ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತುಕಡೇ ತುಕಡೇ ಗ್ಯಾಂಗ್‌: ಅರುಣ್ ಸಿಂಗ್ ವಾಗ್ದಾಳಿ

ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ ಮಾಡಿದ್ದು ಅದರಲ್ಲಿ ಉತ್ತರ ಪ್ರದೇಶದ ಗ್ಯಾಂಗ್‌ಸ್ಟಾರ್ ಇಮ್ರಾನ್ ಪ್ರತಾಪ್ ಗರ್ಹಿ ಹೆಸರಿದೆ. ಇದನ್ನು ಗಮನಿಸಿದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿದ್ದಾರೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತುಕಡೇ ತುಕಡೇ ಗ್ಯಾಂಗ್‌: ಅರುಣ್ ಸಿಂಗ್ ವಾಗ್ದಾಳಿ
ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
Follow us
Rakesh Nayak Manchi
|

Updated on:Apr 20, 2023 | 6:45 PM

ಬೆಳಗಾವಿ: ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ ಮಾಡಿದ್ದು ಅದರಲ್ಲಿ ಉತ್ತರ ಪ್ರದೇಶದ ಗ್ಯಾಂಗ್‌ಸ್ಟಾರ್ ಇಮ್ರಾನ್ ಪ್ರತಾಪ್ ಗರ್ಹಿ (Imran Pratapgarhi) ಹೆಸರಿದೆ. ಇದನ್ನು ಗಮನಿಸಿದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿದ್ದಾರೆ. “ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತುಕಡೇ ತುಕಡೇ ಗ್ಯಾಂಗ್‌ನವರಿದ್ದಾರೆ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಂತಹ 10 ಜನರು ಇದ್ದಾರೆ” ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಆರೋಪ ಮಾಡಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶ ದ್ರೋಹ ಕೇಸ್, ಮಹಿಳೆಯರಿಗೆ ಅಪಮಾನ ಮಾಡಿದವರು, ಗಲಭೆಕೋರರ ಜೊತೆ ಕೈ ಜೋಡಿಸಿದವರು ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ದೇಶಕ್ಕೆ ಅಪಮಾನ ಮಾಡಿದವರು, ಪ್ರತ್ಯೇಕವಾದಿಗಳು ಕಾಂಗ್ರೆಸ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ ಎಂದು ಹೇಳಿದ ಅರುಣ್ ಸಿಂಗ್, ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಸೋಲಾಗುವುದು ನಿಶ್ಚಿತ. ನಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನರೇಂದ್ರ ಮೋದಿ ಇದ್ದಾರೆ. ನಮ್ಮ ಪ್ರಚಾರ ಶುರುವಾದ ಮೇಲೆ ಕಾಂಗ್ರೆಸ್​ನವರು ಮನೆಗೆ ಹೋಗುತ್ತಾರೆ. ರಾಹುಲ್ ಗಾಂಧಿ ಎಲ್ಲಿ ಪ್ರಚಾರಕ್ಕೆ ಹೋಗುತ್ತಾರೋ ಅಲ್ಲಿ ಕಾಂಗ್ರೆಸ್ ಮತಗಳು ಕಡಿಮೆಯಾಗುತ್ತವೆ. ಪ್ರಧಾನಿ ಮೋದಿ ಪ್ರಚಾರ ಮಾಡಿದರೆ ಬಿಜೆಪಿ‌ ಮತಗಳು ಹೆಚ್ಚಾಗುತ್ತವೆ ಎಂದರು.

ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವಾಗಿದೆ. ಸದ್ಯ ದೇಶದಲ್ಲಿ ವಿಜಯ ಟ್ರೆಂಡ್ ಬಿಜೆಪಿ, ಸೋಲು ಟ್ರೆಂಡ್ ಕಾಂಗ್ರೆಸ್ ಪಕ್ಷದ್ದಾಗಿದೆ. ಇದು ಕರ್ನಾಟಕದಲ್ಲೂ ಸಂಭವಿಸಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋಲುವುದು ಖಚಿತ ಎಂದು ಅರುಣ್ ಸಿಂಗ್ ಹೇಳಿದರು.

ಬಿಜೆಪಿ ಸಿಎಂ ಅಭ್ಯರ್ಥಿ ಯಾರು?

ಬಿಜೆಪಿ ಸಿಎಂ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಅರುಣ್ ಸಿಂಗ್‌ ಅಸ್ಪಷ್ಟ ಉತ್ತರ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರ ಸರ್ಕಾರದ ಸಾಧನೆಗಳನ್ನು ಮುಂದಿಟ್ಟು ಮತಯಾಚನೆ ನಡೆಸುತ್ತೇವೆ. ಕಾಮನ್‌ಮ್ಯಾನ್ ಬೊಮ್ಮಾಯಿ ನೇತೃತ್ವದಲ್ಲಿ ಎಲೆಕ್ಷನ್ ಎದುರಿಸುತ್ತಿದ್ದೇವೆ. ಬಸವರಾಜ ಬೊಮ್ಮಾಯಿ ನಮ್ಮ ಪ್ರಚಾರ ಸಮಿತಿಯ ಅಧ್ಯಕ್ಷ ಎಂದರು. ಇದೇ ವೇಳೆ ಬಸವರಾಜ ಬೊಮ್ಮಾಯಿ ಅವರನ್ನು ಹಾಡಿ ಹೊಗಳಿದರು.

ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಕಿತ್ತೂರು ಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಬಂದಿದ್ದೆ. ರೋಡ್ ಶೋನಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗಿಯಾಗಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಅತ್ಯಧಿಕ ಕ್ಷೇತ್ರಗಳಲ್ಲಿ ಜಯ ಸಾಧಿಸಿ ಬಿಜೆಪಿ ಇತಿಹಾಸ ಸೃಷ್ಟಿಸುತ್ತದೆ ಎಂದು ಹೇಳಿದ ಅರುಣ್ ಸಿಂಗ್, ಬಿಜೆಪಿ 72 ಹೊಸಮುಖಗಳಿಗೆ ಅವಕಾಶ ನೀಡಿದೆ. ಬಹಳ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರಿಗೆ ಅವಕಾಶ ಸಿಕ್ಕಿದೆ. ಅಭ್ಯರ್ಥಿಗಳ ಪಟ್ಟಿ ನೋಡಿದರೆ ಕರ್ನಾಟಕದ ಬಗ್ಗೆ ಮೋದಿ ವಿಷನ್ ಪೂರ್ಣ ಆಗುವುದು ಕಾಣುತ್ತದೆ ಎಂದರು.

ಇದನ್ನೂ ಓದಿ: Congress Star Campaigners: 40 ಸ್ಟಾರ್ ಪ್ರಚಾರಕರ ಹೆಸರು ಘೋಷಿಸಿದ ಕಾಂಗ್ರೆಸ್; ಪಟ್ಟಿಯಲ್ಲಿ ಯಾರೆಲ್ಲ? ಇಲ್ಲಿದೆ ನೋಡಿ

ಅತಿ ಹೆಚ್ಚು ಬಂಡವಾಳ ಕರ್ನಾಟಕಕ್ಕೆ ಬರುತ್ತಿದೆ. ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ನಂಬರ್ ಒನ್ ಇದೆ. ಕಳೆದ ಮೂರು ವರ್ಷಗಳಲ್ಲಿ ಆದ ಕೆಲಸದ ಬಗ್ಗೆ ಸಮೀಕ್ಷೆ ಮಾಡಿ ನೋಡಿ. ಕಾಂಗ್ರೆಸ್ 5 ದಶಕಗಳಲ್ಲಿ ಮಾಡಲಾಗದ ಕೆಲಸ ಆಗಿದೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ, ಹೆಲಿಕಾಪ್ಟರ್ ನಿರ್ಮಾಣ ಕಾರ್ಖಾನೆ ಉದ್ಘಾಟನೆ, ವಂದೇ ಭಾರತ್, ಮೆಟ್ರೋ ರೈಲು ಉದ್ಘಾಟನೆ, ನಾಡಪ್ರಭು ಕೆಂಪೇಗೌಡ ಮೂರ್ತಿ ಪ್ರತಿಷ್ಠಾಪನೆ, ಯಡಿಯೂರಪ್ಪ ಸರ್ಕಾರದಲ್ಲಿ ಅನುಭವ ಮಂಟಪ ನಿರ್ಮಾಣವಾಗಿದೆ, ಕರ್ನಾಟಕ ಗೌರವ ಸಂಸ್ಕೃತಿ ಹೆಚ್ಚುವ ಕೆಲಸ ಬಿಜೆಪಿ ಸರ್ಕಾರ ಮಾಡಿದೆ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಮರಾಠಾ ಅಭಿವೃದ್ಧಿ ನಿಗಮ ಬಿಜೆಪಿ ಸರ್ಕಾರ ಸ್ಥಾಪನೆ, ಕಿತ್ತೂರು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು ಬಿಜೆಪಿ ಸರ್ಕಾರ ಎಂದರು.

ಕರ್ನಾಟಕ, ಬೆಳಗಾವಿ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಏನೂ ಮಾಡಿಲ್ಲ ಎಂದು ಹೇಳಿದ ಅರುಣ್ ಸಿಂಗ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಣಿ ಚನ್ನಮ್ಮ ಜನ್ಮಸ್ಥಳ ಅಭಿವೃದ್ಧಿ ಮಾಡಲಾಗುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜರ ಅತಿ ಎತ್ತರದ ಮೂರ್ತಿ ಮಾಡಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ. ಬೆಳಗಾವಿ ಜಿಲ್ಲೆಯ 5 ಲಕ್ಷ 40 ಸಾವಿರ ಕಿಸಾನ್ ಸಮ್ಮಾನ್ ನಿಧಿಯ 10 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಹೋಗಿದೆ. 4 ಲಕ್ಷ 19 ಸಾವಿರ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ನಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಪೈಕಿ 5 ದಶಕಗಳಲ್ಲಿ ಒಂದನ್ನೂ ಮಾಡಿಲ್ಲ. ಸಿದ್ದರಾಮಯ್ಯ ಸರ್ಕಾರದಲ್ಲಿ ಪಿಎಫ್ಐ ಜಾಲ ವಿಸ್ತರಣೆ ಆಗಿತ್ತು, ಹಿಂದೂಗಳ ಹತ್ಯೆ ಆಗಿತ್ತು. ಸಿದ್ದರಾಮಯ್ಯ ಸರ್ಕಾರದಲ್ಲಿ ತುಷ್ಟೀಕರಣ ರಾಜನೀತಿ ನಡೆಯುತ್ತಿತ್ತು. ಬೆಳಗಾವಿಯ ಕಾಂಗ್ರೆಸ್ ನಾಯಕ ಹಿಂದೂ ಶಬ್ದಕ್ಕೆ ಅಶ್ಲೀಲ ಅಂತಾರೆ. ಕಾಂಗ್ರೆಸ್ ಹಿಂದೂಗಳಿಗೆ ನಿರಂತರ ಅಪಮಾನ ಮಾಡಿದೆ. ಭಾರತ, ಭಾರತದ ಪ್ರಜಾಪ್ರಭುತ್ವಕ್ಕೆ ಅಪಮಾನ. ರಾಹುಲ್ ಗಾಂಧಿ ವಿದೇಶಗಳಲ್ಲಿ ಭಾರತಕ್ಕೆ ಅಪಮಾನ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Thu, 20 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ