ನಟ ಸುದೀಪ್​ ಯಾವಾಗ ಬಿಜೆಪಿ ಪರ ಪ್ರಚಾರಕ್ಕಿಳಿಯುತ್ತಾರೆ? ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ನಾಮಪತ್ರ ಸಲ್ಲಿಕೆ ಮುಗಿಯುವವರೆಗೆ ನಟ ಸುದೀಪ್ ಪ್ರಚಾರ ಇಲ್ಲ. ನಾಮಪತ್ರ ಸಲ್ಲಿಕೆ ಬಳಿಕ ರಾಜ್ಯಾದ್ಯಂತ ಸುದೀಪ್ ಪ್ರಚಾರ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಟ ಸುದೀಪ್​ ಯಾವಾಗ ಬಿಜೆಪಿ ಪರ ಪ್ರಚಾರಕ್ಕಿಳಿಯುತ್ತಾರೆ? ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
ವಿವೇಕ ಬಿರಾದಾರ
|

Updated on: Apr 18, 2023 | 1:19 PM

ಬಾಗಲಕೋಟೆ: ವಿಧಾನಸಭೆ ಚುನಾವಣೆಗೆ (Karnataka Assembly Election) ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ನಾಯಕರು ನಾಮಪತ್ರ ಸಲ್ಲಿಕೆ ವೇಳೆ ಶಕ್ತಿಪ್ರದರ್ಶನ ಮಾಡುತ್ತಿದ್ದಾರೆ. ಅಂತಿಮ ಹಂತದ ಮತಗಳ ಕ್ರೋಢೀಕರಣಕ್ಕೆ ಎಲ್ಲ ರಾಜಕೀಯ ಪಕ್ಷಗಳು ಮುಂದಾಗಿವೆ. ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ (Basavaraj Bommai), ನಟ ಕಿಚ್ಚ ಸುದೀಪ್ (Sudeep) ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಸಿಎಂ ಬೊಮ್ಮಾಯಿಯವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು. ಹಾಗೇ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಮತ್ತು ಸಿಎಂ ಬೊಮ್ಮಾಯಿಯವರು ಅವರು ನಿರ್ವಹಿಸಿದ ಕಾರ್ಯ ಮಾಡುವುದಾಗಿ ಹೇಳಿದ್ದರು. ಇದೀಗ ನಟ ಸುದೀಪ್​ ಅವರು ಪ್ರಚಾರದ ಅಖಾಡಕ್ಕೆ ಯಾವಾಗ ಇಳಿಯುತ್ತಾರೆ ಎಂಬ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದರು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು, ನಾಮಪತ್ರ ಸಲ್ಲಿಕೆ ಮುಗಿಯುವವರೆಗೆ ನಟ ಸುದೀಪ್ ಪ್ರಚಾರ ಇಲ್ಲ ಎಂದು ಹೇಳಿದ್ದಾರೆ.

ಜಿಲ್ಲೆಯ ಮುಧೋಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾಮಪತ್ರ ಸಲ್ಲಿಕೆ ಮುಗಿಯುವವರೆಗೆ ನಟ ಸುದೀಪ್ ಪ್ರಚಾರ ಮಾಡುವುದಿಲ್ಲ. ನಾಮಪತ್ರ ಸಲ್ಲಿಕೆ ಬಳಿಕ ರಾಜ್ಯಾದ್ಯಂತ ಸುದೀಪ್ ಪ್ರಚಾರ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ನನಗೆ ಮಾತ್ರವಲ್ಲ ರಾಮದಾಸ್​ಗೂ ಟಿಕೆಟ್​ ತಪ್ಪಿಸಿದ್ದು ಬಿಎಲ್​ ಸಂತೋಷ್​: ಸಾಲು ಸಾಲು ಆರೋಪಗಳನ್ನು ಮಾಡಿದ ಜಗದೀಶ್ ಶೆಟ್ಟರ್

ನನ್ನ ಟಿಕೆಟ್ ಕೈ ತಪ್ಪಲು ಬಿಎಲ್.ಸಂತೋಷ್ ಕಾರಣ ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಅದು ಸರಿಯಲ್ಲ, ನಾವು ರಾಜ್ಯಮಟ್ಟದಿಂದ ಅವರ ಹೆಸರನ್ನು ಕಳುಹಿಸಿದ್ದೇವು. ಮೇಲ್ಮಟ್ಟದಲ್ಲಿ ಒಂದು ನೀತಿಯ ಮೇಲೆ ತೀರ್ಮಾನ ಕೈಗೊಂಡಿದ್ದಾರೆ. ಈಗಾಗಲೇ ಅದನ್ನ ಸಾಕಷ್ಟು ಬಾರಿ ಹೇಳಿದ್ದೇನೆ. ಅದರ ಬಗ್ಗೆ ನಾವೇನು ತಲೆಕೆಡಿಸಿಕೊಳ್ಳಲ್ಲ. ಉತ್ತರ ಕರ್ನಾಟಕದಲ್ಲಿ ಹೆಚ್ಚು ಸೀಟ್ ಗೆಲ್ಲಲು ರೂಪುರೇಷೆಗಳನ್ನು ಮಾಡಿದ್ದೇವೆ. ಹೆಚ್ಚು ಸೀಟ್ ಗೆದ್ದೇ ಗೆಲ್ಲುತ್ತೇವೆ ಎಂದರು.

ಬಿಜೆಪಿ ಕೆಲವು ಜನರ ಕಪಿಮುಷ್ಟಿಯಲ್ಲಿದೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ನಮ್ಮದು ರಾಷ್ಟ್ರೀಯ ಪಕ್ಷ. ಒಂದು ವ್ಯವಸ್ಥೆ ಇದೆ, ಎರಡನೇಯದಾಗಿ ಯಾರ್ಯಾರು, ಕೇಂದ್ರ ಅಗಿದೆ ಅಂತಾರಲ್ಲ, ಮೊನ್ನೆವರೆಗೂ ಅವರೂ ಕೇಂದ್ರ ಆಗಿದ್ದಾರಲ್ಲಾ ಎಂದು ತಿರುಗೇಟು ನೀಡಿದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಲಿಂಗಾಯತ ಮತ ವಿಭಜನೆ ಆಗುತ್ತಾ ಎನ್ನುವ ವಿಚಾರವಾಗಿ ಮಾತನಾಡಿ ಚುನಾವಣೆ ಬಂದಾಗ ಕಾಂಗ್ರೆಸ್ ಪಕ್ಷ ಲಿಂಗಾಯತ ಪ್ರೀತಿ ತೋರಿಸುತ್ತಿದೆ. ಲಿಂಗಾಯತರನ್ನೇ ಒಡೆದು, ಛಿದ್ರ ಛಿದ್ರ ಮಾಡಲು ಹೊರಟಿತ್ತಲ್ಲ. ಕಾಂಗ್ರೆಸ್​ನ ಈ ಕ್ರಮ ಯಾರೂ ಮರೆಯಲ್ಲ. ಲಿಂಗಾಯತರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ವಿರೋಧ ಮಾಡಿತ್ತು. ನಾವು 2ಡಿ ಮಾಡಿ ಮೀಸಲಾತಿ ಪ್ರಮಾಣ ಹೆಚ್ಚಿಸಿದ ಮೇಲೆ, ಕಾಂಗ್ರೆಸ್ ಪರೋಕ್ಷವಾಗಿ ಕುಮ್ಮಕ್ಕು ನೀಡಿ ಸುಪ್ರೀಂ ಕೋರ್ಟ್​​ಗೆ ಹಾಕಿಸಿದರು. ಲಿಂಗಾಯತರ ಪ್ರತಿಯೊಂದ ಅಭಿವೃದ್ದಿಯಲ್ಲೂ ಕಾಂಗ್ರೆಸ್ ವಿರೋಧ ಮಾಡಿದೆ ಎಂದು ವಾಗ್ದಾಳಿ ಮಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ