AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga Election 2023 Winner: ತಿಪ್ಪಾರೆಡ್ಡಿ ಗೆಲುವಿಗೆ ಬ್ರೇಕ್, ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಗೆಲುವು

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಬಹಿರಂಗಗೊಂಡಿದ್ದು, ಚಿತ್ರದುರ್ಗ ಕ್ಷೇತ್ರದಲ್ಲಿ ಬಿಜೆಪಿಯ ಜಿಎಚ್​ ತಿಪ್ಪಾರೆಡ್ಡಿ ಗೆಲುವಿಗೆ ಬ್ರೇಕ್ ಬಿದ್ದಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲುವಿನ ನಗೆ ಬೀರಿದೆ.

Chitradurga Election 2023 Winner: ತಿಪ್ಪಾರೆಡ್ಡಿ ಗೆಲುವಿಗೆ ಬ್ರೇಕ್, ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಗೆಲುವು
ಚಿತ್ರದುರ್ಗದಲ್ಲಿ ಬಿಜೆಪಿಯ ತಿಪ್ಪಾರೆಡ್ಡಿ ವಿರುದ್ಧ ಕಾಂಗ್ರೆಸ್​ನ ಕೆಸಿ ವೀರೇಂದ್ರ ಪಪ್ಪಿಗೆ ಗೆಲುವು
Rakesh Nayak Manchi
Rakesh Nayak Manchi|

Updated on:May 13, 2023 | 4:40 PM

Share

Chitradurga Assembly Election Results 2023, ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ (Karnataka Assembly Election Results 2023) ಬಹಿರಂಗಗೊಂಡಿದ್ದು, ಚಿತ್ರದುರ್ಗ (Chitradurga) ಕ್ಷೇತ್ರದಲ್ಲಿ ಬಿಜೆಪಿಯ ಜಿಎಚ್​ ತಿಪ್ಪಾರೆಡ್ಡಿ (GH Thippareddy) ಗೆಲುವಿಗೆ ಬ್ರೇಕ್ ಬಿದ್ದಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲುವಿನ ನಗೆ ಬೀರಿದೆ. ತಿಪ್ಪಾರೆಡ್ಡಿ ವಿರುದ್ಧ 53300 ಮತಗಳ ಅಂತದಿಂದ ಕಾಂಗ್ರೆಸ್​ನ ಕೆಸಿ ವೀರೇಂದ್ರ ಪಪ್ಪಿ (KC Veerendra Puppy) ಅವರು ಗೆಲುವು ಸಾಧಿಸಿದ್ದಾರೆ. ಜೆಡಿಎಸ್​ನಿಂದ ಸ್ಪರ್ಧಿಸಿದ ಜಿ ರಘು ಆಚಾರ್ (G Raghu Achar) ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಚಿತ್ರದುರ್ಗ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ರವೀಂದ್ರ ಪಪ್ಪಿ ಅವರು ಶೇ 60ರಷ್ಟು ಮತ ಪಡೆದಿದ್ದು, ಬಿಜೆಪಿಯ ತಿಪ್ಪಾರೆಡ್ಡಿ ಅವರು ಶೇ 33.5ರಷ್ಟು ಮತ ಪಡೆದಿದ್ದಾರೆ. ರಘು ಆಚಾರ್ ಅವರು ಶೇ. 2.5ರಷ್ಟು ಮತ ಪಡೆದಿದ್ದಾರೆ. 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಜಿ.ಹೆಚ್‌ ತಿಪ್ಪಾರೆಡ್ಡಿ ಅವರಿಗೆ ವಯಸ್ಸಿನ ಆಧಾರದ ಮೇಲೆ ಬಿಜೆಪಿ ಟಿಕೆಟ್‌ ಬಹುತೇಕ ತಪ್ಪಲಿದೆ ಎನ್ನಲಾಗುತ್ತಿತ್ತು. ಆದರೆ ಕ್ಷೇತ್ರದಲ್ಲಿ ತನ್ನದೇ ಆದ ಸಾಮರ್ಥ್ಯ ಹೊಂದಿರುವ ತಿಪ್ಪಾರೆಡ್ಡಿಗೆ ಟಿಕೆಟ್‌ ನೀಡದಿದ್ದರೆ ಬಿಜೆಪಿ ಸೋಲುವ ಭಯದಿಂದ ಕೊನೆ ಅವಕಾಶವನ್ನು ನೀಡಿತ್ತು.

ಇದನ್ನೂ ಓದಿ: Challakere Election 2023 Winner: ಚಳ್ಳಕೆರೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಕಾಂಗ್ರೆಸ್​ನ ರಘುಮೂರ್ತಿ

ತಿಪ್ಪಾರೆಡ್ಡಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್​ನಿಂದ 10 ಮಂದಿ ಅರ್ಜಿ ಹಾಕಿದ್ದರು. ರಘು ಆಚಾರ್ ಮತ್ತು ಬಸವರಾಜನ್ ನಡುವೆ ಟಿಕೆಟ್ ಫೈಟ್ ನಡೆಯುತ್ತಿದ್ದಾಗಲೇ ಮಧ್ಯ ಎಂಟ್ರಿಕೊಟ್ಟ ವೀರೇಂದ್ರ ಪಪ್ಪಿ ಅವರಿಗೆ ಟಿಕೆಟ್ ದೊರಕಿತ್ತು. ನಂತರ ರಘು ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದರೆ, ಇತ್ತ ಬಸವರಾಜನ್ ಅವರು ತಮ್ಮ ಪತ್ನಿಯನ್ನು ಪಕ್ಷೇತ್ರವಾಗಿ ಕಣಕ್ಕಿಳಿಸಿದ್ದರು.

1994 ಹಾಗೂ 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಜಿ.ಎಚ್ ತಿಪ್ಪಾರೆಡ್ಡಿ 2004ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. 2008ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ 2013 ಮತ್ತು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ಅವರಿಗೆ 75 ವರ್ಷ ವಯಸ್ಸಾಗಿದ್ದರೂ ಗೆಲ್ಲುವ ಕುದುರೆ ಎಂದು 2023ರಲ್ಲೂ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Sat, 13 May 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ