ಬಿಜೆಪಿ ಚುನಾವಣಾ ಪ್ರಚಾರ ತಂತ್ರಗಾರಿಕೆ ರಹಸ್ಯ ಬಿಚ್ಚಿಟ್ಟ ಬಿಎಲ್​ ಸಂತೋಷ್

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​​ ಸಂತೋಷ್ ವಿಚಾರ ವಿನಿಮಯ ಮಾಡಿಕೊಂಡಿದ್ದು, ಸರಿಯಾದ ಸಮಯದಲ್ಲೇ ಪಕ್ಷದ ಪ್ರಚಾರ ಸಮರ್ಪಕವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರ ತಂತ್ರಗಾರಿಕೆ ರಹಸ್ಯ ಬಿಚ್ಚಿಟ್ಟ ಬಿಎಲ್​ ಸಂತೋಷ್
ಬಿಎಲ್​ ಸಂತೋಷ್

Updated on: May 05, 2023 | 9:05 PM

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​​ ಸಂತೋಷ್ (BL Santhosh) ವಿಚಾರ ವಿನಿಮಯ ಮಾಡಿಕೊಂಡಿದ್ದು, ಸರಿಯಾದ ಸಮಯದಲ್ಲೇ ಪಕ್ಷದ ಪ್ರಚಾರ ಸಮರ್ಪಕವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್​​ ಬೇಗನೇ ಪ್ರಚಾರ ಆರಂಭಿಸಿ ಅಭಿಯಾನದ ಉತ್ತುಂಗ ಸ್ಥಿತಿಗೆ ತಲುಪಿತ್ತು. ಆದರೆ, ಬಿಜೆಪಿ ಹಾಗಲ್ಲ. ಸರಿಯಾದ ಸಮಯದಲ್ಲಿ ಪ್ರಚಾರ ತೀವ್ರಗೊಳಿಸಿದೆ. ಪರಿಣಾಮವಾಗಿ ಬಹುಮತ ಗಳಿಸಲಿದೆ ಎಂದು ಅವರು ಹೇಳಿದ್ದಾರೆ.

‘ಟ್ವಿಟರ್ ಸ್ಪೇಸ್’ನಲ್ಲಿ ಮಾತನಾಡಿದ ಅವರು, ಬಜರಂಗದಳ ದೇಶ ಕಟ್ಟುವ ಸಂಸ್ಥೆ. ಅಂಥ ಸಂಸ್ಥೆಯನ್ನು ಕಾಂಗ್ರೆಸ್​ ಪಿಎಫ್​ಐ ನಿಷೇಧದ ಜತೆ ಹೋಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಮತ್ತು ಭಯೋತ್ಪಾದನೆ ಎರಡೂ ಜತೆಯಾಗಿ ಸಾಗಲು ಸಾಧ್ಯವಿಲ್ಲ. ಹಿಂದೂ ಮತ್ತು ಉಗ್ರವಾದ ಎಂಬ ಎರಡೂ ಪದಗಳು ಒಟ್ಟಿಗೆ ಮುನ್ನಡೆಯಲು ಸಾಧ್ಯವಿಲ್ಲ. ಅವರು (ಕಾಂಗ್ರೆಸ್) ನಮಗೆ ಒಂದು ಸಮಸ್ಯೆಯನ್ನು ನೀಡಿದ್ದಾರೆ ಮತ್ತು ನಾವು ಅವುಗಳನ್ನು ಬಗೆಹರಿಸುತ್ತೇವೆ ಎಂದು ಸಂತೋಷ್ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ಬಿರುಸು ಪಡೆದುಕೊಂಡಿರುವ ಸಂದರ್ಭದಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವುದಕ್ಕಾಗಿ ಬಜರಂಗದಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಬಿಜೆಪಿಯು ತನ್ನ ಪ್ರತಿ ಪ್ರಚಾರದಲ್ಲಿ ಹನುಮಂತನ ಬಗ್ಗೆ ಪ್ರಸ್ತಾಪಿಸಲು ಆರಂಭಿಸಿದ ಬೆನ್ನಲ್ಲೇ, ಕಾಂಗ್ರೆಸ್ ನಾಯಕರೊಬ್ಬರು ಹನುಮಂತನ ಮುಂದೆ ನಮಸ್ಕರಿಸುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಜನರು ತಮ್ಮದೇ ಜಾಲದೊಳಗೆ ಸಿಲುಕಿಕೊಳ್ಳುವುದು ಎಂದರೆ ಹೀಗೆಯೇ ಎಂದು ಟೀಕಿಸಿದ ಸಂತೋಷ್, ಕಾಂಗ್ರೆಸ್ ಹಾಗೂ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Narendra Modi: ಹನುಮನ ಜನಿಸಿದ ನಾಡಲ್ಲೇ ಮತ್ತೆ ಬಜರಂಗಬಲಿ ಘೋಷಣೆ; ಪ್ರಧಾನಿ ಮೋದಿ ತಂತ್ರಗಾರಿಕೆ ಏನು?

ಕಾಂಗ್ರೆಸ್‌ನ ನಿರಂತರ ವಾಗ್ದಾಳಿಯಿಂದಾಗಿ ಆಡಳಿತ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗಿತ್ತು ಎಂದು ಒಪ್ಪಿಕೊಂಡ ಅವರು, ರಾಜ್ಯ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ನಿರ್ಮಿಸುವಲ್ಲಿ ವಿರೋಧ ಪಕ್ಷವು ಯಶಸ್ವಿಯಾಗಲಿಲ್ಲ ಎಂದು ಪ್ರತಿಪಾದಿಸಿದರು.

ರಾಜ್ಯದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us