ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್ ಅವರು ಏಪ್ರಿಲ್ 14ರಂದು ಜೆಡಿಎಸ್ ಪಕ್ಷ ಸೇರಲಿದ್ದಾರೆ. ಜೆಡಿಎಸ್ ಎಂಎಲ್​ಸಿ ಟಿಎ ಶರವಣ ಅವರನ್ನು ಭೇಟಿಯಾದ ನಂತರ ರಘು ಆಚಾರ್ ಈ ಬಗ್ಗೆ ಘೋಷಿಸಿದ್ದಾರೆ.

ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್ ಮಾಜಿ ಎಂಎಲ್​ಸಿ ರಘು ಆಚಾರ್
Follow us
Rakesh Nayak Manchi
|

Updated on:Apr 07, 2023 | 4:39 PM

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ ಬಿಡುಗಡೆ ಮಾಡಿದ ಮೊದಲ ಹಂತದ ಪಟ್ಟಿಯಲ್ಲೂ ಟಿಕೆಟ್ ಘೋಷಿಸಿಲ್ಲ, ಎರಡನೇ ಹಂತದ ಪಟ್ಟಿಯಲ್ಲೂ ತಮ್ಮ ಹೆಸರು ಕಾಣಿಸಿಲ್ಲ ಎಂದು ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್ (Raghu Achar), ಜೆಡಿಎಸ್ ಸೇರ್ಪಡೆಗೊಂಡು ಕಾಂಗ್ರೆಸ್ ವಿರುದ್ಧ ತೊಡೆತಟ್ಟಲು ಸಜ್ಜಾಗುತ್ತಿದ್ದಾರೆ. ಇಂದು ಜೆಡಿಎಸ್ ಎಂಎಲ್​ಸಿ ಟಿಎ ಶರವಣ ಅವರನ್ನು ಭೇಟಿಯಾದ ನಂತರ ಚಿತ್ರದುರ್ಗದಲ್ಲಿ ಹೇಳಿಕೆ ನೀಡಿದ ರಘು ಆಚಾರ್, ಏಪ್ರಿಲ್ 14ರ ಮಧ್ಯಾಹ್ನ 12.07ಕ್ಕೆ ಜೆಡಿಎಸ್ (JDS Karnataka)​ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್​ ಟಿಕೆಟ್​ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್​ ಸೇರ್ಪಡೆಯಾಗುತ್ತಿದ್ದೇನೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಸೇರ್ಪಡೆಯಾಗಲಿದ್ದೇನೆ ಎಂದರು.

ಚಿತ್ರದುರ್ಗ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಜೆಡಿಎಸ್​ ಗೆಲ್ಲಿಸಲು ಶ್ರಮಿಸುತ್ತೇನೆ. ಜಿಲ್ಲೆಯ ಆರಕ್ಕೆ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಲಿದೆ. ಸ್ವಾಭಿಮಾನಕ್ಕೆ ಚ್ಯುತಿ ತಂದವರಿಗೆ ಚುನಾವಣೆಯಲ್ಲಿ ಉತ್ತರ ನೀಡುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ರಘು ಆಚಾರ್ ಕಿಡಿಕಾರಿದರು. ಜೆಡಿಎಸ್ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ವರಿಷ್ಠರು ನನಗೆ ಟಿಕೆಟ್​ ನೀಡುವ ಬಗ್ಗೆ ತೀರ್ಮಾನಿಸುತ್ತಾರೆ. ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸಿದರೂ ನಾನು ಸಿದ್ಧನಾಗಿರುವೆ. ಇಲ್ಲವಾದರೆ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆ. ಜೆಡಿಎಸ್​ ಸೇರ್ಪಡೆ ಬಗ್ಗೆ ಈಗಷ್ಟೇ ಚರ್ಚೆಯಾಗಿದೆ, ಟಿಕೆಟ್​ಗೆ ಸಮಯಬೇಕು. ಏಪ್ರಿಲ್ 17ರಂದು ಚಿತ್ರದುರ್ಗ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ: ವಿಜಯೇಂದ್ರ ಗೆಲ್ಲಿಸಲು ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್​-ಬಿಜೆಪಿ ಮ್ಯಾಚ್ ಫಿಕ್ಸಿಂಗ್; ಸಿದ್ದರಾಮಯ್ಯ ಮನೆಯಲ್ಲಿ ಕಾರ್ಯಕರ್ತರ ಗಲಾಟೆ

ಮಾಜಿ ಎಂಎಲ್​ಸಿ ರಘು ಆಚಾರ್ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತವಾದ ನಡುವೆ ಬಿಡುಗಡೆಯಾದ ಕಾಂಗ್ರೆಸ್ 2ನೇ ಪಟ್ಟಿಯಲ್ಲಿ ಚಿತ್ರದುರ್ಗದಿಂದ ಕೆ.ಸಿ.ವಿರೇಂದ್ರ ಪಪ್ಪಿಗೆ ಕೈ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಅಸಮಾಧಾನಗೊಂಡ ರಘು ಆಚಾರ್, ಸಿದ್ದರಾಮಯ್ಯ ಅವರೇ ನನಗೆ ಸ್ಪರ್ಧಿಸುವಂತೆ ಹೇಳಿದ್ದರು. ಎಂಎಲ್​ಸಿ ಬೇಡ, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಎಂದು ಕೈ ನಾಯಕರು ಹೇಳಿದ್ದರು. ಈಗ ಅರ್ಧ ದಾರಿಯಲ್ಲೇ ಕತ್ತು ಕೊಯ್ದಿದ್ದಾರೆ ಎಂದು ಈ ಹಿಂದೆ ಆಕ್ರೋಶ ಹೊರಹಾಕಿದ್ದರು.

ಜಾತಿ, ಮತ ಬಲ ಇಲ್ಲವೆಂಬ ಸಣ್ಣ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಈ ಜಿಲ್ಲೆಯ ಜನ ಇದಕ್ಕೆ ಉತ್ತರ ನೀಡುತ್ತಾರೆ. ನನಗೊಬ್ಬನಿಗೆ ಅಲ್ಲ, ಮಡಿವಾಳ ಸಮುದಾಯದ, ತರೀಕೆರೆ ಕ್ಷೇತ್ರದ ಆಕಾಂಕ್ಷಿ ಆಗಿದ್ದ ಗೋಪಿಕೃಷ್ಣ ಅವರಿಗೂ ಅನ್ಯಾಯ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. 197 ಸಣ್ಣ ಸಮುದಾಯಗಳಿಗೆ ಕಾಂಗ್ರೆಸ್ ಒಂದು ಸ್ಥಾನ ನೀಡಿಲ್ಲ. ಆ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ಗೌರವ ಇದೆಯೋ, ಇಲ್ಲವೊ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ರಘು ಆಚಾರ್ ಅಸಮಧಾನ ಹೊರಹಾಕಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Fri, 7 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ