Karnataka Assembly Poll 2023: ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ, ಮಾ.17ರಂದು ದೆಹಲಿಗೆ ಡಿಕೆಶಿ-ಸಿದ್ದು

ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಅಂತಿಮವಾಗಿ ಒಂದು ಸುತ್ತಿನ ಚರ್ಚೆಗೆ ಮಾ.17ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಕರೆದಿದೆ. ಈ ಸಭೆಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತೆರಳಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

Karnataka Assembly Poll 2023: ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ, ಮಾ.17ರಂದು ದೆಹಲಿಗೆ ಡಿಕೆಶಿ-ಸಿದ್ದು
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on: Mar 15, 2023 | 1:53 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್​ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಈಗಾಗಲೇ 120ರಿಂದ 150 ಅಭ್ಯರ್ಥಿಗಳನ್ನು ಒಳಗೊಂಡಿರುವ ಮೊದಲ ಪಟ್ಟಿ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುವ ಮುನ್ನ ಅಂತಿಮವಾಗಿ ಚರ್ಚಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಮಾ.17ರಂದು ಸಭೆ ಕರೆದಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar)​​ ಭಾಗಿಯಾಗಲಿದ್ದಾರೆ. ಇದರಿಂದ ಈ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಹಾಸನ ಜೆಡಿಎಸ್​ ಟಿಕೆಟ್​ ಫೈಟ್: ಭವಾನಿ ರೇವಣ್ಣ-ಸ್ವರೂಪ್​ ಮಧ್ಯೆ ತೇಲಿಬಂತು ಹೊಸ ಹೆಸರು

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾರ್ಚ್ 17ರಂದು ದೆಹಲಿಗೆ ತೆರಳಲಿದ್ದು, ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಮೋಹನ್‌ ಪ್ರಕಾಶ್‌ ನೇತೃತ್ವದ ಸ್ಕ್ರೀನಿಂಗ್​ ಕಮಿಟಿಯಲ್ಲಿ ಪರಿಶೀಲಿಸಿದ್ದು, ಅಂತಿಮ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿತ್ತು. ಈಗ ಇದೇ ಪಟ್ಟಿ ಬಗ್ಗೆ ಮಾ.17ರಂದು ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಾ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮನಮೋಹನ್ ಸಿಂಗ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆ.ಸಿ. ವೇಣುಗೋಪಾಲ್​, ಎಕೆ.ಆ್ಯಂಟನಿ, ವೀರಪ್ಪ ಮೊಯ್ಲಿ, ಸ್ಕ್ರೀನಿಂಗ್ ಕಮಿಟಿ ಮುಖ್ಯಸ್ಥ ಮೋಹನ್‌ ಪ್ರಕಾಶ್‌ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಸಭೆ ಬಳಿಕ ಸುಮಾರು  ಮೊದಲ ಪಟ್ಟಿಯಲ್ಲಿ 150 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆಗಳಿದ್ದು, ಪಟ್ಟಿಯನ್ನು ಮಾರ್ಚ್​ 20ರೊಳಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.  ಈ ಮೂದಲು ಮಾ.17ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತೆ ಎನ್ನಲಾಗಿತ್ತು.

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು. ಸುಮಾರು 1230 ಅರ್ಜಿಗಳು ಬಂದಿದ್ದವು. ಈ ಪೈಕಿ ಅಳೆದು ತೂಗಿ ಮೊದಲ ಹಂತದಲ್ಲಿ 150 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಈ ಮೊದಲ ಪಟ್ಟಿಯಲ್ಲಿ ಪ್ರಮುಖ ನಾಯಕರ ಹೆಸರು ಇರುವ ಸಾಧ್ಯತೆಗಳಿವೆ. ಅಂದ್ರೆ, ರಾಮಲಿಂಗರೆಡ್ಡಿ, ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರವ್, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಬಹುತೇಕ ಹಲವು ಹಾಲಿ ಶಾಸಕರಿಗೆ ಟಿಕೆಟ್​ ಘೋಷಿಸಲಾಗುತ್ತೆ ಎನ್ನಲಾಗಿದೆ.

ಎಲೆಕ್ಷನ್​ಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ