ಮತದಾನಕ್ಕೆ 2 ದಿನ ಬಾಕಿ ಇರುವಾಗಲೇ ಬಿಜೆಪಿ, ಕಾಂಗ್ರೆಸ್ಗೆ ಬಿಗ್ ಶಾಕ್, ಶಿರಹಟ್ಟಿ ಕ್ಷೇತ್ರದಲ್ಲಿ ರಾಜಕೀಯ ತಲ್ಲಣ
ಮತದಾನಕ್ಕೆ ಎರಡೇ ದಿನಗಳು ಬಾಕಿ ಉಳಿದಿದ್ದು, ಶಿರಹಟ್ಟಿ ಕ್ಷೇತ್ರದಲ್ಲಿ ಪ್ರಚಾರ ಜೋರಾಗಿದೆ. ಇದರ ಮಧ್ಯ ದಿಢೀರ್ ರಾಜಕೀಯ ಬೆಳವಣೆಯೊಂದು ನಡೆದಿದ್ದು, ಕೊನೆ ಕ್ಷಣದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಬಿಗ್ ಶಾಕ್ ಆಗಿದೆ.
ಗದಗ: ಕರ್ನಾಟಕ ವಿಧಾನಸಭೆ ಚುನಾವಣೆ ನಿರ್ಣಾಯಕ ಹಂತಕ್ಕೆ ತಲುಪಿದೆ. ಅಬ್ಬರದ ಪ್ರಚಾರಕ್ಕೆ ಇಂದೇ ತೆರೆಬೀಳಲಿದೆ. ಇನ್ನೆರಡು ದಿನದಲ್ಲಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಮತದಾರರ ಮನಗೆಲ್ಲಲು ಎಲ್ಲಾ ರಾಜಕೀಯ ಪಕ್ಷಗಳು ಕೊನೆ ಹಂತದ ಕಸರತ್ತು ನಡೆಸಿವೆ. ಬುಧವಾರ ಮತದಾನ ನಡೆಯಲಿದ್ದು, ಎರಡು ದಿನ ಮುಂಚಿತವಾಗಿ ಅಂದ್ರೆ ಇಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದ್ದು, ನಾಳೆಯಿಂದ ಮನೆ ಮನೆ ಪ್ರಚಾರ ಮಾಡಬೇಕಿದೆ. ಕೊನೆ ಕ್ಷಣಣದಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ರಾಜಕೀಯಲ ತಲ್ಲಣ ಸೃಷ್ಟಿಯಾಗಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗೆ ನಾಯಕರು ಬಿಗ್ ಶಾಕ್ ಕೊಟ್ಟಿದ್ದಾರೆ.
ಹೌದು….ಪಕ್ಷೇತರ ಅಭ್ಯರ್ಥಿ ಕೈಹಿಡಿದ ಪ್ರಮುಖ ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಮುಖ ಮುಖಂಡರು ಕೊನೆ ಕ್ಷಣದಲ್ಲಿ ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿಗೆ ಬೆಂಬಲ ಸೂಚಿಸಿದ್ದಾರೆ. ಕ್ಷೇತ್ರದ ಹೊರಗಿನ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದಕ್ಕೆ ಭಾರಿ ಅಸಮಾಧಾನ ಹಿನ್ನಲೆಯಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಸ್ಥಳೀಯ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದಾರೆ.
ಬಿಜೆಪಿ ಎಸ್ಟಿ ಸಮಾಜದ, ಪಂಚಮಸಾಲಿ ಪ್ರಮುಖ ಕೆಲ ಮುಖಂಡರು, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಣ್ಣವೀರಪ್ಪ ಹಳ್ಳೇಪ್ಪನವರ ಸೇರಿದಂತೆ ಹಲವು ಮುಖಂಡರು ಪಕ್ಷೇತರ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದಾರೆ. ಇನ್ನು ಮುಖ್ಯವಾಗಿ ಬಿಜೆಪಿ ಹಾಲಿ ಶಾಸಕ ರಾಮಣ್ಣ ಲಮಾಣಿ ಕೂಡ ಪಕ್ಷೇತರ ಅಭ್ಯರ್ಥಿ ಬೆಂಬಲಕ್ಕೆ ನಿಂತಿದ್ದು, ಜಿಲ್ಲಾ ರಾಜಕೀಯದಲ್ಲಿ ಅಲ್ ಚಲ್ ಎಬ್ಬಿಸಿದೆ. ಇನ್ನು ಕಾಂಗ್ರೆಸ್ ನಿಂದಲೂ ಶಿವಪ್ರಕಾಣಸ್ ಮಹಾಜನಶೆಟ್ಟೆ, ಎಂ ಎಸ್ ದೊಡ್ಡಗೌಡರ, ಲಕ್ಷ್ಮಮಣಘೌಡ ಪಾಟೀಲ್, ಎನ್ ಎನ್ ಗೋಕಾವಿ, ಪುರಸಭೆ ಸದಸ್ಯ ಮಂಜುನಾಥ ಗಂಟಿ ಸೇರಿ ಹಲವು ಮುಖಂಡರು ಪಕ್ಷೇತರ ಅಭ್ಯರ್ಥಿಗೆ ಜೈ ಎಂದಿದ್ದಾರೆ. ಇದರಿಂದ ಎರಡು ರಾಷ್ಟ್ರೀಯ ಪಕ್ಷಗಳಿಗೆ ಮರ್ಮಾಘಾತವಾಗಿದೆ.
ಶಿರಹಟ್ಟಿ ಮೀಸಲು ಕ್ಷೇತ್ರದಿಂದ 14 ಅಭ್ಯರ್ಥಿಗಳು ಕಣದಲ್ಲಿದ್ದು, ಅವರಲ್ಲಿ ಏಳು ಜನ ಪಕ್ಷದ ಅಭ್ಯರ್ಥಿಗಳಾಗಿದ್ದರೆ ಇನ್ನುಳಿದವರು ಪಕ್ಷೇತರ ಅಭ್ಯರ್ಥಿಗಳು. ಕಾಂಗ್ರೆಸ್ನಿಂದ ಸುಜಾತ ದೊಡ್ಡಮನಿ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಡಾ ಚಂದ್ರು ಲಮಾಣಿ ಕಣದಲ್ಲಿದ್ದಾರೆ. ಇವರಿಗೆ ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ನಡುವೆ ಪೈಪೋಟಿ ಇದ್ದು, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕ್ಷೇತ್ರದಲ್ಲಿ ಲಿಂಗಾಯತ, ಕುರುಬ, ಪರಿಶಿಷ್ಟ ಜಾತಿ, ಲಂಬಾಣಿ, ಮುಸ್ಲಿಂ ಮತದಾರರ ಸಂಖ್ಯೆ ಹೆಚ್ಚಿದ್ದು, ಲಿಂಗಾಯತರ ಮತಗಳೇ ನಿರ್ಣಾಯಕವಾಗಿವೆ. ಇದರ ಮಧ್ಯ ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಮುಖ ನಾಯಕರು ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ಬೆಂಬಲಕ್ಕೆ ನಿಂತಿರುವುದು ಎರಡು ರಾಷ್ಟ್ರೀಯ ಪಕ್ಷಗಳಿಗೆ ನಿದ್ದೆಗೆಡಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:16 pm, Mon, 8 May 23