Karnataka Polls 2023: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡ್ ಬಿಡುಗಡೆ ಮಾಡಿದ ಕಾಂಗ್ರೆಸ್
ವಿಧಾಸಭೆ ಚುನಾವಣೆಗೆ ಐದು ದಿನಗಳು ಬಾಕಿಯಿದ್ದು, ಆರೋಪ, ಪ್ರತ್ಯಾರೋಪಗಳು ಕೇಳಿಬರುತ್ತಿವೆ. ಅದರಂತೆ ಇದೀಗ ಎಐಸಿಸಿ ವಕ್ತಾರ ಪವನ್ ಖೇರಾ ಅವರು ಇಂದು(ಮೇ.5) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತ ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ವಿಧಾಸಭೆ ಚುನಾವಣೆ(Karnataka Assembly Election)ಗೆ ಐದು ದಿನಗಳು ಬಾಕಿಯಿದ್ದು, ಆರೋಪ, ಪ್ರತ್ಯಾರೋಪಗಳು ಕೇಳಿಬರುತ್ತಿವೆ. ಅದರಂತೆ ಇದೀಗ ಎಐಸಿಸಿ ವಕ್ತಾರ ಪವನ್ ಖೇರಾ(Pawan Khera) ಅವರು ಇಂದು(ಮೇ.5) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತ ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು ‘ಬಿಜೆಪಿಯು ರಾಜ್ಯವನ್ನು ರಾಜಕೀಯ ಪ್ರವಾಸದ ಕೇಂದ್ರ ಮಾಡಿಕೊಂಡಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ರಾಜ್ಯದಲ್ಲಿ 40% ಅಲ್ಲ 50% ಕಮಿಷನ್ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ಕಮಿಷನ್, ಮಂತ್ರಿ ಹುದ್ದೆಗೆ 500 ಕೋಟಿ, ವರ್ಗಾವಣೆಗೆ 5-15 ಕೋಟಿ, ಇಂಜಿನಿಯರ್ ಹುದ್ದೆಗೆ 1ರಿಂದ 5 ಕೋಟಿ ನೀಡಬೇಕು ಎನ್ನುವ ಮೂಲಕ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.
ಇಂದು ಅತ್ಯಂತ ಮಹತ್ವದ ದಿನ, ಬಿಜೆಪಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ. ಆದರೆ, ಕರ್ನಾಟಕದ ಜನ ಮಾತ್ರ ಎಲ್ಲ ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆಯಿಂದ ಜನರಿಗೆ ಬಿಜೆಪಿಯವರ ಬಗ್ಗೆ ಸಿಟ್ಟಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಇದೇ ಸಿಟ್ಟು ಬಿಜೆಪಿ ವಿರುದ್ದ ಜನರು ಓಟು ಒತ್ತುವಂತೆ ಮಾಡುತ್ತದೆ. ಬಿಜೆಪಿ ಮತ್ತೆ ಬಂದರೆ 40% ಕಮಿಷನ್ ಭ್ರಷ್ಟಾಚಾರ 80% ಆಗುತ್ತದೆ ಎಂಬ ಭಯ ಆತಂಕ ಜನರಿಗೆ ಇದೆ. ಇದೇ ಭಾವನೆಗಳು ಬಿಜೆಪಿಗೆ ಹೊಡೆತ ಕೊಡಲಿದೆ ಎಂದರು.
ಇತ್ತೀಚೆಗಷ್ಟೇ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿ ವಿವಾದ
ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಉಭಯ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿದೆ. ಅದರಂತೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿತ್ತು. ಅದರಲ್ಲಿ ಬಜರಂಗದಳ ನಿಷೇಧ ಬಗ್ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಇದು ಭಾರೀ ವಿವಾದಕ್ಕೀಡಾಗಿದೆ. ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ಗೆ ಟಕ್ಕರ್ ಕೊಡಲು ರಾಜ್ಯಾದ್ಯಂತ ಹನುಮಾನ್ ಚಾಲೀಸ ಪಠಣ ಮಾಡಲಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಇದೀಗ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡ್ ಬಿಡುಗಡೆ ಮಾಡಿದೆ.
ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:19 pm, Fri, 5 May 23