ಗದಗ: ಎಂಜಿನಿಯರಿಂಗ್, ಎಂಬಿಬಿಎಸ್ ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ; ರಾಹುಲ್ ಗಾಂಧಿ

ಎಂಜಿನಿಯರಿಂಗ್, ಎಂಬಿಬಿಎಸ್ ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ. ಉನ್ನತ ವ್ಯಾಸಂಗ ಮಾಡಿದವರು ಇನ್ನೂ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗದಗ: ಎಂಜಿನಿಯರಿಂಗ್, ಎಂಬಿಬಿಎಸ್ ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ; ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
Ganapathi Sharma
|

Updated on: Apr 24, 2023 | 7:32 PM

ಗದಗ/ ಹಾವೇರಿ: ಎಂಜಿನಿಯರಿಂಗ್, ಎಂಬಿಬಿಎಸ್ ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ. ಉನ್ನತ ವ್ಯಾಸಂಗ ಮಾಡಿದವರು ಇನ್ನೂ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗದಗ‌ದ ಕೈಗಾರಿಕಾ ಪ್ರದೇಶದ ತಿರಂಗಾ ಪಾರ್ಕ್​ನಲ್ಲಿ ಯುವಕರ ಜತೆ ಸಂವಾದ ನಡೆಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಹೆಚ್​.ಕೆ.ಪಾಟೀಲ್ ಪರ ಮತ ಯಾಚಿಸಿದರು. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಮೇಡ್ ಇನ್​ ಚೀನಾ ಆಗ್ತಿದೆ, ಮೇಡ್​ ಇನ್ ಇಂಡಿಯಾ ಏಕೆ ಆಗ್ತಿಲ್ಲ? ಶರ್ಟ್​, ಚಪ್ಪಲಿ, ಕ್ಯಾಮರಾ ಎಲ್ಲವೂ ಮೇಡ್​ ಇನ್ ಚೀನಾ ಆಗಿದೆ. ವಿಮಾನ ನಿಲ್ದಾಣ​, ಬಿಎಸ್​ಎನ್​ಎಲ್​ ಎಲ್ಲವೂ ಖಾಸಗೀಕರಣ ಆಗುತ್ತಿದೆ ಎಂದು ಟೀಕಿಸಿದರು.

ನಂತರ ಹಾವೇರಿಗೆ ತೆರಳಿ, ಅಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 150 ಸೀಟುಗಳನ್ನು ಗೆಲ್ಲಲಿದೆ. ನೀವು 150 ಸೀಟು ಗೆಲ್ಲಿಸಿಕೊಡಬೇಕು. ಒಂದು ವೇಳೆ ಗೆಲ್ಲಿಸಿ ಕೊಡದಿದ್ದರೆ ಶಾಸಕರನ್ನು ಖರೀದಿ ಮಾಡಲು ಹಣ ಖರ್ಚು ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ಶಿಡ್ಲಘಟ್ಟ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡಲಿದೆ, ಬಿಜೆಪಿಗೆ ಮತ ನೀಡಿ ಎಂದ ನಡ್ಡಾ

ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಡಿಸ್ಕೌಂಟ್ ಕೊಡುತ್ತಾರೆ. ಯಾವುದೆ ಕೆಲಸಕ್ಕಾದರೂ ಶೇ 40 ಕಮೀಷನ್ ಕೊಡಬೇಕು. ಮೈಸೂರು ಸಾಂಡಲ್ ಕಾರ್ಖಾನೆಯ ಮಾಲೀಕನ ಮಗ 8 ಕೋಟಿ ವ್ಯವಹಾರದಲ್ಲಿ ಸಿಕ್ಕಿಬಿದ್ದಿದ್ದಾನೆ. ಉದ್ಯೋಗದಲ್ಲೂ ಭ್ರಷ್ಟಾಚಾರ ನಡೆದಿದೆ. ಇವರಿಗೆ 40 ಎಂಬ ಸಂಖ್ಯೆ ಬಹಳ ಇಷ್ಟ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟುಗಳು ಮಾತ್ರ ಬರಲಿವೆ ಎಂದು ರಾಹುಲ್ ವ್ಯಂಗ್ಯವಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ