AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಏ.23ರಂದು ರಾಹುಲ್​ ಗಾಂಧಿ ರಾಜ್ಯ ಪ್ರವಾಸ: ಕೂಡಲಸಂಗಮಕ್ಕೆ ಭೇಟಿ

ನಾಳೆ (ಏ.23) ರಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಬಾಗಲಕೋಟೆ ಜಿಲ್ಲೆಯಲ್ಲಿರುವ ಕೂಡಲಸಂಗಮಕ್ಕೆ ಭೇಟಿ ನೀಡಿ, ಸಾಯಂಕಾಲ ವಿಜಯಪುರಕ್ಕೆ ತೆರಳಿ ರೋಡ್​ ಶೋದಲ್ಲಿ ಭಾಗಿಯಾಗುತ್ತಾರೆ.

Karnataka Assembly Election 2023: ಏ.23ರಂದು ರಾಹುಲ್​ ಗಾಂಧಿ ರಾಜ್ಯ ಪ್ರವಾಸ: ಕೂಡಲಸಂಗಮಕ್ಕೆ ಭೇಟಿ
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ
ವಿವೇಕ ಬಿರಾದಾರ
|

Updated on:Apr 22, 2023 | 3:06 PM

Share

ವಿಜಯಪುರ: ರಾಜ್ಯ ವಿಧಾನಸಭೆಗೆ (Karnataka Assembly Election 2023) ದಿನಾಂಕ ಘೋಷಣೆಯಾದ ನಂತರ ಎರಡನೇ ಬಾರಿಗೆ ಕಾಂಗ್ರೆಸ್​ (Congress) ನಾಯಕ ರಾಹುಲ್​ ಗಾಂಧಿಯವರು (Rahul Gandhi) ಕರುನಾಡಿಗೆ ಆಗಮಿಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕೋಲಾರಕ್ಕೆ (Kolar) ಭೇಟಿ ನೀಡಿದ್ದ ವೇಳೆ ಬಿಜೆಪಿ (BJP) ವಿರುದ್ಧ ವಾಗ್ದಾಳಿ ಮಾಡಿದ್ದರು. ನಾಳೆ (ಏ.23) ರಂದು ಬಾಗಲಕೋಟೆ (Bagalkot), ವಿಜಯಪುರ (Vijayapura) ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿಯವರು ನಾಳೆ ಬೆಳಗ್ಗೆ 7.20ಕ್ಕೆ ದೆಹಲಿಯಿಂದ ಹೊರಟು ಹೈದರಾಬಾದ್ ತಲಪುತ್ತಾರೆ. ಹೈದರಾಬಾದ್​​ನಿಂದ ಬೆಳಿಗ್ಗೆ 10ಕ್ಕೆ​ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. 10.50ಕ್ಕೆ ಹುಬ್ಬಳ್ಳಿಯಿಂದ ಕೂಡಲಸಂಗಮದತ್ತ ಪ್ರಯಾಣ ಬೆಳಸುವ ರಾಹುಲ್ ಗಾಂಧಿಯವರು 11.40ಕ್ಕೆ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳವನ್ನು ತಲುಪುತ್ತಾರೆ.

ನಂತರ ಮಧ್ಯಾಹ್ನ 12.10ರವರೆಗೆ ಕೂಡಲಸಂಗಮದಲ್ಲಿರುವ ಬಸವಣ್ಣನವರ ಐಕ್ಯ ಮಂಟಪಕ್ಕೆ ತೆರಳಿ ದರ್ಶನ ಪಡೆಯುತ್ತಾರೆ. ಬಳಿಕ ಬಸವ ಜಯಂತಿ ನಿಮಿತ್ತ ಕೂಡಲಸಂಗಮದ ಬಸವ ಮಂಟಪದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ನಂತರ 1:40 ರಿಂದ 2:10ರವರೆಗೆ ದಾಸೋಹ ಭವನದಲ್ಲಿ ಪ್ರಸಾದ ಸೇವಿಸಲಿದ್ದಾರೆ.

ಇದನ್ನೂ ಓದಿ: ಲಿಂಗಾಯತರ ಮತ ಸೆಳೆಯಲು ಕಾಂಗ್ರೆಸ್ ಮತ್ತೊಂದು ತಂತ್ರ; ಬಸವ ಜಯಂತಿಗೆ ವಿಭಿನ್ನ ಕಾರ್ಯಕ್ರಮ

ಮಧ್ಯಾಹ್ನ 2.15ರಿಂದ 4.15ರವರೆಗೆ ಯಾತ್ರಿ ನಿವಾಸದಲ್ಲಿ ವಿಶ್ರಾಂತಿ ಪಡೆದು, ಸಂಜೆ 4.25ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರದತ್ತ ಪ್ರಯಾಣ ಬೆಳಸುತ್ತಾರೆ. ಸಂಜೆ 4.50ಕ್ಕೆ ವಿಜಯಪುರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿಯವರು, ಸಂಜೆ 5ರಿಂದ 6.30ರವರೆಗೆ ರೋಡ್ ಶೋ ನಡೆಸಲಿದ್ದಾರೆ. ವಿಜಯಪುರದ ಶಿವಾಜಿ ಚೌಕ್​ನಿಂದ ಆರಂಭವಾದ ರೋಡ್​ ಶೋ ಕನಕದಾಸ ವೃತ್ತದಲ್ಲಿ ಅಂತ್ಯವಾಗುತ್ತೆ. ರಾತ್ರಿ ವಿಜಯಪುರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Sat, 22 April 23

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ