100ಕ್ಕೆ 100 ಗೆಲ್ಲುತ್ತಾರೆಂದು ರಕ್ತದಲ್ಲಿ ಪತ್ರ ಬರೆದಿದ್ದ ಅಭಿಮಾನಿ ನಿವಾಸಕ್ಕೆ ಜಗದೀಶ್ ಶೆಟ್ಟರ್ ಭೇಟಿ

ರಕ್ತದಲ್ಲಿ ಪತ್ರ ಬರೆದು ತಮ್ಮ ಗೆಲುವಿಗೆ ಹಾರೈಸಿದ್ದ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಭೇಟಿ ನೀಡಿ ಸನ್ಮಾನಿಸಿದ್ದಾರೆ.

100ಕ್ಕೆ 100 ಗೆಲ್ಲುತ್ತಾರೆಂದು ರಕ್ತದಲ್ಲಿ ಪತ್ರ ಬರೆದಿದ್ದ ಅಭಿಮಾನಿ ನಿವಾಸಕ್ಕೆ ಜಗದೀಶ್ ಶೆಟ್ಟರ್ ಭೇಟಿ
ಕೈ ಕಾರ್ಯಕರ್ತನ ಮನೆಗೆ ಜಗದೀಶ್ ಶೆಟ್ಟರ್ ಭೇಟಿ
Follow us
ರಮೇಶ್ ಬಿ. ಜವಳಗೇರಾ
|

Updated on: Apr 28, 2023 | 9:50 AM

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ನಲ್ಲಿ ಜಗದೀಶ್ ಶೆಟ್ಟರ್ (Jagadish Shettar) ಅವರು 100ಕ್ಕೆ 100 ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ (Blood Letter) ಬರೆದಿದ್ದ ಯುವಕ ಮಂಜುನಾಥನ ನಿವಾಸಕ್ಕೆ ಇಂದು (ಏಪ್ರಿಲ್ 28) ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಭೇಟಿ ನೀಡಿದ್ದಾರೆ.  ಯಡಿಯೂರಪ್ಪ ರಕ್ತದಲ್ಲಿ ಬರೆದು ಕೊಡುತ್ತೇನೆ ಶೆಟ್ಟರ್ ಗೆಲ್ಲುವುದಿಲ್ಲ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ ಎನ್ನುವ ಯುವಕ 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದು ತಿರುಗೇಟು ನೀಡಿದ್ದ. ಇದೀಗ ಮಂಜುನಾಥನ ಮನೆಗೆ ಜಗದೀಶ್ ಶೆಟ್ಟರ್​​ ಭೇಟಿ ನೀಡಿದ್ದು, ತಮ್ಮ ಗೆಲುವಿಗಾಗಿ ರಕ್ತದಲ್ಲಿ ಶುಭ ಹಾರೈಸಿದ ಮಂಜುನಾಥನಿಗೆ ಸನ್ಮಾನಿಸಿ ಕೃತಜ್ಞತೆ  ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ರಕ್ತ ರಾಜಕೀಯ: 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ತಾರೆ, ರಕ್ತದಲ್ಲಿ ಪತ್ರ ಬರೆದು ಯಡಿಯೂರಪ್ಪಗೆ ಟಾಂಗ್

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಂಜುನಾಥ ಮನೆಗೆ ಜಗದೀಶ್ ಶೆಟ್ಟರ್ ಭೇಟಿ ನೀಡಿ ಅಭಿಮಾನ ತೋರದಕ್ಕೆ ಸನ್ಮಾನ ಮಾಡಿದರು. ಇದೇ ವೇಳೆ ಮಂಜುನಾಥ ಸಹ ಚುನಾವಣೆಯಲ್ಲಿ ಗೆಲುವಾಗಲಿ ಎಂದು ಜಗದೀಶ್​ ಶೆಟ್ಟರ್ ಅವರಿಗೆ ಶುಭ ಹಾರೈಸಿದರು.​

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಜಗದೀಶ್ ಶೆಟ್ಟರ್, ರಕ್ತದಾನ ಶ್ರೇಷ್ಠದಾನ. ಯಾರೂ ರಕ್ತ ವ್ಯರ್ಥ ಮಾಡಬೇಡಿ. ಅವಶ್ಯ ಇರುವವರಿಗೆ ದಾನ ಮಾಡಿ. ಇಂತಹ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ಶಕ್ತಿಯೇ ನನ್ನ ಗೆಲುವಿಕೆ ಕಾರಣ ಎಂದು ಬರೆದುಕೊಂಡಿದ್ದಾರೆ.

ಜಗದೀಶ್ ಶೆಟ್ಟರ್ ಗೆಲ್ಲುವುದಿಲ್ಲ‌ ಎಂದು ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಲಿಂಗಾಯತ ಯುವ ಮುಖಂಡ ಮಂಜುನಾಥ ಯಂಟ್ರುವಿ ಎನ್ನುವರು ರಕ್ತದಲ್ಲೇ ಪತ್ರ ಬರೆದು ತಿರುಗೇಟು ನೀಡಿದ್ದು, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್​ ಗೆಲ್ಲಲಿದ್ದಾರೆ ಎಂದು ರಕ್ತದಲ್ಲಿ ಬರೆದ ಪತ್ರದ ಪೋಟೋಗಳು ವೈರಲ್ ಆಗಿತ್ತು.

ಇನ್ನು ಈ ಬಗ್ಗೆ ಮಾಧ್ಯಮಗಳೀಗೆ ಪ್ರತಿಕ್ರಿಯಿಸಿದ್ದ ಮಂಜುನಾಥ ಯಂಟ್ರೂವಿ, ಒಬ್ಬ ಲಿಂಗಾಯತ ನಾಯಕರ ಮೇಲೆ ಲಿಂಗಾಯತ ನಾಯಕರನ್ನೇ ಎತ್ತಿ ಕಟ್ಟಲಾಗುತ್ತಿದೆ. ರಕ್ತದಲ್ಲಿ ಬರೆದು ಕೊಡ್ತೇನೆ ಶೆಟ್ಟರ್ ಸೋಲುವುದು ಖಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದ್ರೆ ನಾನು ರಕ್ತದಲ್ಲಿ ಬರೆದುಕೊಡ್ತೀನಿ ಯಾವುದೇ ಕಾರಣಕ್ಕೆ ಶೆಟ್ಟರ್ ಅವರು ಸೋಲುವುದಿಲ್ಲ. ಶೆಟ್ಟರ್ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ. ರಾಜಕೀಯ ನಾಯಕರ ಮಾತುಗಳನ್ನ ನಾನು‌ ಕೃತಿಯಲ್ಲಿ ತೋರಿಸುತ್ತೇನೆ ಎಂದು ಹೇಳಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ