ಕೋಲಾರದಲ್ಲಿ ಸಿದ್ದರಾಮಯ್ಯ ಪರ ಮತ ಬೇಟೆಗಿಳಿದ ಕಾಂಗ್ರೆಸ್ ನಾಯಕರು, ಮೊದಲು ಒಕ್ಕಲಿಗ ಸಮುದಾಯಕ್ಕೆ ಗಾಳ

ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ನಂತರ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ. ಇನ್ನು ಈಗಿನಿಂದಲೇ ಕಾಂಗ್ರೆಸ್ ಸಿದ್ದರಾಮಯ್ಯ ಪರ ಮತ ಸೆಳೆಯಲು ಕಸರತ್ತು ನಡೆಸಿದೆ.

ಕೋಲಾರದಲ್ಲಿ ಸಿದ್ದರಾಮಯ್ಯ ಪರ ಮತ ಬೇಟೆಗಿಳಿದ ಕಾಂಗ್ರೆಸ್ ನಾಯಕರು, ಮೊದಲು ಒಕ್ಕಲಿಗ ಸಮುದಾಯಕ್ಕೆ ಗಾಳ
ವೇಮಗಲ್​ನಲ್ಲಿ ಒಕ್ಕಲಿಗ ಮುಖಂಡರ ಸಭೆ ಮಾಡಿದ ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 31, 2023 | 4:38 PM

ಕೋಲಾರ: ಸಿದ್ದರಾಮಯ್ಯ(Siddaramaiah) ಅವರು ಈ ಬಾರಿ ಕೋಲಾರದಿಂದ(Kolar) ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಕ್ಷೇತ್ರದಲ್ಲಿ ರಾಜಕೀಯ ರಂಗೇರಿದೆ. ದಿನಕ್ಕೊಂದು ರಾಜಕೀಯ ಬೆಳವಣಿಗೆಗಳಲು ನಡೆಯುತ್ತಲೇ ಇವೆ. ನಿನ್ನೆ (ಜನವರಿ 30) ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರು ಕೋಲಾರಕ್ಕೆ ಭೇಟಿ ನೀಡಿ ಹಲವು ಮುಖಂಡರ ಜೊತೆ ಮಾತುಕತೆ ನಡೆಸಿ ಹೋಗಿದ್ದರು. ಇದೀಗ ಶಾಸಕರಾದ ಕೃಷ್ಣಬೈರೇಗೌಡ, ಶ್ರೀನಿವಾಸಗೌಡ, ನಂಜೇಗೌಡ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯನವರ ಪರವಾಗಿ ಒಕ್ಕಲಿಗ ಸಮುದಾಯದ ಮತ ಬೇಟೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯ ಕೋಲಾರ ರೌಂಡ್ಸ್: ಕುರುಬ ಸಮುದಾಯದ ವೋಟ್​​ ಕ್ರೋಢೀಕರಣ

ಹೌದು..ಒಕ್ಕಲಿಗ ಶಾಸಕರುಗಳಾದ ಕೃಷ್ಣಬೈರೇಗೌಡ, ಶ್ರೀನಿವಾಸಗೌಡ, ಹಾಗೂ ನಂಜೇಗೌಡ ಹಾಗೂ ವಿಧಾನಪರಿಷತ್​ ಸದಸ್ಯ ಅನಿಲ್​ ಕುಮಾರ್​ ಅವರುಗಳು ನೇತೃತ್ವದಲ್ಲಿ ವೇಮಗಲ್​ ಹೋಬಳಿಯ ಒಕ್ಕಲಿಗ ಮುಖಂಡರ ಸಭೆ ನಡೆಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ಪರವಾಗಿ ಒಕ್ಕಲಿಗರು ಕೂಡಾ ಒಂದಾಗಬೇಕು ಎಂದು ಸಭೆಯಲ್ಲಿ ಸಮುದಾಯದ ಮುಖಂಡರಿಗೆ ಮನವಿ ಮಾಡಿದರು. ಈ ಮೂಲಕ ಸಿದ್ದರಾಮಯ್ಯ ಪರವಾಗಿ ಒಕ್ಕಲಿಗರನ್ನು ಒಂದುಗೂಡಿಸಲು ಕೆಲಸಕ್ಕೆ ಕೈಹಾಕಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಕೃಷ್ಣಬೈರೇಗೌಡ ಮಾತನಾಡಿ ಎಲ್ಲರಿಗೂ ಕೂಡಾ ಜಾತಿ ಅಭಿಮಾನ ಇರಬೇಕು. ಅದರೆ, ಜಾತಿಯನ್ನಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ಒಕ್ಕಲಿಗ ಮುಖಂಡರಿಗೆ ಮನವಿ ಮಾಡಿದ ಅವರು, ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ರೈತರ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರು ಅದರಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಕೋಲಾರದಲ್ಲಿ ಅಲ್ಪಸಂಖ್ಯಾತರ ಮತಗಳಷ್ಟೇ ಒಕ್ಕಲಿಗ ಮತಗಳು ಕೂಡಾ ಪ್ರಾಮುಖ್ಯತೆ ಪಡೆದಿದೆ. ಒಂದು ಲೆಕ್ಕದಲ್ಲಿ ಒಕ್ಕಲಿಗ ಮತಗಳು ನಿರ್ಣಾಯಕ ಅಂತನೇ ಹೇಳಬಹುದು. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಸಮುದಾಯದ ಮತಗಳ ಬುಟ್ಟಿಗೆ ಕೈಹಾಕಿರುವ ಕಾಂಗ್ರೆಸ್, ​ ಮೊದಲು ಅಲ್ಪಸಂಖ್ಯಾತರು ನಂತರ, ಒಕ್ಕಲಿಗರು, ನಂತರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯಲು ಪ್ಲಾನ್​ ಮಾಡಿದೆ. ಈ  ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.

ವರದಿ:  ರಾಜೇಂದ್ರ ಸಿಂಹ ಟಿವಿ9 ಕೋಲಾರ

Published On - 4:36 pm, Tue, 31 January 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ