ಬೆಂಗಳೂರಲ್ಲಿ ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ನಾಲ್ವರಿಗೆ ಗಾಯ

ಕಾಂಗ್ರೆಸ್​​, ಬಿಜೆಪಿ ಕಾರ್ಯಕರ್ತರು ಬಡೆದಾಡಿಕೊಂಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

ಬೆಂಗಳೂರಲ್ಲಿ ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ನಾಲ್ವರಿಗೆ ಗಾಯ
ಕಾಂಗ್ರೆಸ್​, ಬಿಜೆಪಿ ಕಾರ್ಯಕರ್ತರ ನಡುವೆ ಗಾಲಟೆ
Follow us
ವಿವೇಕ ಬಿರಾದಾರ
|

Updated on: May 01, 2023 | 7:53 AM

ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರ ನಡುವೆ ಗಲಾಟೆಗಳು ಹೆಚ್ಚಾಗುತ್ತಿವೆ. ಇತ್ತೀಚಿಗೆ ಕೊರಟಗೆರೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಕಲ್ಲುತೂರಾಟ ನಡೆದಿತ್ತು. ಅದರಂತೆ ಈಗ ರಾಜಧಾನಿಯ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ (Congress)​​, ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಅವರ ಬೆಂಬಲಿಗರು ಮತ್ತು ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಅವರ ಬೆಂಬಲಿಗರು ಬಡೆದಾಡಿಕೊಂಡಿದ್ದಾರೆ.

ಬೊಮ್ಮನಹಳ್ಳಿಯ ಡಿಎಸ್​ಎಸ್​ ಕಚೇರಿಯಲ್ಲಿ ಸೀರೆ ಸಂಗ್ರಹಿಸಲಾಗಿದೆ ಎಂದು ಕಾಂಗ್ರೆಸ್ ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಈ ಸಂಬಂಧ ಚುನಾವಣಾಧಿಕಾರಿಗಳು ಡಿಎಸ್​ಎಸ್​ ಕಚೇರಿ ಮೇಲೆ ದಾಳಿ ನಡೆಸಿ, ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಅವರ ಫೋಟೋ ಇರುವ 50 ಸೀರೆಗಳನ್ನು ಜಪ್ತಿ ಮಾಡಿಕೊಂಡಿದ್ದರು. ಈ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಜಗಳವಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆಯಲ್ಲಿ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಪ್​ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ

ಯಾದಗಿರಿ: ಕಳೆದ ತಿಂಗಳು ಏಪ್ರಿಲ್​ 26 ರಂದು ಚುನಾವಣಾ ಪ್ರಚಾರದ ವೇಳೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ ಮಾಡಿರುವಂತಹ ಘಟನೆ ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಯ ಹುಣಸಗಿ ತಾಲೂಕಿನ ತೊಳದಿನ್ನಿ ಗ್ರಾಮದಲ್ಲಿ ನಡೆದಿತ್ತು.

ಇದನ್ನೂ ಓದಿ: ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ: ಸಿದ್ದರಾಮಯ್ಯಗೆ ಸಂಸದ ಪ್ರತಾಪ್​ ಸಿಂಹ​ ಎಚ್ಚರಿಕೆ

ಗ್ರಾಮದಲ್ಲಿ ಪ್ರಚಾರ ಮಾಡಲು ಯಾಕೆ ಬಂದಿದ್ದೀಯಾ ಎಂದು ಪ್ರಶ್ನಿಸಿ ಹಲ್ಲೆ ಮಾಡಲಾಗಿತ್ತು. ಸುರಪುರ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆರ್.ಎಂ.ನಾಯಕ ಎದರೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು. ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಜೊತೆ ಆರ್.ಎಂ.ನಾಯಕ ಪ್ರಚಾರಕ್ಕೆ ಹೋಗಿದ್ದು, ಅಭ್ಯರ್ಥಿ ಪ್ರಚಾರ ಭಾಷಣ ಮಾಡುವಾಗ ಘಟನೆ ನಡೆದಿತ್ತು.

ಪೊಲೀಸ್ ಠಾಣೆಗೆ ಬಂದವರಿಗೆ ಲಾಠಿ ಎಟು

ದಾವಣಗೆರೆ: ಎಳೆ ಮಕ್ಕಳು ಮಹಿಳೆಯರು ಸೇರಿದಂತೆ ಕೈಗೆ ಸಿಕ್ಕವರ ಮೇಲೆ ಪೊಲೀಸರು ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆ ಮುಂದೆ ನಡೆದಿತ್ತು. ಜಗಳೂರಿನಲ್ಲಿ ದೊಡ್ಡ ಮಾರಮ್ಮನ‌ ಜಾತ್ರೆಯಲ್ಲಿ ಕೆಲ‌ ಕಿಡಿಗೇಡಿಗಳಿಂದ ವಾಹನಗಳಿಗೆ ಹಾನಿ ಮಾಡದ್ದಾರೆ. ಈ‌ ವಿಚಾರಕ್ಕೆ ಹತ್ತಕ್ಕೂ ಹೆಚ್ಚು ಯುವಕರನ್ನ ಪೊಲೀಸರು ಕರೆ ತಂದಿದ್ದರು. ಅನಗತ್ಯವಾಗಿ ತಮ್ಮ ಮಕ್ಕಳನ್ನು ಕರೆತರಲಾಗಿದೆ ಎಂದು ಪೊಲೀಸ್ ಠಾಣೆಗೆ ಕೇಳಲು ಸಂಬಂಧಿಕರು ಬಂದಿದ್ದರು.

ಹೀಗೆ ಕೇಳಲು ಹೋದವರ ಮೇಲೆ ಸಹ ಪೊಲೀಸರು ಹಲ್ಲೆ ಮಾಡಿದ್ದರು. ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಗಾಯಗಳಾಗಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಸ್ಥಳೀಯರು ಆಗ್ರಹಿಸಿದ್ದರು.

ಪೊಲೀಸ್ ಠಾಣೆ ಒಳಗೆ ಎರಡು ತಂಡದವರಿಂದ ಗಲಾಟೆ

ನೆಲಮಂಗಲ: ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ನಡೆದಿತ್ತು. ಜೆಡಿಎಸ್ ಕಾರ್ಯಕರ್ತ ಮೋಹನ್​ಕಡೆಯವರಾದ ಅಭ್ಯರ್ಥಿ ಮುನೆಗೌಡ ಹಾಗೂ ಬೆಂಬಲಿಗರಿಂದ ಠಾಣೆಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಬಿಜೆಪಿ ಮುಖಂಡ ಕೊಳ್ಳಿಗಾನಹಳ್ಳಿ ವೆಂಕಟೇಶಪ್ಪ ಹಾಗೂ ಬೆಂಬಲಿಗರು ಠಾಣೆಗೆ ಆಗಮಿಸಿದ್ದರು.

ಮೊದಲು ನಮ್ಮ ದೂರು ತೆಗೆದುಕೊಳ್ಳಿ ಎಂದು ಗಲಾಟೆ ಮಾಡಲಾಗಿತ್ತು. ಸುಮಾರು ಒಂದು ಗಂಟೆಗಳ ಕಾಲ ಪೊಲೀಸ್ ಠಾಣೆ ಒಳಗೆ ಎರಡು ತಂಡದವರಿಂದ ಗಲಾಟೆ ಮಾಡಲಾಗಿತ್ತು. ಪೊಲೀಸ್ ಠಾಣೆ ಎಂಬುದನ್ನು ಮರೆತು ಜೋರು ಧ್ವನಿಯಲ್ಲಿ ಗದ್ದಲ ಮಾಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ