ಬೆಂಗಳೂರು: ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂಬ ಕಾಂಗ್ರೆಸ್ನ (Congress) ಘೋಷಣೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಮಹಿಳೆಯರ ಉಚಿತ ಪ್ರಯಾಣಕ್ಕೆ (Free travel for women) ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ಗೆ ಯಾವುದೇ ಐಡಿಯಾಗಳಿಲ್ಲದೆ, ರಾಹುಲ್ ಗಾಂಧಿಗೆ ವಾಸ್ತವಂಶ ಗೊತ್ತಿಲ್ಲದೆ ಘೋಷಣೆ ಮಾಡಿದ್ದಾರೆ ಎಂದರು.
ರಾಹುಲ್ ಗಾಂಧಿ ಘೋಷಣೆ ಮಾಡಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ಟ್ವೀಟ್ ಮಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ ನಮ್ಮ ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿದೆ. ಅದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೂಡ ಜರುಗಿಸಲಾಗಿದೆ. ಕಾಂಗ್ರೆಸ್ಗೆ ಯಾವುದೇ ಐಡಿಯಾಗಳಿಲ್ಲದೆ, ರಾಹುಲ್ ಗಾಂಧಿಗೆ ವಾಸ್ತವಂಶ ಗೊತ್ತಿಲ್ಲದೆ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ನ ಈ ಸುಳ್ಳು ಘೋಷಣೆಗಳನ್ನು ಜನ ನಂಬುವುದಿಲ್ಲ ಎಂದು ಹೇಳಿದರು.
This facility to women of free bus passes is already announced in our budget and necessary provisions have been made. @INCKarnataka is running out of ideas. @RahulGandhi as usual is ignorant of the facts. However people will not believe congress guarantees. https://t.co/SU9dYgs7GK
— Basavaraj S Bommai (@BSBommai) April 27, 2023
ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಮತದಾರರನ್ನು ತಮ್ಮತ್ತ ಸೆಳೆಯಲು ಮೇಲಿಂದ ಮೇಲೆ ಉಚಿತ ಘೋಷಣೆಗಳನ್ನು ಮಾಡುತ್ತಿರುವ ಕಾಂಗ್ರೆಸ್, ಗ್ಯಾರಂಟಿ ಕಾರ್ಡ್ಗಳನ್ನು ಕೂಡ ವಿತರಿಸುತ್ತಿದೆ. ಈಗಾಗಲೇ ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಕಾಂಗ್ರೆಸ್ ಈಗಾಗಲೇ ಘೋಷಿಸಿದೆ. ಇದೀಗ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಣೆ ಮಾಡಿದೆ.
ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ವಿಚಾರ: ಸುರ್ಜೇವಾಲ ಟ್ವೀಟ್ಗೆ ಸಿಎಂ ಬೊಮ್ಮಾಯಿ ತಿರುಗೇಟು
ಮಂಗಳೂರಿನ ಅಡ್ಯಾರು ಬಳಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಮಹಿಳೆಯರಿಗಾಗಿ ಮತ್ತೊಂದು ಯೋಜನೆ ಘೋಷಣೆ ಮಾಡಿದರು. ಇದು ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಘೋಷಿಸಿದ ಐದನೇ ಗ್ಯಾರಂಟಿ ಆಗಿದೆ. ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದೂ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಅವರು ವಾಗ್ದಾನ ಮಾಡಿದರು.
ಕಾಂಗ್ರೆಸ್ ಭರವಸೆ ಈಡೇರಿಸುವುದಿಲ್ಲವೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ, ನಾವು ಭರವಸೆ ಈಡೇರಿಸುತ್ತೇವೆ, ಇದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಭರವಸೆ ನಾವು ಈಡೇರಿಸುತ್ತೇವೆ. ಪ್ರಧಾನಿ ಮೋದಿ ಅವರೇ ಭರವಸೆಗಳನ್ನು ಈಡೇರಿಸಿಲ್ಲ. ಬಡವರು, ರೈತರು, ಯುವಕರಿಗೆ ನೀಡಿದ ಭರವಸೆಗಳನ್ನು ಅವರು ಈಡೇರಿಸಿಲ್ಲ. ಆದರೆ, ಉದ್ಯಮಿ ಅದಾನಿಗೆ ನೀಡಿದ ಎಲ್ಲಾ ಭರವಸೆ ಈಡೇರಿಸಿದ್ದಾರೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:54 pm, Thu, 27 April 23