ಕಾಂಗ್ರೆಸ್​ಗೆ ಬಹುಮತ; ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಮುಸ್ಲಿಂ ಯುವಕರು

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಹುಮತ ಸಿಕ್ಕಿದ್ದು, ಭಟ್ಕಳದಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಾಗಿದೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ.

ಕಾಂಗ್ರೆಸ್​ಗೆ ಬಹುಮತ; ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಮುಸ್ಲಿಂ ಯುವಕರು
ಭಟ್ಕಳದಲ್ಲಿ ಕಾಂಗ್ರೆಸ್ ಗೆಲುವನ್ನು ಇಸ್ಲಾಂ ಧ್ವಜ ಹಾರಿಸಿ ಸಂಭ್ರಮಾಚರಣೆ
Follow us
Rakesh Nayak Manchi
|

Updated on:May 13, 2023 | 6:23 PM

ಕಾರವಾರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಕಾಂಗ್ರೆಸ್​ಗೆ ಬಹುಮತ ಸಿಕ್ಕಿದ್ದು, ಭಟ್ಕಳದಲ್ಲೂ (Bhatkal) ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಾಗಿದೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು (Islam Flag) ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ. ಭಟ್ಕಳ ಸಂಶುದ್ದಿನ್ ಸರ್ಕಲ್ ಮೇಲೆ ನಿಂತು ಕೇಸರಿ ಭಾವುಟ ಪಕ್ಕದಲ್ಲಿ ಇಸ್ಲಾಂ ಪ್ಲ್ಯಾಗ್ ಹಿಡಿದು ಸಂಭ್ರಮಾಚರಣೆ ನಡೆಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದ್ದು, ಆಕ್ರೋಶವೂ ವ್ಯಕ್ತವಾಗುತ್ತಿದೆ.

ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಅವರು ಬಿಜೆಪಿಯ ಸುನೀಲ್ ನಾಯ್ಕ ವಿರುದ್ಧ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮಂಕಾಳು ವೈದ್ಯ ಗೆಲುವನ್ನ ಸಂಭ್ರಮಿಸುವ ವೇಳೆ ಭಟ್ಕಳ ಪಟ್ಟಣದಲ್ಲಿರುವ ಸಂಶುದ್ದೀನ್ ವೃತ್ತದ ಮೇಲೇರಿದ ಮುಸ್ಲಿಂ ಯುವಕರು ಕೇಸರಿ ಧ್ವಜದ ಪಕ್ಕ ನಿಂತು ಇಸ್ಲಾಂ ಧ್ವಜ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: Karnataka Election Results: ಕರ್ನಾಟಕದ ಗೆಲುವಿಗಾಗಿ ಕಾಂಗ್ರೆಸ್​​ಗೆ ಅಭಿನಂದನೆ; ಪ್ರಧಾನಿ ಮೋದಿ

ಇದರ ಜೊತೆಗೆ ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌ರ ಧ್ವಜದೊಂದಿಗೆ ಮುಸ್ಲಿಂ ಧ್ವಜ ಪ್ರದರ್ಶನ ಮಾಡಿ ವೃತ್ತದಲ್ಲಿ ಹಾಕಲಾಗಿದ್ದ ಕೇಸರಿ ಧ್ವಜದ ಪಕ್ಷದಲ್ಲೇ ಮುಸ್ಲಿಂ ಧ್ವಜ ಹಾಕಿದ್ದಾರೆ. ಸದ್ಯ ಇದರ ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಹಿಂದೂಗಳ ಹೆಣ ಎತ್ತಲೂ ಯಾರು ಇರಬಾರದು; ಮುಸ್ಲಿಂ ಯುವಕನಿಂದ ಅಘಾತಕಾರಿ ಕಾಮೆಂಟ್

ಕಾಂಗ್ರೆಸ್​ಗೆ ಬಹುಮತ ಬಂದಿದ್ದೇ ತಡ, ಇದರ ಸಂತೋಷಕ್ಕೆ ಭಟ್ಕಳದಲ್ಲಿ ಇಸ್ಲಾಂ ಧ್ವಜ ಹಾರಿಸಲಾಯಿತು. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸಮಾಜಘಾತುಕ ಸಂದೇಶಗಳನ್ನು ರವಾನಿಸಲಾಗುತ್ತಿದೆ. “ಹಿಂದೂಗಳ ಹೆಣ ಎತ್ತಲೂ ಯಾರೂ ಇರಬಾರದು. ಕರ್ನಾಟಕದಲ್ಲಿ ಇನ್ನು ಮುಂದೆ ಮುಸ್ಲಿಂ ಹವಾ, ಅಲ್ಲಾಹು ಅಕ್ಬರ್” ಮುಸ್ಲಿಂ ಯುವಕನೊಬ್ಬ ಮಾಡಿದ ಕಾಮೆಂಟ್​ನ ಸ್ಕ್ರೀನ್​ಶಾಟ್ ವಾಟ್ಸ್​​ಆ್ಯಪ್​ಗಳಲ್ಲಿ ಹರಿದಾಡುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sat, 13 May 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್