ಬೆಂಗಳೂರು: BJP ಕಾರ್ಯಕರ್ತನ ಮೇಲೆ ಕೈ ಮುಖಂಡರಿಂದ ಹಲ್ಲೆ ಆರೋಪ: ಐಸಿಯುನಲ್ಲಿ ಚಿಕಿತ್ಸೆ

|

Updated on: May 08, 2023 | 7:12 AM

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಮಡಿವಾಳದಲ್ಲಿ ಪ್ರಚಾರದ ವೇಳೆ ಕಾಂಗ್ರೆಸ್​ನ ಮುಖಂಡರಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ.

ಬೆಂಗಳೂರು: BJP ಕಾರ್ಯಕರ್ತನ ಮೇಲೆ ಕೈ ಮುಖಂಡರಿಂದ ಹಲ್ಲೆ ಆರೋಪ: ಐಸಿಯುನಲ್ಲಿ ಚಿಕಿತ್ಸೆ
ಘಟನಾ ಸ್ಥಳ
Follow us on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ(Karnataka Assembly Elections 2023). ಬಹಿರಂಗ ಪ್ರಚಾರ ಕೊನೆ ಹಂತದಲ್ಲಿದೆ. ಈ ನಡುವೆ ನಿನ್ನೆ ಬಿಟಿಎಂ ಲೇಔಟ್ ನಲ್ಲಿ ಬಾರಿ ಹೈಡ್ರಾಮಾವೇ ನಡೆದಿದೆ. ಪ್ರಚಾರದ ನಡುವೆ ಕಾಂಗ್ರೆಸ್​ನ ಮುಖಂಡರಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ.

ನಿನ್ನೆ(ಮೇ 07)ಸಂಜೆ 7 ಗಂಟೆ ಸಮಯದಲ್ಲಿ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಮಡಿವಾಳದಲ್ಲಿ ಬಿಜೆಪಿಯ ಕಾರ್ಯಕರ್ತ ಹರಿನಾಥ್ ಎಂಬಾತನ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಮಾಜಿ ಮೇಯರ್ ಮಂಜುನಾಥ್, ಪುತ್ರ ಲಿತೇಶ್ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ. ಕ್ಯಾನ್ವಾಸ್ ನಡುವೆ ಮಂಡಲ ಅಧ್ಯಕ್ಷನ ಮನೆಗೆ ತೆರಳಿ ಕರೆದುಕೊಂಡು ಬರಲು ಹೊಗುತ್ತಿದ್ದಾಗ ಇದೇ ವೇಳೆ ಏಕಾಏಕಿ ದಾಳಿ ಮಾಡಿದ ಕಾಂಗ್ರೆಸ್ ಮುಖಂಡರ ಗುಂಪು ಆತನ ಮೇಲೆ ಮನಸೊಇಚ್ಛೆ ಹಲ್ಲೆ ಮಾಡಿದ್ದಾರೆ. ಹರಿನಾಥ್​ಗೆ ಎಂಟು ಹೊಲಿಗೆ ಹಾಕಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬಿಜೆಪಿ ಕಾರ್ಯಕರ್ತನ ಹಲ್ಲೆಯ ಪ್ರಮುಖ ವ್ಯಕ್ತಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಅಂತ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಆರೋಪಿಸಿದ್ದಾರೆ.

ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಆತನ ಪುತ್ರ ಲಿತೇಶ್ ರೆಡ್ಡಿ ಸೇರಿದಂತೆ ಒಂದಿಷ್ಟು ಕಾರ್ಯಕರ್ತರು ಹರಿನಾಥ್ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ. ಎಲೆಕ್ಷನ್ ನ ಕೊನೆ ಟೈಂನಲ್ಲಿ ಕೀಳು ಮಟ್ಟದ ರಾಜಕೀಯ ಮುಖಾಂತರ ಹೆದರಿಸುವ ಯತ್ನ ಮಾಡುತಿದ್ದಾರೆ. ಬಿಜೆಪಿ ಕಾರ್ಯಕರ್ತ ಹರಿನಾಥ್ ಗೆ ಹಲ್ಲೆ ಯಾಗಿದ್ದು, ಇದರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಗಿ ಬಿಟಿಎಂ ಲೇಔಟ್ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬೈಕ್ ರ‍್ಯಾಲಿ ವೇಳೆ 2 ಗುಂಪುಗಳ ನಡುವೆ ಬಡಿದಾಟ: JDS ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ

ಇನ್ನು ಮತ್ತೊಂದೆಡೆ ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದು ಘಟನೆ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾಗೆ ಮಾಹಿತಿ ನೀಡಲಾಗಿದೆ. ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಆರೋಪಿಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡುತ್ತೇವೆ. ಬಿಟಿಎಂ ಲೇಔಟ್​, ಜಯನಗರ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸದ್ಯ ಗಾಯಾಳು ಹರಿನಾಥ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಹಲ್ಲೆ ನಡೆದ ವಿಚಾರ ತಿಳಿದ ಬಿಜೆಪಿ ಕಾರ್ಯಕರ್ತರು ಮಡಿವಾಳ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು. ಈ ನಡುವೆ ಗಾಯಾಳು ಹೇಳಿಕೆ ಪಡೆದ ಪೊಲೀಸರು ಮೂವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರಿನ ಮೇಲೆ ಕಲ್ಲು ತೂರಾಟ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಕಾರಿನ ಮೇಲೆ ಕಲ್ಲು ತೂರಾಟವಾಗಿದೆ. ನಿನ್ನೆ ರಾತ್ರಿ 9.30ರ ವೇಳೆ ಬೆಳಗಟ್ಟ ಗ್ರಾಮದ ಬಳಿ ಕಾರಿನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಸೂರನಹಳ್ಳಿ ಶ್ರೀನಿವಾಸ್ ಬೆಳಗಟ್ಟ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದು ಕಾಂಗ್ರೆಸ್​​ ಕಾರ್ಯಕರ್ತರು ಕಲ್ಲು ತೂರಿದ್ದಾರೆಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಅಭ್ಯರ್ಥಿ ಅನಿಲ್‌ಕುಮಾರ್ ನೇತೃತ್ವದಲ್ಲಿ ತುರುವನೂರು ಪೊಲೀಸ್ ಠಾಣೆ ಎದುರು ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ಯಾದಗಿರಿಯಲ್ಲಿ ಕಾಂಗ್ರೆಸ್ ನಾಯಕನ ವಾಹನದ ಮೇಲೆ ದಾಳಿ ಆರೋಪ

ಕಾಂಗ್ರೆಸ್ ಪಕ್ಷದ ನಾಯಕನ ವಾಹನದ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ ನಡೆದಿದೆ ಎಂದು ಆರೋಪ ಕೇಳಿ ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರ ನಗರದ ಡೊಣ್ಣಿಗೇರೆ ಬಡಾವಣೆಯಲ್ಲಿ ಪ್ರಚಾರಕ್ಕೆ ಹೋಗಿದ್ದಾಗ ಪರಿಷತ್ ಮಾಜಿ ಸಭಾಪತಿ ಡೆವಿಡ್ ಸಿಮನ್‌ಗೆ ಸೇರಿದ ಕಾರಿನ ಮೇಲೆ ದಾಳೀ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಪರ ಪ್ರಚಾರಕ್ಕೆ ಬಂದಿದ್ದಕ್ಕೆ ಡೆವಿಡ್ ಸಿಮನ್ ಇನ್ನೊವಾ ಕಾರಿನ ಮೇಲೆ ದಾಳಿ ಮಾಡಲಾಗಿದ್ದು ಕಾರಿನ ಗಾಜು ಜಖಂ ಆಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ