ವರುಣ ಕ್ಷೇತ್ರದಲ್ಲಿ ಸೋಮಣ್ಣಗೆ ಶಾಕ್​ ಕೊಡಲು ಕಾಂಗ್ರೆಸ್​ ಪ್ಲ್ಯಾನ್​: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಕಾಂಗ್ರೆಸ್​​

ವರುಣ ಕ್ಷೇತ್ರದಲ್ಲಿ ಸೋಮಣ್ಣಗೆ ಶಾಕ್​ ಕೊಡಲು ಕಾಂಗ್ರೆಸ್​ ಪ್ಲ್ಯಾನ್​ ಮಾಡಿದ್ದು, ವರುಣದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಆಪ್ತನಿಗೆ ಕಾಂಗ್ರೆಸ್​ ನಾಯಕರು ಗಾಳ ಹಾಕಿದ್ದಾರೆ.

ವರುಣ ಕ್ಷೇತ್ರದಲ್ಲಿ ಸೋಮಣ್ಣಗೆ ಶಾಕ್​ ಕೊಡಲು ಕಾಂಗ್ರೆಸ್​ ಪ್ಲ್ಯಾನ್​: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಕಾಂಗ್ರೆಸ್​​
ವಿ ಸೋಮಣ್ಣ
Follow us
|

Updated on: Apr 27, 2023 | 4:17 PM

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah)  ವಿರುದ್ಧ ವಿ. ಸೋಮಣ್ಣ (V Somanna) ಅವರನ್ನು ಕಣಕ್ಕಿಳಿಸುವ ಮೂಲಕ ಅಸ್ತ್ರ ಪ್ರಯೋಗ ಮಾಡಿದೆ. ಆದರೆ ಸದ್ಯ ವರುಣ ಕ್ಷೇತ್ರದಲ್ಲಿ ಸೋಮಣ್ಣಗೆ ಶಾಕ್​ ಕೊಡಲು ಕಾಂಗ್ರೆಸ್​ ಪ್ಲ್ಯಾನ್​ ಮಾಡಿದ್ದು, ವರುಣದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಆಪ್ತನಿಗೆ ಕಾಂಗ್ರೆಸ್​ ನಾಯಕರು ಗಾಳ ಹಾಕಿದ್ದಾರೆ. ಕಾಪು ಸಿದ್ದಲಿಂಗಸ್ವಾಮಿ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ ಇದೆ. ವರುಣ ಕ್ಷೇತ್ರದಲ್ಲಿ ಕೆಜೆಪಿಯಿಂದ ಕಾಪು ಸಿದ್ದಲಿಂಗಸ್ವಾಮಿ ಸ್ಪರ್ಧಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಸೋಮಣ್ಣ ಸ್ಪರ್ಧೆ ಹಿನ್ನೆಲೆ ಕಾಪು ಸಿದ್ದಲಿಂಗಸ್ವಾಮಿಯನ್ನು ಕಾಂಗ್ರೆಸ್​ ಸೆಳೆದಿದ್ದು, ​ವರುಣ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ನಿರ್ಣಾಯಕವಾಗಲಿವೆ.

ಸಚಿವ ವಿ ಸೋಮಣ್ಣ ಅವರು ಬೆಂಗಳೂರು ನಗರ ಜಿಲ್ಲೆಯ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಗೆ ಚಾಮರಾಜನಗರ ಕ್ಷೇತ್ರಕ್ಕೆ ವಲಸೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಮನಗರ ವಿಧಾನಸಭಾ ಕ್ಷೇತ್ರ ಜಿದ್ದಾಜಿದ್ದಿ ಹೋರಾಟದ ಅಖಾಡವಾಗಿ ಬದಲಾಗಿದೆ.

ನಾನು ಭೂತವೂ ಅಲ್ಲ ಪಿಶಾಚಿಯೂ ಅಲ್ಲ: ವಿ ಸೋಮಣ್ಣ

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹೆಚ್ಚು ದಿನ ಪ್ರಚಾರ ಮಾಡುತ್ತಾರೆ ಎಂದು ಹೇಳಿದ್ದರು. ಈ ವಿಚಾರವಾಗಿ ಇತ್ತೀಚೆಗೆ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು, ಪ್ರಚಾರ ಮಾಡುವುದು ಅವರ ಕರ್ತವ್ಯ. ಅದನ್ನವರು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಭೂತವೂ ಅಲ್ಲ ಪಿಶಾಚಿಯೂ ಅಲ್ಲ. ನಾನೊಬ್ಬ ಮನುಷ್ಯ.

ಇದನ್ನೂ ಓದಿ: ವರುಣಾದಲ್ಲಿ ಸಿದ್ದರಾಮಯ್ಯ ಪ್ರಚಾರದ ಬಗ್ಗೆ ಪ್ರಶ್ನಿಸಿದಾಗ ಹೀಗೆಂದಿದ್ದೇಕೆ ಸೋಮಣ್ಣ?

ಸಿದ್ದರಾಮಯ್ಯ ಹಾಗೂ ನಾನು ಜೊತೆಯಲ್ಲಿ ಕೆಲಸ ಮಾಡಿದವರು. ಅವರು ನನಗಿಂತ ದೊಡ್ಡ ನಾಯಕರು. ಅವರು ಪ್ರಚಾರಕ್ಕೆ ಎಷ್ಟು ಬಾರಿ‌ ಬೇಕಾದರೂ ಬರುತ್ತಾರೆ, ನಾನ್ಯಾಕೆ ಪ್ರಶ್ನೆ ಮಾಡಲಿ. ಅವರು ಬರುವುದರಿಂದ ಮತದಾರರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಮೋದಿ ವಿರುದ್ಧದ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಯುಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ

ಹೇಳುವುದು ಒಂದು ಮಾಡುವುದು ಇನ್ನೊಂದು!

ವರುಣಾದಲ್ಲಿ ಒಂದೇ ದಿನ ಪ್ರಚಾರ ಮಾಡುವುದಾಗಿ ತಿಳಿಸಿದ್ದ ಸಿದ್ದರಾಮಯ್ಯ ಬಳಿಕ ಮತ್ತೆ ಮತ್ತೆ ಕ್ಷೇತ್ರದತ್ತ ಧಾವಿಸುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿ ಕೂಡ ವ್ಯಂಗ್ಯವಾಡಿತ್ತು. ಹೇಳುವುದು ಒಂದು ಮಾಡುವುದು ಇನ್ನೊಂದು! ವರುಣಾದಲ್ಲಿ ಮೊಮ್ಮಗನ ಜತೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರು, ಮತ್ತೆ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬರುವುದಿಲ್ಲ ಎಂದಿದ್ದರು. ನಾಮಪತ್ರ ಸಲ್ಲಿಸಿ ಮೂರು ದಿನ ಕಳೆದಿಲ್ಲ, ಆಗಲೇ ಸೋಲುವ ಸೂಚನೆ ಸಿಕ್ಕಿದ್ದೇ, ಕ್ಷೇತ್ರಕ್ಕೆ ಓಡಿದ್ದಾರೆ. ಇದು ಒಳ ಏಟಿನ ಭಯವೇ ಎಂದು ಟ್ವೀಟ್ ಮಾಡಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ