ಮಹಿಳೆಯರಿಗೆ ಉಚಿತ ಪ್ರಯಾಣ; ಕಾಂಗ್ರೆಸ್​​ ಘೋಷಣೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ, ಮಹಿಳೆಯರ ಉಚಿತ ಪ್ರಯಾಣಿಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮಹಿಳೆಯರಿಗೆ ಉಚಿತ ಪ್ರಯಾಣ; ಕಾಂಗ್ರೆಸ್​​ ಘೋಷಣೆಗೆ ಸಿಎಂ ಬೊಮ್ಮಾಯಿ ತಿರುಗೇಟು
ಕಾಂಗ್ರೆಸ್​ ಉಚಿತ ಘೋಷಣೆಗೆ ಬಸವರಾಜ ಬೊಮ್ಮಾಯಿ ತಿರುಗೇಟು
Follow us
Rakesh Nayak Manchi
|

Updated on:Apr 27, 2023 | 10:58 PM

ಬೆಂಗಳೂರು: ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂಬ ಕಾಂಗ್ರೆಸ್​ನ (Congress) ಘೋಷಣೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಮಹಿಳೆಯರ ಉಚಿತ ಪ್ರಯಾಣಕ್ಕೆ (Free travel for women) ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್​ಗೆ ಯಾವುದೇ ಐಡಿಯಾಗಳಿಲ್ಲದೆ, ರಾಹುಲ್ ಗಾಂಧಿಗೆ ವಾಸ್ತವಂಶ ಗೊತ್ತಿಲ್ಲದೆ ಘೋಷಣೆ ಮಾಡಿದ್ದಾರೆ ಎಂದರು.

ರಾಹುಲ್ ಗಾಂಧಿ ಘೋಷಣೆ ಮಾಡಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ಟ್ವೀಟ್ ಮಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ ನಮ್ಮ ಸರ್ಕಾರ ಬಜೆಟ್​ನಲ್ಲಿ ಘೋಷಣೆ ಮಾಡಿದೆ. ಅದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೂಡ ಜರುಗಿಸಲಾಗಿದೆ. ಕಾಂಗ್ರೆಸ್​ಗೆ ಯಾವುದೇ ಐಡಿಯಾಗಳಿಲ್ಲದೆ, ರಾಹುಲ್ ಗಾಂಧಿಗೆ ವಾಸ್ತವಂಶ ಗೊತ್ತಿಲ್ಲದೆ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್​ನ ಈ ಸುಳ್ಳು ಘೋಷಣೆಗಳನ್ನು ಜನ ನಂಬುವುದಿಲ್ಲ ಎಂದು ಹೇಳಿದರು.

ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಮತದಾರರನ್ನು ತಮ್ಮತ್ತ ಸೆಳೆಯಲು ಮೇಲಿಂದ ಮೇಲೆ ಉಚಿತ ಘೋಷಣೆಗಳನ್ನು ಮಾಡುತ್ತಿರುವ ಕಾಂಗ್ರೆಸ್, ಗ್ಯಾರಂಟಿ ಕಾರ್ಡ್​ಗಳನ್ನು ಕೂಡ ವಿತರಿಸುತ್ತಿದೆ. ಈಗಾಗಲೇ ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಕಾಂಗ್ರೆಸ್ ಈಗಾಗಲೇ ಘೋಷಿಸಿದೆ. ಇದೀಗ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಣೆ ಮಾಡಿದೆ.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ವಿಚಾರ: ಸುರ್ಜೇವಾಲ ಟ್ವೀಟ್​ಗೆ ಸಿಎಂ ಬೊಮ್ಮಾಯಿ ತಿರುಗೇಟು

ಮಂಗಳೂರಿನ ಅಡ್ಯಾರು ಬಳಿ ಕಾಂಗ್ರೆಸ್ ಪಕ್ಷದ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಮಹಿಳೆಯರಿಗಾಗಿ ಮತ್ತೊಂದು ಯೋಜನೆ ಘೋಷಣೆ ಮಾಡಿದರು. ಇದು ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಘೋಷಿಸಿದ ಐದನೇ ಗ್ಯಾರಂಟಿ ಆಗಿದೆ. ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದೂ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಅವರು ವಾಗ್ದಾನ ಮಾಡಿದರು.

ಕಾಂಗ್ರೆಸ್ ಭರವಸೆ ಈಡೇರಿಸುವುದಿಲ್ಲವೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ, ನಾವು ಭರವಸೆ ಈಡೇರಿಸುತ್ತೇವೆ, ಇದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಭರವಸೆ ನಾವು ಈಡೇರಿಸುತ್ತೇವೆ. ಪ್ರಧಾನಿ ಮೋದಿ ಅವರೇ ಭರವಸೆಗಳನ್ನು ಈಡೇರಿಸಿಲ್ಲ. ಬಡವರು, ರೈತರು, ಯುವಕರಿಗೆ ನೀಡಿದ ಭರವಸೆಗಳನ್ನು ಅವರು ಈಡೇರಿಸಿಲ್ಲ. ಆದರೆ, ಉದ್ಯಮಿ ಅದಾನಿಗೆ ನೀಡಿದ ಎಲ್ಲಾ ಭರವಸೆ ಈಡೇರಿಸಿದ್ದಾರೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 pm, Thu, 27 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ