Karnataka Assembly Elections 2023: ಕೊನೆ ಕ್ಷಣದಲ್ಲಿ ಮತ್ತೊಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ
ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ ಇರುವಾಗಲೇ ಕೊನೆ ಕ್ಷಣದಲ್ಲಿ ಕಾಂಗ್ರೆಸ್, ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ.
ಕೋಲಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ Karnataka Assembly Elections 2023) ನಾಮಪತ್ರ ಸಲ್ಲಿಸಲು ಇಂದು(ಏಪ್ರಿಲ್ 20) ಕೊನೆ ದಿನವಾಗಿದ್ದು, ಈ ಕೊನೆ ಕ್ಷಣದಲ್ಲಿ ಕಾಂಗ್ರೆಸ್(Congress) ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು ಬದಲಿಸಿದೆ. ಡಾ.ಬಿಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎನ್ನುವರಿಗೆ ಟಿಕೆಟ್ ನೀಡಿದೆ. ತೀವ್ರ ಕಗ್ಗಂಟಾಗಿ ಉಳಿದಿದ್ದ ಮುಳಬಾಗಿಲು ಕ್ಷೇತ್ರಕ್ಕೆ ಅಳೆದು ತೂಗಿ ನಿನ್ನೆ ರಾತ್ರಿ ಅಷ್ಟೇ 5ನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಈ ಪಟ್ಟಿಯಲ್ಲಿ ಮುಳಬಾಗಿಲು ವಿಧಾನಸಭೆ ಕ್ಷೇತ್ರಕ್ಕೆ ಡಾ.ಬಿ.ಸಿ.ಮುದ್ದು ಗಂಗಾಧರ್ ಅವರನ್ನು ಫೈನಲ್ ಮಾಡಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತ್ತು. ಆದ್ರೆ, ಸ್ಥಳೀಯವಾಗಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್ ಮುಳಬಾಗಿಲು ಅಭ್ಯರ್ಥಿಯನ್ನು ಬದಲಿಸಿದ್ದು, ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎನ್ನುವರಿಗೆ ಮಣೆ ಹಾಕಿದೆ.
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್ ಅವರು ಮುಳಬಾಗಿಲು ಕ್ಷೇತ್ರಕ್ಕೆ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದಿನಾರಾಯಣ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದ್ರೆ, ಹೈಕಮಾಂಡ್ ಡಾ.ಬಿ.ಸಿ.ಮುದ್ದು ಗಂಗಾಧರ್ ಅವರಿಗೆ ಮಣೆ ಹಾಕಿತ್ತು. ಇದರಿಂದ ಕೊತ್ತನೂರು ಮಂಜುನಾಥ್ ಸೇರಿದಂತೆ ಸ್ಥಳೀಯ ನಾಯಕರು ತೀವ್ರ ಅಸಮಾಧಾನಗೊಂಡಿದ್ದರು. ಇದರಿಂದ ಎಚ್ಚೆತ್ತ ಕಾಂಗ್ರೆಸ್ ಕೊನ್ ಕ್ಷಣದಲ್ಲಿ ಮುದ್ದು ಗಂಗಾಧರ್ ಅವರನ್ನು ಬದಲಿಸಿ ಆದಿನಾರಾಯಣ ಅವರನ್ನು ಅಂತಿಮ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.
ನಿನ್ನೆ ಅಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪರ್ಧೆ ಮಾಡುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಬದಲಾವಣೆ ಮಾಡಿತ್ತು. ಈ ಹಿಂದೆ ಅಲ್ಲಿ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಘೋಷಿಸಿತ್ತು. ಆದ್ರೆ, ನಿನ್ನೆ ಯಾಸೀರ್ ಅಹ್ಮದ್ ಖಾನ್ ಪಠಾಣ್ಗೆ ಟಿಕೆಟ್ ಘೋಷಣೆ ಮಾಡಿದೆ. ಇದೀಗ ಕೋಲಾರ ಜಿಲ್ಲೆಯ ಮುಳಬಾಗಿಲ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 11:57 am, Thu, 20 April 23