ಜಗದೀಶ್ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಫಿಕ್ಸ್? ಬೆಂಗಳೂರಿಗೆ ಕರೆತರಲು ಡಿಕೆ ಶಿವಕುಮಾರ್​ ಆಪ್ತನ ಹೆಸರಲ್ಲಿ 2 ಹೆಲಿಕಾಪ್ಟರ್​ ಬುಕ್​

ಸ್ಪೀಕರ್​ ಭೇಟಿಯಾಗಿ ಅಧಿಕೃತವಾಗಿ ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದು, ಇದೀಗ ಅವರ ಮುಂದಿನ ನಡೆ ಏನು ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಇದರ ಮಧ್ಯೆ ಡಿಕೆ ಶಿವಕುಮಾರ್​ ಆಪ್ತನ ಮೂಲಕ ಶೆಟ್ಟರ್​ ಅವರನ್ನು ಕರೆತರಲು ಎರಡು ಹೆಲಿಕಾಪ್ಟರ್​ ಬುಕ್​ ಆಗಿದೆ ಎನ್ನಲಾಗಿದೆ.

ಜಗದೀಶ್ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಫಿಕ್ಸ್? ಬೆಂಗಳೂರಿಗೆ ಕರೆತರಲು ಡಿಕೆ ಶಿವಕುಮಾರ್​ ಆಪ್ತನ ಹೆಸರಲ್ಲಿ 2 ಹೆಲಿಕಾಪ್ಟರ್​ ಬುಕ್​
ಮಾಜಿ ಸಿಎಂ ಜಗದೀಶ್​ ಶೆಟ್ಟರ್​
Follow us
ರಮೇಶ್ ಬಿ. ಜವಳಗೇರಾ
|

Updated on:Apr 16, 2023 | 11:54 AM

ಬೆಂಗಳೂರು/ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿ ಕೇಂದ್ರ ಟಿಕೆಟ್ ಜಗದೀಶ್ ಶೆಟ್ಟರ್(Jagadish shettar) ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದು, ಇಂದು ಬಿಜೆಪಿಯ(BJP) ಎಲ್ಲಾ ಸ್ಥಾನಮಾನಗಳಿಗೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇನ್ನೊಂದೆಡೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ? ಸ್ವಾತಂತ್ರ ಅಭ್ಯರ್ಥಿ ಆಗ್ತಾರೋ ಅಥವಾ ಕಾಂಗ್ರೆಸ್ ಸೇರುತ್ತಾರೋ? ಎನ್ನುವ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ನಡೆದಿವೆ. ಈ ಹಿನ್ನೆಲೆಯಲ್ಲಿ ಶೆಟ್ಟರ್​ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್​ ಜಗದೀಶ್​ ಶೆಟ್ಟರ್​ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆ. ಕಾಂಗ್ರೆಸ್​ಗೆ ಬರುವಂತೆ ಜಗದೀಶ್​ ಶೆಟ್ಟರ್​ ಅವರಿಗೆ ಕಾಂಗ್ರೆಸ್​ನ ಪ್ರಮುಖ ನಾಯಕರು ಆಹ್ವಾನ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಜಗದೀಶ್​ ಶೆಟ್ಟರ್​​ಗೆ ಟಿಕೆಟ್​ ಕೈತಪ್ಪಲು ಕಾರಣವೇನು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಸೇರುವ ಬಗ್ಗೆ ಕೈ ಹಿರಿಯ ಮುಖಂಡ ಶಾಸಕ ಶಾಮನೂರ್ ಶಿವಶಂಕರಪ್ಪ ಜತೆ ಚರ್ಚಿಸಿದ್ದಾರೆ ಎಂದು ಶೆಟ್ಟರ್ ಆಪ್ತ ವಲಯ ಖಚಿತ ಪಡಿಸಿದೆ. ಇನ್ನು ಖುದ್ದು ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್​ ಸುರ್ಜೆವಾಲ ಸಹ ಜಗದೀಶ್ ಶೆಟ್ಟರ್​ ಅವರಿಗೆ ಕರೆ ಮಾಡಿ ಪಕ್ಷಕ್ಕೆ ಬನ್ನಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಕಾಂಗ್ರೆಸ್​ಗೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ರಾಹುಲ್ ಗಾಂಧಿ ಕೂಡ ರಾಜ್ಯದಲ್ಲಿ ಪ್ರವಾಸದಲ್ಲಿದ್ದು, ಇದೇ ವೇಳೆ ಜಗದೀಶ್ ಶೆಟ್ಟರ್​ ಅವರನ್ನು ಕಾಂಗ್ರೆಸ್​ಗೆ ಬರಮಾಡಿಕೊಳ್ಳಲು ರೆಡ್ ಕಾರ್ಪೆಟ್ ಹಾಕಲಾಗಿದೆ.

ಕಾಂಗ್ರೆಸ್‌ ಮೂರು ಪಟ್ಟಿಯನ್ನು ರಿಲೀಸ್‌ ಮಾಡಿದರೂ ಶೆಟ್ಟರ್‌ ಪ್ರತಿನಿಧಿಸುವ ಕ್ಷೇತ್ರಕ್ಕೆ ಇಲ್ಲಿಯವರೆಗೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಆಫರ್ ನೀಡಿದೆ. ಇದರ ಜೊತೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡದದಿಂದ ಟಿಕೆಟ್‌ ನೀಡುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.

ಹುಬ್ಬಳ್ಳಿಯಿಂದ ಎರಡು ಹೆಲಿಕಾಪ್ಟರ್ ವ್ಯವಸ್ಥೆ

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಜಗದೀಶ್ ಶೆಟ್ಟರ್​ ಅವರನ್ನು ಕಾಂಗ್ರೆಸ್ ಸೇರಿಸಿಕೊಳ್ಳಲು ಕಾಂಗ್ರೆಸ್​ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಜಗದೀಶ್ ಶೆಟ್ಟರ್ ಸ್ವಾಗತಕ್ಕೆ ಕಾಂಗ್ರೆಸ್ ವೇದಿಕೆ ಸಿದ್ಧ ಮಾಡಿಕೊಂಡಿದೆ. ಇದಕ್ಕೆ ಪುಷ್ಠಿ ನಿಡುವಂತೆ ಜಗದೀಶ್ ಶೆಟ್ಟರ್ ಅವರನ್ನು ಕರೆತರಲು ಹುಬ್ಬಳ್ಳಿಯಿಂದ ಎರಡು ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಡಿಕೆ ಶಿವಕುಮಾರ್ ಆಪ್ತ ಯು.ಬಿ.ಶೆಟ್ಟಿ ಹೆಸರಿನಲ್ಲಿ ಹೆಲಿಕಾಪ್ಟರ್​ ಬುಕ್ ಮಾಡಲಾಗಿದೆ. ಜಗದೀಶ್​ ಶೆಟ್ಟರ್ ಜೊತೆ ಮಾಜಿ ಶಾಸಕರು, ಕೆಲ ನಿಗಮ‌ ಮಂಡಳಿ ಅಧ್ಯಕ್ಷರೂ ಬೆಂಗಳೂರಿಗೆ ಬರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಆಪ್ತನ ಹೆಸರಿನಲ್ಲಿ ಎರಡೂ ಹೆಲಿಕಾಪ್ಟರ್​ ಬುಕ್​ ಮಾಡಲಾಗಿದ್ದು, ಮಧ್ಯಾಹ್ನದ ನಂತರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ,

ಬೆಳಗಾವಿಯಿಂದ ಲಕ್ಷ್ಮಣ ಸವದಿ ಅವರನ್ನು ಬೆಂಗಳೂರಿಗೆ ಕರೆತರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿಶೇಷ ವಿಮಾನ ಬುಕ್ ಮಾಡಿದ್ದರು. ಅದರಂತೆ ಇದೀಗ ಜಗದೀಶ್ ಶೆಟ್ಟರ್​ ಅವರನ್ನು ಹುಬ್ಬಳ್ಳಿಯಿಂದ ಬೆಂಗಳೂರಿನ ಕರೆತಲು ಡಿಕೆ ಶಿವಕುಮಾರ್ ತಮ್ಮ ಆಪ್ತನ ಹೆಸರಿನಲ್ಲಿ ಎರಡು ಹೆಲಿಕಾಪ್ಟರ್​ ಬುಕ್​ ಮಾಡಲಾಗಿದೆ ಎನ್ನಲಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಜಗದೀಶ್ ಶೆಟ್ಟರ್ ಇಂದು ಬಿಜೆಪಿಯ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಲಿದ್ದು, ಇಂದೇ ಮುಂದಿನ ತೀರ್ಮಾನವನ್ನು ಘೋಷಣೆ ಮಾಡಲಿದ್ದಾರಾ? ಎನ್ನುವುದು ಶೆಟ್ಟರ್​ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಕರ್ನಾಟಕ ವಿಧಾನಸಭೆ ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:39 am, Sun, 16 April 23

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್