AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal Controversy: ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಸ್ತಾವ ವಾಪಸ್?

ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿದ್ದಕ್ಕೆ ವ್ಯಾಪಕ ವಿರೋಧ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ) ನಾಯಕರು ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಮುಂದಾಗಿದ್ದಾರೆ.

Bajrang Dal Controversy: ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಸ್ತಾವ ವಾಪಸ್?
ಕಾಂಗ್ರೆಸ್ ಪಕ್ಷದ ಚಿಹ್ನೆ
Ganapathi Sharma
|

Updated on: May 02, 2023 | 6:36 PM

Share

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ (Bajrang Dal) ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿದ್ದಕ್ಕೆ ವ್ಯಾಪಕ ವಿರೋಧ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ (Congress) ನಾಯಕರು ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಜರಂಗದಳ ನಿಷೇಧ ಪ್ರಸ್ತಾವವನ್ನು ವಾಪಸ್ ಪಡೆಯಲು ಚಿಂತನೆ ನಡೆಸಿದ್ದಾರೆ. ಇಂದು (ಮಂಗಳವಾರ) ರಾತ್ರಿ ನಾಯಕರು ಸಮಾಲೋಚನೆ ನಡೆಸಿ, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಬುಧವಾರ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಜರಂಗದಳ ನಿಷೇಧ ಪ್ರಸ್ತಾವ ವಿವಾದಕ್ಕೀಡಾಗುತ್ತಿದ್ದಂತೆಯೇ ಇದರಿಂದ ಚುನಾವಣೆ ಮೇಲೆ ನಕಾರಾತ್ಮಕ ಪರಿಣಾಮವಾಗಬಹುದು ಎಂಬ ಚಿಂತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿದೆ ಎನ್ನಲಾಗಿದೆ. ಹೀಗಾಗಿ ಅದನ್ನು ಪ್ರಣಾಳಿಕೆಯಿಂದ ತೆಗೆದುಹಾಕಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ಈ ಮಧ್ಯೆ, ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

ಏನಿದೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ?

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಪಿಎಫ್​ಐಯಂಥ ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: PM Modi: ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾವಕ್ಕೆ ಮೋದಿ ಟಾಂಗ್

ಬಜರಂಗ ದಳದ ಹೆಸರು ಪ್ರಸ್ತಾಪಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಸವರಾಜ ಬೊಮ್ಮಾಯಿ, ಪಿಎಫ್​​ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್​ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್​ಐಯನ್ನು ನಾವು ಈಗಾಗಲೇ ನಿಷೇಧಿಸಿದ್ದೇವೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ