದವರ ಪಕ್ಷಕ್ಕೇ ಅಧಿಕಾರ, ಹೀಗೊಂದು ಇತಿಹಾಸ
ಡಾ. ಅವಿನಾಶ್ ಜಾಧವ್
ಗಣಪತಿ ಶರ್ಮಾ
| Edited By: |

Updated on: May 13, 2023 | 12:13 AM

Share

Chincholi Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ (Chincholi Assembly constituency) ಬಿಜೆಪಿಯು ಹಾಲಿ ಶಾಸಕ ಡಾ. ಅವಿನಾಶ್ ಜಾಧವ್ ಅವರನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ ಕಳೆದ ಬಾರಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಸುಭಾಷ್ ವಿ. ರಾಠೋಡ್ ಅವರನ್ನೇ ಮತ್ತೆ ಕಣಕ್ಕಿಳಿಸಿದೆ. ಜೆಡಿಎಸ್​ನಿಂದ ಸಂಜೀವ್ ಯಾಕಾಪುರ ಸ್ಪರ್ಧಿಸಿದ್ದಾರೆ. ಇದು ಪರಿಷಿಷ್ಟ ಜಾತಿ (ಎಸ್​ಸಿ) ಮೀಸಲು ಕ್ಷೇತ್ರವಾಗಿದೆ.

ಈ ವಿಧಾನಸಭಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿ ಗೆಲ್ಲುತ್ತಾರೋ ಅವರ ಪಕ್ಷವೇ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ಈವರೆಗೆ ನಡೆದಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಡಾ.ಅವಿನಾಶ್ ಜಾಧವ್ ಕಾಂಗ್ರೆಸ್​​ನಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ನಂತರ ಆಪರೇಷನ್ ಕಮಲಕ್ಕೆ ಗುರಿಯಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜಾಧವ್ ಬಿಜೆಪಿಯಿಂದ ಗೆದ್ದು ಬಂದಿದ್ದರು. ನಂತರ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರಿತ್ತು.

ಗೆಲುವು ಸಾಧಿಸಿ ಕ್ಷೇತ್ರವನ್ನು ಮರಳಿ ವಶಕ್ಕೆ ಪಡೆಯಬೇಕೆಂಬ ಹಂಬಲದಲ್ಲಿ ಕಾಂಗ್ರೆಸ್ ಈ ಬಾರಿ ಬಿರುಸಿನ ಪ್ರಚಾರ ಕೈಗೊಂಡಿತ್ತು. ಬಂಜಾರ ಸಮುದಾಯದ ಮತಗಳನ್ನು ಸೆಳೆಯುವುದಕ್ಕಾಗಿ ತೃಪ್ತಿಪಟ್ಟುಕೊಂಡಿದ್ದ ಸುಭಾಷ್ ವಿ. ರಾಠೋಡ್ ಅವರನ್ನೇ ಮತ್ತೆ ಕಣಕ್ಕಿಳಿಸಿತ್ತು. ಈ ಮಧ್ಯೆ ಒಳ ಮೀಸಲಾತಿ ವಿಚಾರವನ್ನು ಮುಂದಿಟ್ಟುಕೊಂಡು ಮತ ಸೆಳೆಯಲು ಬಿಜೆಪಿ ಪ್ರಯತ್ನಿಸಿತ್ತು.

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More