ರಾಜಸ್ಥಾನದಲ್ಲಿ ಕೊಟ್ಟ ಭರವಸೆ ಈಡೇರಿಸದ ಕಾಂಗ್ರೆಸ್ ಕರ್ನಾಟಕದಲ್ಲಿ ಈಡೇರಿಸುತ್ತಾ?: ಪ್ರಲ್ಹಾದ್ ಜೋಶಿ ಪ್ರಶ್ನೆ

ಕಾಂಗ್ರೆಸ್​ನ ಉಚಿತ ಘೋಷಣೆಗಳನ್ನು ಟೀಕಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜಸ್ಥಾನದಲ್ಲಿ ಉಚಿತ ಘೋಷಣೆಗಳನ್ನು ಈವರೆಗೆ ಯಾಕೆ ಈಡೇರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ರಾಜಸ್ಥಾನದಲ್ಲಿ ಕೊಟ್ಟ ಭರವಸೆ ಈಡೇರಿಸದ ಕಾಂಗ್ರೆಸ್ ಕರ್ನಾಟಕದಲ್ಲಿ ಈಡೇರಿಸುತ್ತಾ?: ಪ್ರಲ್ಹಾದ್ ಜೋಶಿ ಪ್ರಶ್ನೆ
ಪ್ರಲ್ಹಾದ್ ಜೊತೆ ಸೇರಿ ನಾಮಪತ್ರ ಸಲ್ಲಿಸಿದ ದೇವದುರ್ಗದ ಬಿಜೆಪಿ ಅಭ್ಯರ್ಥಿ ಕೆ ಶಿವನಗೌಡ ನಾಯಕ್‌
Follow us
Rakesh Nayak Manchi
|

Updated on: Apr 17, 2023 | 2:59 PM

ರಾಯಚೂರು: ಕಾಂಗ್ರೆಸ್ ನಾಯಕರು ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ 200 ಯೂನಿಟ್ ವಿದ್ಯುತ್ ಉಚಿತವಾಗಿ (Free Electricity) ನೀಡುವುದಾಗಿ ಘೋಷಿಸಿದೆ. ಇಂತಹ ಭರವಸೆ ರಾಜಸ್ಥಾನದಲ್ಲೂ ಕಾಂಗ್ರೆಸ್ ಘೋಷಣೆ ಮಾಡಿತ್ತು. ಆದರೆ ಈವರೆಗೆ ಯಾಕೆ ಈಡೇರಿಸಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ. ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದ ರೋಡ್ ಶೋದಲ್ಲಿ ಪಾಲ್ಗೊಂಡ ನಂತರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಹಲವು ಬಾರಿ ಬೆಜೆಟ್ ಕೂಡ ಮಂಡಿಸಿದ್ದೀರಿ. ಆಗ ಯಾಕೆ ಉಚಿತ ವಿದ್ಯುತ್ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇಂಥ ಬಿಸಿಲಿನಲ್ಲಿ ನಿಮ್ಮ ಆಸಕ್ತಿ ನೋಡಿದರೆ ಇದು ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಅಂತ ಅನ್ನಿಸುತ್ತಿಲ್ಲ. ಇದು ವಿಜಯೋತ್ಸವದ ಕಾರ್ಯಕ್ರಮ ಎನ್ನಿಸುತ್ತಿದೆ ಎಂದು ಹೇಳಿದ ಪ್ರಲ್ಹಾದ್ ಜೋಶಿ, ಸುಳ್ಳು ಹೇಳುವವರು ಕಾಂಗ್ರೆಸ್ ನಾಯಕರು. ಹಿಂದೆ ಎಲ್ಲಿ ಬೇಕಾದರೂ ಬಂದು ಬಾಂಬ್ ಹಾಕುವ ಕೆಲಸ ಮಾಡಲಾಗುತ್ತಿತ್ತು. ಬೆಂಗಳೂರಿನಲ್ಲಿ ಬಾಂಬ್ ಹಾಕುವ ಕೆಲಸ ಮಾಡಿದ್ದರು. ಆದರೆ ಈಗ ಅದ್ಯಾವುದು ಇಲ್ಲ. ಪಾಕಿಸ್ತಾನದಲ್ಲಿ ನಮ್ಮ ಸೈನಿಕರು ಯುದ್ಧ ಸಾರಿದರೆ ರಾಹುಲ್ ಬಾಬಾ ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ದರ ಪ್ರೂಫ್ ಕೇಳುತ್ತಾರೆ. ಆದರೆ ನಮ್ಮ ಸೈನಿಕರನ್ನ ನಾವು ನಂಬುತ್ತೇವೆ ಎಂದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು: ಬಿಜೆಪಿ ಮುಖಂಡರಿಗೆ ಪ್ರಲ್ಹಾದ್ ಜೋಶಿ ಮನವಿ

ತರಾತುರಿಯಲ್ಲಿ ಧಾರವಾಡಕ್ಕೆ ತೆರಳಿದಿ ಪ್ರಲ್ಹಾದ್ ಜೋಶಿ

ರಾಯಚೂರಿನ ದೇವದುರ್ಗದ ಬಿಜೆಪಿ ಅಭ್ಯರ್ಥಿ ಕೆ ಶಿವನಗೌಡ ನಾಯಕ್‌ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಲ್ಹಾದ್ ಜೋಶಿ, ಕಾರ್ಯಕ್ರಮದ ಬಳಿಕ ತರಾತುರಿಯಲ್ಲಿ ಧಾರವಾಡಕ್ಕೆ ತೆರಳಿಸಿದರು. ದೇವದುರ್ಗದಿಂದ ಧಾರವಾಡದ ನವಲಗುಂದಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಿದರು.

ನಾಮಪತ್ರ ಸಲ್ಲಿಸಿದ ದೇವದುರ್ಗ ಕಾಂಗ್ರೆಸ್​ ಅಭ್ಯರ್ಥಿ ಶ್ರೀದೇವಿ ನಾಯಕ

ಒಂದೆಡೆ ಎಸ್​ಟಿ ಮೀಸಲು ದೇವದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಶಿವನಗೌಡ ನಾಯಕ್‌ ನಾಮಪತ್ರ ಸಲ್ಲಿಕೆ ಮಾಡಿದರೆ, ಇನ್ನೊಂದೆಡೆ ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀದೇವಿ ನಾಯಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ದೇವದುರ್ಗ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು