ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ದೂರು

|

Updated on: Apr 22, 2023 | 6:59 PM

ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ದೂರು
ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್
Follow us on

ಚಿಕ್ಕಬಳ್ಳಾಫುರ: ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ನೀತಿ ಸಂಹಿತೆ (Code of Conduct) ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕೆಲವರ ಬಣ್ಣ ಬಯಲು ಮಾಡುತ್ತೇನೆ ಅಂತ ವಾಟ್ಸಾಪ್​ ಚಾಟ್​ ಮಾಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಪ್ರದೀಪ್ ಈಶ್ವರ್ ವಿರುದ್ಧ ಕಲಂ 171ಜಿ ಐಪಿಸಿ ಮತ್ತು ಸೆಕ್ಷನ್ 125ರ ಜನಪ್ರತಿನಿಧಿ ಕಾಯ್ದೆಯಡಿ ಕೇಸ್​ ಹಾಕಲಾಗಿದೆ. ಇನ್ನು ಇತ್ತೀಚೆಗೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ನಿಪಾಣಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸ್ಥಳೀಯ ಪುರಸಭೆಯ ಪ್ರೌಢಶಾಲೆಯಲ್ಲಿ ಬುಧವಾರ ಸಂಜೆ 5ರಿಂದ ರಾತ್ರಿ 10ರವರೆಗೆ ಆಯೋಜಿಸಿದ್ದ ‘ಅರಿಶಿಣ ಕುಂಕುಮ’ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೆ ಬಂದವರಿಗಾಗಿ ಆಹಾರ ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಅಲ್ಲದೆ ಕಾರ್ಯಕ್ರಮದ ಸ್ಥಳದಲ್ಲಿ ಸ್ಥಳೀಯ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಚಿತ್ರಗಳ ಬ್ಯಾನರ್​ಗಳು ಹಾಗೂ ಬಿಜೆಪಿ ಧ್ವಜಗಳನ್ನು ಹಾಕಲಾಗಿತ್ತು. ಹೀಗಾಗಿ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ಎಫ್​ಐಆರ್​ ದಾಖಲಾಗಿತ್ತು.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್‌ಐಆರ್

ಜೊತೆಗೆ ಕಾರ್ಯಕ್ರಮ ಆಯೋಜಿಸಿದ್ದ ರಣರಾಗಿಣಿ ಮಹಿಳಾ ಮಂಡಳದ ಅಧ್ಯಕ್ಷರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಫ್ಲೈಯಿಂಗ್ ಸ್ಕ್ವಾಡ್ ಮುಖ್ಯಸ್ಥರೂ ಆಗಿರುವ ನಿಪಾನಿ ನಗರ ಪಾಲಿಕೆಯ ಆಯುಕ್ತ ಜಗದೀಶ್ ಹುಲಗೆಜ್ಜಿ ಘಟನೆಯ ವಿಡಿಯೋ ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು.

ಅನುಮತಿ ಪಡೆಯದೇ ಎಂಪಿ ರೇಣುಕಾಚಾರ್ಯ ಸಭೆ  

ಬೆಂಗಳೂರು: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಪಡೆಯದೇ ನಗರದ ಶಿವಾನಂದ ಸರ್ಕಲ್​ ಬಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಹೊನ್ನಾಳಿ ಕ್ಷೇತ್ರದ ಜನರೊಂದಿಗೆ ಇತ್ತೀಚೆಗೆ ಸಭೆ ನಡೆಸಿದ್ದರು. ಮಾಹಿತಿ ತಿಳಿದ ಚುನಾವಣಾ ಅಧಿಕಾರಿಗಳು ರೇಣುಕಾಚಾರ್ಯ ಅವರ ಭಾಷಣದ ವೇಳೆ ದಾಳಿ ನಡೆಸಿ ಸಭೆ ನಿಲ್ಲಿಸುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಚುನಾವಣಾಧಿಕಾರಿಗಳ ವಿರುದ್ಧವೇ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಶಾಸಕ ಕೃಷ್ಣ ಭೈರೇಗೌಡ

ಸಭೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಂಡ ಅಧಿಕಾರಿಗಳು ರೇಣುಕಾಚಾರ್ಯ ಅವರು ಬಳಸುತ್ತಿದ್ದ ಮೈಕ್ ಕಸಿಯಲು ಯತ್ನಿಸಿದ್ದರು. ಆದರೆ ಕ್ಯಾರೇ ಎನ್ನದ ರೇಣುಕಾಚಾರ್ಯ ಭಾಷಣ ಮುಂದುವರಿಸಿದ್ದರು. ಕೊನೆಗೆ ಅಧಿಕಾರಿಗಳ ಸೂಚನೆಯಂತೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು.

ಚುನಾವಣಾಧಿಕಾರಿಗಳ ವಿರುದ್ಧವೇ ದೂರು

ಚುನಾವಣಾಧಿಕಾರಿಗಳ ವಿರುದ್ಧವೇ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಶಾಸಕ ಕೃಷ್ಣ ಭೈರೇಗೌಡ ದೂರು ನೀಡಿದ್ದರು. ವಕೀಲರೊಂದಿಗೆ ತೆರಳಿ ಕೃಷ್ಣ ಭೈರೇಗೌಡ ದೂರು ಸಲ್ಲಿಸಿದ್ದರು. ಕ್ಷೇತ್ರದ ಮತದಾರರಿಗೆ ಆಮಿಷವೊಡ್ಡಲು ಬಿಜೆಪಿ ಮುಖಂಡ ಕೋಟ್ಯಂತರ ಮೌಲ್ಯದ ಸಾಮಗ್ರಿ ಸಂಗ್ರಹಿಸಿದ್ದರು. ಆದರೂ ಚುನಾವಣಾ ಅಧಿಕಾರಿಗಳು ಯಾವುದೇ ಪ್ರಕರಣ ದಾಖಲಿಸಿಲ್ಲ. ಯಾರೋ ಬೇನಾಮಿ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿದ್ದು, ಕೇಸ್​​ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಚುನಾವಣಾಧಿಕಾರಿಗಳ ವಿರುದ್ಧವೇ ದೂರು ದಾಖಲಿಸಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:59 pm, Sat, 22 April 23