ಮತ್ತೆ ಮುನ್ನೆಲೆಗೆ ಬಂತೇ ಹಿಂದೂ ಅಶ್ಲೀಲ ಪದ ಚರ್ಚೆ? ನಮ್ಮ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದ ಬೊಮ್ಮಾಯಿ

ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ, ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ನೀಡಿದ್ದ ವಿವಾದಿತ ಹೇಳಿಕೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.

ಮತ್ತೆ ಮುನ್ನೆಲೆಗೆ ಬಂತೇ ಹಿಂದೂ ಅಶ್ಲೀಲ ಪದ ಚರ್ಚೆ? ನಮ್ಮ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

Updated on: Apr 26, 2023 | 3:08 PM

ಮುಖ್ಯಾಂಶಗಳು

  • ಸತೀಶ್ ಜಾರಕಿಹೊಳಿ ನಮ್ಮ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ; ಬೊಮ್ಮಾಯಿ
  • ನಾವು ಮಾಡಿದ ಅಭಿವೃದ್ಧಿ ಮತ್ತು ಸೇವೆ ಮೇಲೆ ಮತ ಪಡೆಯಬೇಕಿದೆ ಎಂದ ಸಿಎಂ
  • ಬಿಜೆಪಿ ಅಭ್ಯರ್ಥಿ ಬಸವರಾಜ ಹುಂದ್ರಿ ಅವರನ್ನು 25 ಸಾವಿರ ಮತಗಳಿಂದ ಗೆಲ್ಲಿಸುವಂತೆ ಮನವಿ

ಬೆಳಗಾವಿ: ಹಿಂದೂ ಎಂಬ ಪದ ಅಶ್ಲೀಲ, ಅದು ಪರ್ಷಿಯನ್​ಗೆ ಸಂಬಂಧಿಸಿದ್ದು ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿದ್ದ ಹೇಳಿಕೆ ಚುನಾವಣಾ ಪ್ರಚಾರದ ಭರಾಟೆಯ ಈ ಸಂದರ್ಭದಲ್ಲಿ ಮತ್ತೆ ಮುನ್ನೆಲೆಗೆ ಬರಲಿದೆಯೇ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಆ ವಿಚಾರವಾಗಿ ಪರೋಕ್ಷವಾಗಿ ಪ್ರಸ್ತಾಪಿಸಿ ಸತೀಶ್ ಜಾರಕಿಹೊಳಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವುದು ಈ ಪ್ರಶ್ನೆ ಹುಟ್ಟುಹಾಕಿದೆ. ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ, ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ನೀಡಿದ್ದ ವಿವಾದಿತ ಹೇಳಿಕೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.

ಸತೀಶ್ ಜಾರಕಿಹೊಳಿ ನಮ್ಮ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ನಾವು ಮಾಡಿದ ಅಭಿವೃದ್ಧಿ ಮತ್ತು ಸೇವೆ ಮೇಲೆ ಮತ ಪಡೆಯಬೇಕಿದೆ. ಜನರ ಭಾವನೆ ಜೊತೆ ಚೆಲ್ಲಾಟ ಸರಿಯಲ್ಲ. ಎಲ್ಲರಿಗೂ ಅವರವರ ಸಂಸ್ಕೃತಿ, ಪರಂಪರೆ ಬಗ್ಗೆ ಸ್ವಾಭಿಮಾನ ಇರುತ್ತದೆ. ಅದಕ್ಕೆ ಧಕ್ಕೆ ತರುವಂತಹ ಕೆಲಸವನ್ನು ಯಾರೂ ಕೂಡ ಮಾಡಬಾರದು. ಈ ಬಾರಿ ಯಮಕನಮರಡಿ ಕ್ಷೇತ್ರದಲ್ಲಿ ಪರಿವರ್ತನೆ ಕ್ರಾಂತಿ ಆಗಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಜತೆಗೆ, ಬಿಜೆಪಿ ಅಭ್ಯರ್ಥಿ ಬಸವರಾಜ ಹುಂದ್ರಿ ಅವರನ್ನು 25 ಸಾವಿರ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: TV9 Kannada CVoter survey: ಅತಂತ್ರ ವಿಧಾನಸಭೆಯತ್ತ ರಾಜ್ಯ; ಟಿವಿ9, ಸಿವೋಟರ್ ಸಮೀಕ್ಷೆ

‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್​ಗೆ ಸೇರಿದ್ದು. ಅದಕ್ಕೆ ಅಶ್ಲೀಲ ಅರ್ಥವಿದೆ ಎಂದು ಸತೀಶ್ ಜಾರಕಿಹೊಳಿ 2022ರ ನವೆಂಬರ್​​ನಲ್ಲಿ ಹೇಳಿದ್ದರು. ಇದು ವಿವಾದಕ್ಕೆ ಗ್ರಾಸವಾಗಿದ್ದಲ್ಲದೆ, ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಷರತ್ತಿನೊಂದಿಗೆ ಬಿಜೆಪಿಗೆ ಬಂದಿಲ್ಲವೆಂದ ಕುಮಟಳ್ಳಿ

ಈ ಮಧ್ಯೆ, ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಶಾಸಕ ಮಹೇಶ್ ಕುಮಟಳ್ಳಿ, 2019ರಲ್ಲಿ ಬಿಜೆಪಿಗೆ ಸೇರಿದಾಗ ಯಾವುದೇ ಷರತ್ತು ವಿಧಿಸಿಲ್ಲ. ನನಗೆ ಸಚಿವ ಸ್ಥಾನ ಸಿಗದಿದ್ದಾಗಲೂ ಬೇಸರವಾಗಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೊಡಬೇಕೆಂದು ಯಡಿಯೂರಪ್ಪ ಬಳಿ ಕೇಳಿದೆ. ಅವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಅತೀ ಹೆಚ್ಚು ಅನುದಾನ ತಂದು ಅಥಣಿ ಕ್ಷೇತ್ರ ಅಭಿವೃದ್ಧಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us