
Chincholi Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ (Chincholi Assembly constituency) ಬಿಜೆಪಿಯು ಹಾಲಿ ಶಾಸಕ ಡಾ. ಅವಿನಾಶ್ ಜಾಧವ್ ಅವರನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ ಕಳೆದ ಬಾರಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಸುಭಾಷ್ ವಿ. ರಾಠೋಡ್ ಅವರನ್ನೇ ಮತ್ತೆ ಕಣಕ್ಕಿಳಿಸಿದೆ. ಜೆಡಿಎಸ್ನಿಂದ ಸಂಜೀವ್ ಯಾಕಾಪುರ ಸ್ಪರ್ಧಿಸಿದ್ದಾರೆ. ಇದು ಪರಿಷಿಷ್ಟ ಜಾತಿ (ಎಸ್ಸಿ) ಮೀಸಲು ಕ್ಷೇತ್ರವಾಗಿದೆ.
ಈ ವಿಧಾನಸಭಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿ ಗೆಲ್ಲುತ್ತಾರೋ ಅವರ ಪಕ್ಷವೇ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ಈವರೆಗೆ ನಡೆದಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಡಾ.ಅವಿನಾಶ್ ಜಾಧವ್ ಕಾಂಗ್ರೆಸ್ನಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ನಂತರ ಆಪರೇಷನ್ ಕಮಲಕ್ಕೆ ಗುರಿಯಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜಾಧವ್ ಬಿಜೆಪಿಯಿಂದ ಗೆದ್ದು ಬಂದಿದ್ದರು. ನಂತರ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರಿತ್ತು.
ಗೆಲುವು ಸಾಧಿಸಿ ಕ್ಷೇತ್ರವನ್ನು ಮರಳಿ ವಶಕ್ಕೆ ಪಡೆಯಬೇಕೆಂಬ ಹಂಬಲದಲ್ಲಿ ಕಾಂಗ್ರೆಸ್ ಈ ಬಾರಿ ಬಿರುಸಿನ ಪ್ರಚಾರ ಕೈಗೊಂಡಿತ್ತು. ಬಂಜಾರ ಸಮುದಾಯದ ಮತಗಳನ್ನು ಸೆಳೆಯುವುದಕ್ಕಾಗಿ ತೃಪ್ತಿಪಟ್ಟುಕೊಂಡಿದ್ದ ಸುಭಾಷ್ ವಿ. ರಾಠೋಡ್ ಅವರನ್ನೇ ಮತ್ತೆ ಕಣಕ್ಕಿಳಿಸಿತ್ತು. ಈ ಮಧ್ಯೆ ಒಳ ಮೀಸಲಾತಿ ವಿಚಾರವನ್ನು ಮುಂದಿಟ್ಟುಕೊಂಡು ಮತ ಸೆಳೆಯಲು ಬಿಜೆಪಿ ಪ್ರಯತ್ನಿಸಿತ್ತು.