ಬೆಂಗಳೂರು: ಮೊದಲ ಕ್ಯಾಬಿನೆಟ್ನಲ್ಲಿ (Cabinet) 5 ಗ್ಯಾರಂಟಿಗಳನ್ನು (5 Guarantee) ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಮೊದಲ ಕ್ಯಾಬಿನೆಟ್ನಲ್ಲಿ ಜಾರಿ ಮಾಡುತ್ತೇವೆ. ಗ್ಯಾರಂಟಿಗಳನ್ನು ಪ್ರಾಕ್ಟಿಕಲ್ ಆಗಿ ವರ್ಕ್ ಮಾಡಿ ಜಾರಿ ಮಾಡುತ್ತೇವೆ. ಆಯಾ ಇಲಾಖೆ ಸಚಿವರು ಕೂತು ಇದರ ಬಗ್ಗೆ ವರ್ಕ್ ಮಾಡಿ ಜಾರಿ ಮಾಡುತ್ತಾರೆ. ಕಾಂಗ್ರೆಸ್ನ (Congress) ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತವೆ. ಹಾಗೆ ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಹೀಗಾಗಿ ಗ್ಯಾರಂಟಿಗಳಿಗೆ ಮಾನದಂಡ ಇರುತ್ತೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (G Parameshwara) ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗ್ಯಾರಂಟಿಗಳಿಗೆ ಕಂಡೀಷನ್ಸ್ ಅಪ್ಲೈ ಎಂದು ಹೇಳಿದ್ದಾರೆ. 2013 ರಲ್ಲಿ ಪರಮೇಶ್ವರಗೆ ಅನ್ಯಾಯ ಆಯ್ತು. ಈ ಬಾರಿ ಅದನ್ನ ಹೈಕಮಾಂಡ್ ಸರಿ ಮಾಡುತ್ತಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಪಕ್ಷದ ವರಿಷ್ಠರನ್ನು ನಂಬಿದ್ದೇನೆ. ನಾನು ಕೂಡ 50 ಶಾಸಕರ ಗುಂಪು ಕಟ್ಟಿಕೊಂಡು ಹೋಗಬಹುದು. ಆದರೆ ನಾನು ಹಾಗೆ ಮಾಡುವುದಿಲ್ಲ. ನನಗೆ ಪ್ರಿನ್ಸಿಪಲ್ ಇದೆ. ನನಗೆ ಶಿಸ್ತು ಮುಖ್ಯ. ಹೈಕಮಾಂಡ್ ಜವಾಬ್ದಾರಿ ಕೊಟ್ಟರೆ ಖಂಡಿತ ಮಾಡುತ್ತೇನೆ. ಅವಕಾಶ ಕೊಟ್ಟರೆ ಮಾಡೊಲ್ಲ ಅಂತ ಹೇಳೊಲ್ಲ. ಹೈಕಮಾಂಡ್ಗೆ ನನ್ನ ಬಗ್ಗೆ, ನನ್ನ ಕೆಲಸದ ಬಗ್ಗೆ ಎಲ್ಲವೂ ಗೊತ್ತಿದೆ. ಲಾಬಿ ಮಾಡಬಾರದು ಅಂತ ಸುಮ್ಮನೆ ಇದ್ದೇನೆ. ಸುಮ್ಮನೆ ಇದ್ದೇನೆ ಅಂದರೆ ಅಸಮರ್ಥ ಅಂತ ಅಲ್ಲ. ನಾನು ಸಮರ್ಥನೆ ಎನ್ನುವ ಮೂಲಕ ಪರೋಕ್ಷವಾಗಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು.
ಇನ್ನು ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು ಸುಸೂತ್ರವಾಗಿ ಮುಖ್ಯಮಂತ್ರಿ ಆಯ್ಕೆ ಆಗಲಿದೆ. ನಮ್ಮ ವರಿಷ್ಠರು ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಚರ್ಚೆ ಮಾಡಿ ನಿರ್ಧರಿಸುತ್ತಾರೆ ಎಂದರು.
ಇದನ್ನೂ ಓದಿ: ಜಗಳೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೋಲಿಗೆ ಕಾರಣವಾಯ್ತು ನೋಟಾ, ಹೇಗಂತೀರಾ? ಇಲ್ಲಿದೆ ನೋಡಿ
ಅಧಿಕಾರಕ್ಕೆ ಬಂದ ಮೇಲೆ ಅಧ್ಯಕ್ಷರಿಗೆ ಮುಖ್ಯಮಂತ್ರಿ ಸ್ಥಾನ ಕೊಡುವುದು ಪದ್ಧತಿ. ಸಿದ್ದರಾಮಯ್ಯ ಅವರು ಸಿಎಲ್ಪಿ ನಾಯಕರಾಗಿ ಕೆಲಸ ಮಾಡಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗಿದ್ದೇವು. ಸಿಎಂ ಯಾರು ಅಂತಾ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.
ಶಾಸಕರ ಜೊತೆ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡಿದ ವಿಚಾರವಾಗಿ ಮಾತನಾಡಿದ ಅವರು ಕೆಲವು ಶಾಸಕರು ಅವರ ನಾಯಕರ ಜೊತೆ ಹೋಗಿರುತ್ತಾರೆ. ನಾವು ಕೂಡ ಶಾಸಕರನ್ನು ಕರೆದುಕೊಂಡು ಹೋಗಬಹುದು. ಆದರೆ ನಾವು ಹೋಗಲ್ಲ. ಕೆಲವರು ಹೋಗಿದ್ದಾರೆ ಅಷ್ಟೆ. ಅದಕ್ಕೆ ಶಕ್ತಿ ಪ್ರದರ್ಶನ ಅನ್ನೋದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:47 am, Tue, 16 May 23