ಲಿಂಗಾಯತ ವೇದಿಕೆ ಎನ್ನುವುದು ಒಂದು ಕಾಲ್ಪನಿಕ ಸಂಘಟನೆ: ಸಿಎಂ ಬೊಮ್ಮಾಯಿ

ವೀರಶೈವ ಸಮುದಾಯ ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರಿಗೆ ನಾವು ಗೌರವ ಕೊಡುತ್ತೇವೆ. ಚುನಾವಣೆ ವೇಳೆ ಪಕ್ಷಕ್ಕೆ ಸಂಸ್ಥೆ ಹೆಸರು ಬಳಸುವುದು ಸರಿಯಲ್ಲ. ಲಿಂಗಾಯತ ವೇದಿಕೆ ಅನ್ನೋದು ಒಂದು ಕಾಲ್ಪನಿಕ ಸಂಘಟನೆ. ನಾಲ್ಕು ಜನ ಸೇರಿ ಏನೋ ಹೇಳಿದರೇ ಲಿಂಗಾಯತರ ಧ್ವನಿ ಆಗುತ್ತಾ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಲಿಂಗಾಯತ ವೇದಿಕೆ ಎನ್ನುವುದು ಒಂದು ಕಾಲ್ಪನಿಕ ಸಂಘಟನೆ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
ವಿವೇಕ ಬಿರಾದಾರ
|

Updated on: May 08, 2023 | 10:54 AM

ಹುಬ್ಬಳ್ಳಿ: ವೀರಶೈವ (Veerashaiva) ಸಮುದಾಯ ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರಿಗೆ ನಾವು ಗೌರವ ಕೊಡುತ್ತೇವೆ. ಚುನಾವಣೆ ವೇಳೆ ಪಕ್ಷಕ್ಕೆ ಸಂಸ್ಥೆ ಹೆಸರು ಬಳಸುವುದು ಸರಿಯಲ್ಲ. ಲಿಂಗಾಯತ (Lingayat) ವೇದಿಕೆ ಎನ್ನುವುದು ಒಂದು ಕಾಲ್ಪನಿಕ ಸಂಘಟನೆ. ನಾಲ್ಕು ಜನ ಸೇರಿ ಏನೋ ಹೇಳಿದರೇ ಲಿಂಗಾಯತರ ಧ್ವನಿ ಆಗುತ್ತಾ? ಲಿಂಗಾಯತ ಸಮುದಾಯ ಸಮುದ್ರವಿದ್ದಂತೆ. ಲಿಂಗಾಯತ ವೇದಿಕೆ ಚುನಾವಣೆ ವೇಳೆ ಹುಟ್ಟಿಕೊಂಡ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ನಿಂದ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿದ ಅವರು ಭ್ರಷ್ಟಾಚಾರದ ದಾಖಲೆ ಕೊಡುವಂತೆ ಚುಣಾವಣಾ ಆಯೋಗ ಕೇಳಿದೆ. ನಮ್ಮ ವಿರುದ್ಧ ಯಾವುದೇ ಕೇಸ್​ ದಾಖಲಾಗಿಲ್ಲ, ಸಾಕ್ಷಿ ಕೂಡ ಇಲ್ಲ. ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ಸಿಗರ ಮೇಲೆಯೇ ಭ್ರಷ್ಟಾಚಾರ ಕೇಸ್ ಇದೆ. ತಮ್ಮ ಮೇಲೆಯೇ ಕೇಸ್​ ಇದ್ದು, ಕೋರ್ಟ್​​ಗೆ ಅಲೆದಾಡುತ್ತಿದ್ದಾರೆ. ಯಾವ ನೈತಿಕತೆಯಿಂದ ನಮ್ಮನ್ನು ಪ್ರಶ್ನಿಸುತ್ತಾರೆ ಎಂದು ವಾಗ್ದಾಳಿ ಮಾಡಿದರು.

ಐಟಿ ಅಧಿಕಾರಿಗಳ ದಾಳಿ ವಿಚಾರವಾಗಿ ಮಾತನಾಡಿದ ಅವರು ಐಟಿ ಅಧಿಕಾರಿಗಳು ಎಲ್ಲ ಜಿಲ್ಲೆಯಲ್ಲಿ ಇದ್ದಾರೆ. ಎಲ್ಲಿ ತಪ್ಪು‌ ನಡೆಯುತ್ತೆ ಅಂತ ಅವರಿಗೆ ಮಾಹಿತಿ ಇರುತ್ತೆ. ಕಾಂಗ್ರೆಸ್​ನವರು ತಪ್ಪ ಮಾಡಿದರೇ ನಾವು ಏನ್ ಮಾಡೋಕಾಗುತ್ತೆ? ಕಾಂಗ್ರೆಸ್​ನವರು ಮೊದಲೇ ಹೇಳುತ್ತಾರೆ ರೈಡ್ ಅಗುತ್ತೆ ಅಂತ. ಎಂ‌ಬಿ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಮೊದಲೇ ಹೇಳಿ ಬಿಡೋದು. ಇದು ಕಾಂಗ್ರೆಸ್ ನವರ ತಂತ್ರಗಾರಿಕೆ. ಮೊದಲ ತಪ್ಪು ಮಾಡೋದನ್ನು ಕಾಂಗ್ರೆಸ್ ಬಿಡಲಿ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಹಾನಗಲ್​: ಜೈ ಭಜರಂಗಿ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಇನ್ನು ಬಿಜೆಪಿ ಕೇಂದ್ರ ನಾಯಕರ ರಾಜ್ಯ ಪ್ರವಾಸ ಕುರಿತು ಮಾತನಾಡಿದ ಅವರು ನಮ್ಮ ರಾಷ್ಟ್ರೀಯ ನಾಯಕರ ಎಲ್ಲ ಚುನಾವಣೆಯಲ್ಲಿ ರಾಜ್ಯಕ್ಕೆ‌ ಬಂದಿದ್ದಾರೆ. ರಾಷ್ಟ್ರೀಯ ನಾಯಕರದ್ದು ಹಾಗೂ ಕರ್ನಾಟಕದ ಜನರದ್ದು ಭಾವನಾತ್ಮಕ ಸಂಬಂಧವಿದೆ. ಇದರಿಂದ ದೊಡ್ಡ ಮಟ್ಟದಲ್ಲಿ ಬೂಸ್ಟರ್ ಡೋಸ್ ಸಿಗಲಿದೆ‌. ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ. ಎಲ್ಲಾ ನಾಯಕರು ಬಹಿರಂಗ ಸಭೆ, ರೋಡ್​ ಶೋ ನಡೆಸುತ್ತಿದ್ದಾರೆ. 224 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್