Siddaramaiah Bus Yatra ಸಿದ್ದರಾಮಯ್ಯ ಬಸ್​ ಯಾತ್ರೆಗೆ ಮುಹೂರ್ತ ಫಿಕ್ಸ್: ಬಸವಕಲ್ಯಾಣದಿಂದ ಆರಂಭ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಿನಿಂದಲೇ ಸಜ್ಜಾಗುತ್ತಿದೆ. ದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ಪ್ರಭಾವವಿರುವಾಗಲೇ ರಾಜ್ಯ ಕಾಂಗ್ರೆಸ್ ತನ್ನ ಕಾರ್ಯ ಚುರುಕುಗೊಳಿಸಿದ್ದು, ಸಿದ್ದರಾಮಯ್ಯನವರ ಬಸ್​ ಯಾತ್ರೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

Siddaramaiah Bus Yatra ಸಿದ್ದರಾಮಯ್ಯ ಬಸ್​ ಯಾತ್ರೆಗೆ ಮುಹೂರ್ತ ಫಿಕ್ಸ್: ಬಸವಕಲ್ಯಾಣದಿಂದ ಆರಂಭ
siddaramaiah Bus Yatra
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 09, 2022 | 3:37 PM

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ (Karnataka Assembly Elction 2023) ಇನ್ನೇನು ಐದಾರು ತಿಂಗಳು ಬಾಕಿ ಇದ್ದು, ಕಾಂಗ್ರೆಸ್ (Congress) ಸರ್ವಸನ್ನದ್ಧವಾಗಿದೆ. ಸಿದ್ದರಾಮೋತ್ಸವ ಬಳಿಕ ರಣೋತ್ಸಾಹದಲ್ಲಿರುವ ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಅದೇ ಜೋಷ್​ನಲ್ಲಿ ಬಸ್​ಯಾತ್ರೆಗೆ (siddaramaiah Bus Yatra) ಮುಹೂರ್ತ ಫಿಕ್ಸ್​ ಮಾಡಿದ್ದು, ಇದೇ ಜನವರಿ 3ರಿಂದ ಸಿದ್ದರಾಮಮಯ್ಯನವರ ಬಸ್ ಯಾತ್ರೆ ಆರಂಭವಾಗಲಿದೆ.

ಬಸವಕಲ್ಯಾಣದಿಂದ ಆರಂಭವಾಗಲಿರುವ ಸಿದ್ದು ಬಸ್ ಯಾತ್ರೆ, ಉತ್ತರ ಕರ್ನಾಟಕದ ಪ್ರಮುಖ10ರಿಂದ 12 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಈ ಹಿಂದೆ ಲಿಂಗಾಯತ ಧರ್ಮ ವಿಭಜಕ ಎಂಬ ಹಣೆ ಪಟ್ಟಿ ಹೋಗಲಾಡಿಸಲು ಬಸವಕಲ್ಯಾಣದ ಅನುಭವ ಮಂಟಪದಿಂದಲೇ ಆರಂಭಿಸಲಿದ್ದಾರೆ. ಇದಕ್ಕೆ ಈಗಾಗಲೇ ಹೈಟೆಕ್ ಬಸ್ ಸಿದ್ಧವಾಗಿದೆ.

ಇದನ್ನೂ ಓದಿ: Congress Bus Yatra: ರಾಜ್ಯದಲ್ಲಿ ಕಾಂಗ್ರೆಸ್ ಬಸ್ ಯಾತ್ರೆಗೆ ಹೈಕಮಾಂಡ್​ ಗ್ರೀನ್​ಸಿಗ್ನಲ್, ಉತ್ತರಕ್ಕೆ ಸಿದ್ದು, ದಕ್ಷಿಣಕ್ಕೆ ಡಿಕೆಶಿ

ಸಿದ್ದರಾಮಯ್ಯ ಉತ್ತರ ಕರ್ನಾಟಕದಿಂದ ಪ್ರಾರಂಭ ಮಾಡಿದರೆ ಡಿ.ಕೆ.ಶಿವಕುಮಾರ್ ದಕ್ಷಿಣ ಕರ್ನಾಟಕ ಭಾಗದಿಂದ ​ಬಸ್ ಯಾತ್ರೆ ಮಾಡುವ ಸಾಧ್ಯತೆ ಇದ್ದು, ಇದಕ್ಕೆ ಈಗಾಗಲೇ ಹೈಟೆಕ್​ ಬಸ್​ ಸಹ ರೆಡಿಯಾಗಿದೆ. ಆದ್ರೆ, ಸದ್ಯ ವಿದೇಶ ಪ್ರವಾಸದಲ್ಲಿ ಡಿಕೆ ಶಿವಕುಮಾರ್ ಕೂಡ ಜನವರಿಯಲ್ಲಿ ತಮ್ಮ ಬಸ್ ಯಾತ್ರೆ ಶುರುಮಾಡುವ ಸಾಧ್ಯತೆಗಳಿವೆ.

ಚಿತ್ರದುರ್ಗದಲ್ಲಿಐಕ್ಯತಾ ಸಮಾವೇಶ ಬಿಜೆಪಿಯ ನವಶಕ್ತಿ ಸಮಾವೇಶಕ್ಕೆ ಪ್ರತಿಯಾಗಿ ಐಕ್ಯತಾ ಸಮಾವೇಶ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ. ಮೊದಲಿಗೆ ಜನವರಿ 6ರಂದು ಚಿತ್ರದುರ್ಗದಲ್ಲಿಸಮಾವೇಶ ಆಯೋಜಿಸಲು ಭಾನುವಾರ ಡಾ ಜಿ ಪರಮೇಶ್ವರ್‌ ಕರೆದಿದ್ದ ಹಿರಿಯ ಕಾಂಗ್ರೆಸಿಗರ ಸಭೆ ನಿರ್ಧರಿಸಿದೆ. ಆ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಐಕ್ಯತಾ ಸಮಾವೇಶ ನಡೆಸಲು ಬಯಸಲಾಗಿದೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿನಡೆಯಲಿರುವ ವಿಧಾನಮಂಡಲ ಅಧಿವೇಶನದ ಮಧ್ಯೆ ಬಿಡುವಿನ ದಿನದಂದು ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜಿಸಲಾಗುತ್ತಿದ್ದು, ನಂತರ ಚಿತ್ರದುರ್ಗದಲ್ಲಿ ಪರಿಶಿಷ್ಟ ಪಂಗಡವನ್ನು ಗುರಿಯಾಗಿಸಿಕೊಂಡು ಐಕ್ಯತಾ ಸಮಾವೇಶವನ್ನು ನಡೆಸಲಾಗುತ್ತಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:36 pm, Fri, 9 December 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್