ಚಿತ್ರದುರ್ಗ: ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

|

Updated on: May 09, 2023 | 9:35 PM

ಚಿತ್ರದುರ್ಗದ ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಿತ್ರದುರ್ಗ: ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ
ಚಿತ್ರದುರ್ಗ ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ
Follow us on

ಚಿತ್ರದುರ್ಗ: ಜೆಡಿಎಸ್ ಅಭ್ಯರ್ಥಿ ರಘು ಆಚಾರ್ (Raghu Achar) ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ತಾಲೂಕಿನ ಕ್ಯಾದಿಗೆರೆ ಬಳಿ ಇರುವ ರಘು ಆಚಾರ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಇತ್ತೇಚೆಗಷ್ಟೇ ಜೆಡಿಎಸ್ ಸೇರ್ಪಡೆಗೊಂಡು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಚುನಾವಣಾಧಿಕಾರಿಗಳು ಶಾಕ್ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ ಮೊದಲ ಹಂತದ ಪಟ್ಟಿಯಲ್ಲೂ ರಘು ಆಚಾರ್ ಅವರಿಗೆ ಟಿಕೆಟ್ ಘೋಷಿಸಿರಲಿಲ್ಲ. ಎರಡನೇ ಹಂತದ ಪಟ್ಟಿಯಲ್ಲೂ ಹೆಸರು ಕಾಣಿಸಿಕೊಳ್ಳದಾಗ ಬಂಡಾಯ ಎದ್ದ ಆಚಾರ್ ಅವರು ಜೆಡಿಎಸ್ ಕಡೆ ಮುಖ ಮಾಡಿದ್ದರು. ಅದರಂತೆ ಏಪ್ರಿಲ್ 14ರಂದು ಜೆಡಿಎಸ್​ಗೆ ಸೇರ್ಪಡೆಯಾಗಿ ಟಿಕೆಟ್ ಪಡೆದುಕೊಂಡಿದ್ದರು. ಜಿಲ್ಲೆಯ ಆರಕ್ಕೆ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಲಿದೆ. ಜಿಲ್ಲೆಯ 6 ಕ್ಷೇತ್ರಗಳಲ್ಲಿ ಜೆಡಿಎಸ್​ ಗೆಲ್ಲಿಸಲು ಶ್ರಮಿಸುತ್ತೇನೆ ಎಂದು ಶಪಥ ಮಾಡಿದ್ದರು.

ಇದನ್ನೂ ಓದಿ: Mysore: ಹೆಚ್ ಡಿ ಕೋಟೆ: ಮತದಾರರ ಕೈ ಸೇರಬೇಕಿದ್ದ 50 ಲಕ್ಷ ರೂ ಚುನಾವಣಾಧಿಕಾರಿಗಳ ಕೈ ವಶವಾಯ್ತು!

ಮಾಜಿ ಎಂಎಲ್​ಸಿ ರಘು ಆಚಾರ್ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದ ಹಿನ್ನೆಲೆ ಚಿತ್ರದುರ್ಗ ಕ್ಷೇತ್ರದಲ್ಲಿ ಕೆ.ಸಿ.ವಿರೇಂದ್ರ ಪಪ್ಪಿ ಅವರಿಗೆ ಕಾಂಗ್ರೆಸ್ ಮಣೆಹಾಕಿದೆ. ಇದರಿಂದ ಅಸಮಾಧಾನಗೊಂಡ ರಘು ಆಚಾರ್, ಸಿದ್ದರಾಮಯ್ಯ ಅವರೇ ನನಗೆ ಸ್ಪರ್ಧಿಸುವಂತೆ ಹೇಳಿದ್ದರು. ಎಂಎಲ್​ಸಿ ಬೇಡ, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಎಂದು ಕೈ ನಾಯಕರು ಹೇಳಿದ್ದರು. ಈಗ ಅರ್ಧ ದಾರಿಯಲ್ಲೇ ಕತ್ತು ಕೊಯ್ದಿದ್ದಾರೆ ಎಂದಿದ್ದರು. ಜಾತಿ, ಮತ ಬಲ ಇಲ್ಲವೆಂಬ ಸಣ್ಣ ಕಾರಣಕ್ಕೆ ಈ ರೀತಿ ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Tue, 9 May 23