Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadagatta: ರಾಜಕೀಯ ದ್ವೇಷ ಹಿನ್ನೆಲೆ ಗುಂಪು ಘರ್ಷಣೆ: ಪಕ್ಷೇತರ ಹಾಗೂ ಬಿಜೆಪಿ ಅಭ್ಯರ್ಥಿ ಬೆಂಬಲಿಗರ ಮಧ್ಯೆ ಗಲಾಟೆ

ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಬೆಂಬಲಿಗ ಗಿರೀಶ್ ಹಾಗೂ ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ಬೆಂಬಲಿಗ ಓಂಕಾರಪ್ಪ ಮಧ್ಯೆ ಘರ್ಷಣೆ ಉಂಟಾಗಿದ್ದು, ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ಓಂಕಾರಪ್ಪ ಹಾಗೂ ಮತ್ತಿತರರ ವಿರುದ್ಧ ಗಿರೀಶ್ ಆರೋಪ ಮಾಡಿದ್ದಾರೆ.

Yadagatta: ರಾಜಕೀಯ ದ್ವೇಷ ಹಿನ್ನೆಲೆ ಗುಂಪು ಘರ್ಷಣೆ: ಪಕ್ಷೇತರ ಹಾಗೂ ಬಿಜೆಪಿ ಅಭ್ಯರ್ಥಿ ಬೆಂಬಲಿಗರ ಮಧ್ಯೆ ಗಲಾಟೆ
ಗುಂಪು ಘರ್ಷಣೆ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 22, 2023 | 7:45 PM

ಚಿತ್ರದುರ್ಗ‌: ಜಿಲ್ಲೆಯ ಹೊಸದುರ್ಗ ತಾಲೂಕಿನ ಯಾದಗಟ್ಟ ಗ್ರಾಮದಲ್ಲಿ ರಾಜಕೀಯ ದ್ವೇಷದಿಂದ (political rivalry) ಗುಂಪು ಘರ್ಷಣೆ (Clash) ಉಂಟಾಗಿರುವಂತಹ ಘಟನೆ ನಡೆದಿದೆ. ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಬೆಂಬಲಿಗ ಗಿರೀಶ್ ಹಾಗೂ ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ಬೆಂಬಲಿಗ ಓಂಕಾರಪ್ಪ ಮಧ್ಯೆ ಘರ್ಷಣೆ ಉಂಟಾಗಿದ್ದು, ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ಓಂಕಾರಪ್ಪ ಹಾಗೂ ಮತ್ತಿತರರ ವಿರುದ್ಧ ಗಿರೀಶ್ ಆರೋಪ ಮಾಡಿದ್ದಾರೆ. ಸದ್ಯ ಗಿರೀಶ್​ ತಂದೆ ಮರುಳಪ್ಪಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಪರ ಪ್ರಚಾರ ಮಾಡಿದ್ದಕ್ಕೆ ಗಲಾಟೆ ಮಾಡಲಾಗಿದೆ ಎನ್ನಲಾಗಿದೆ. ಶ್ರೀರಾಂಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸೈಲೆಂಟ್ ಸುನೀಲ್​ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರಿಂದ ಇತ್ತೀಚೆಗೆ ಗಲಾಟೆ ಮಾಡಲಾಗಿತ್ತು. ಭಾಸ್ಕರ್ ರಾವ್​ಗೆ ಟಿಕೆಟ್ ನೀಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಚಾಮರಾಜಪೇಟೆ ಕ್ಷೇತ್ರಕ್ಕೆ ಅನ್ಯಾಯ ಆಗಿದೆ ಅಂತ ಗಲಾಟೆ ಮಾಡಿದ್ದರು.

ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಅದರಂತೆ ಗ್ರಾಮದ ಮುಖಂಡನೊಬ್ಬ ಹಣ ಕೊಡುವುದಾಗಿ ನಂಬಿಸಿ ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ರೋಡ್ ಶೋಗೆ ಕರೆದೊಯ್ದು ಹಣ ಕೊಟ್ಟಿಲ್ಲ. ಇದೇ ಕಾರಣಕ್ಕೆ ಗ್ರಾಮದ ಮಹಿಳೆಯೊಬ್ಬರು ಆತನನ್ನ ಅಟ್ಟಾಡಿಸಿ ಹೊಡೆದಿರುವ ಘಟನೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ದೂರು

ನಿನ್ನೆ(ಏ.20) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರೋಡ್ ಶೋ ಮಾಡಿದ್ದು, ಗ್ರಾಮದ ಜನರಿಗೆ ಹಣ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿ ಬಳಿಕ ಹಣ ನೀಡಿಲ್ಲ.​ ಇದಕ್ಕೆ ಕೋಪಗೊಂಡ ಗ್ರಾಮಸ್ಥರು ಮುಖಂಡ ಮಂಜು ಮೇಲೆ ಹಲ್ಲೆ ಪರಸ್ಪರ ಬಡಿದಾಡಿಕೊಂಡು ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ವರುಣ ಕ್ಷೇತ್ರದಲ್ಲೇ ನನ್ನನ್ನು ಕಟ್ಟಿಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ: ಸಿದ್ದರಾಮಯ್ಯ

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 pm, Sat, 22 April 23

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್