Karnataka Election Results: ಸರ್ಕಾರ ರಚನೆಗೆ ಕಾಂಗ್ರೆಸ್ ಸಜ್ಜು; ಯಾರಾಗಲಿದ್ದಾರೆ ಮುಖ್ಯಮಂತ್ರಿ?

|

Updated on: May 13, 2023 | 4:26 PM

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವುದರಿಂದ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ.

Karnataka Election Results: ಸರ್ಕಾರ ರಚನೆಗೆ ಕಾಂಗ್ರೆಸ್ ಸಜ್ಜು; ಯಾರಾಗಲಿದ್ದಾರೆ ಮುಖ್ಯಮಂತ್ರಿ?
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ
Follow us on

ಬೆಂಗಳೂರು: ವಿಧಾನಸಭೆ ಚುನಾವಣೆಯ ಫಲಿತಾಂಶ (Karnataka Election Results) ಬಹುತೇಕ ಪ್ರಕಟವಾಗಿದ್ದು ಕಾಂಗ್ರೆಸ್ ಬಹುಮತವನ್ನು ಪಡೆಯುವುದು ಬಹುತೇಕ ಖಾತರಿಯಾಗಿರುವುದರಿಂದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಬಲ ಆಕಾಂಕ್ಷಿಗಳಾಗಿರುವುದರಿಂದ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ.

ಮುಂಚೂಣಿಯಲ್ಲಿ ಸಿದ್ದರಾಮಯ್ಯ

ಸದ್ಯ ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಎಂದು ಭಾವಿಸಲಾಗಿದೆ. ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಗೊಂದಲಗಳಿದ್ದವು. ನಂತರ ಅವರು ವರುಣಾ ಕ್ಷೇತ್ರದಿಂದ ಕಣಕ್ಕಿಳಿದು ಬಿಜೆಪಿಯ ವಿ ಸೋಮಣ್ಣ ಅವರನ್ನು ಸೋಲಿಸಿದ್ದಾರೆ.

ಸಿದ್ದರಾಮಯ್ಯಗೆ ಪ್ಲಸ್ ಏನು?: ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಸಂಕ್ಷಿಪ್ತ ರೂಪ) ನಾಯಕ ಎಂದು ಹೆಸರಾಗಿರುವ ಕುರುಬ ಸಮುದಾಯದ ಪ್ರಬಲ ವ್ಯಕ್ತಿಯಾಗಿರುವ ಸಿದ್ದರಾಮಯ್ಯ ಈ ಹಿಂದೆ ಕಾಂಗ್ರೆಸ್ 125ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದರು. 75ರ ಹರೆಯದ ಸಿದ್ದರಾಮಯ್ಯನವರು ಇದು ತಮ್ಮ ಕೊನೆಯ ಚುನಾವಣಾ ಕದನ ಎಂದು ಘೋಷಿಸಿದ್ದಾರೆ.

ಡಿಕೆ ಶಿವಕುಮಾರ್​ಗೆ ಪೂರಕ ಅಂಶಗಳಾವುವು?

ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಹೆಸರುವಾಸಿಯಾಗಿರುವ 60ರ ಹರೆಯದ ಡಿಕೆ ಶಿವಕುಮಾರ್ ಅವರು ಬಿಜೆಪಿಯ ಕಂದಾಯ ಸಚಿವ ಆರ್.ಅಶೋಕ ಅವರನ್ನು ನಿರಾಯಾಸವಾಗಿ ಸೋಲಿಸುವ ಮೂಲಕ ತಮ್ಮ ಭದ್ರಕೋಟೆ-ಕನಕಪುರವನ್ನು ಉಳಿಸಿಕೊಂಡಿದ್ದಾರೆ. ‘ಕನಕಪುರ ಬಂಡೆ’ ಎಂದೇ ಖ್ಯಾತರಾಗಿರುವ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ. 1980 ರ ದಶಕದಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತನಿಂದ ಸಚಿವ ಸ್ಥಾನದ ವರೆಗೆ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಪಕ್ಷಾಂತರವಾಗಿ ಬಿಜೆಪಿಗೆ ಬಂದವರಲ್ಲಿ ಯಾರೆಲ್ಲ ಗೆದ್ದರು, ಯಾರೆಲ್ಲ ಸೋತರು?

ಡಿಕೆಶಿಗೆ ಪೂರಕ ಅಂಶಗಳೇನು?: ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಸಿಎಂ ಸ್ಥಾನಕ್ಕೆ ಪರಿಗಣಿಸಲು ಪ್ರಮುಖ ಕಾರಣವೆಂದರೆ ಅವರ ಸಮಸ್ಯೆ ನಿವಾರಣಾ ಸಾಮರ್ಥ್ಯ. ಪಕ್ಷಾಂತರದಂಥ ಪಿಡುಗಿನ ಸಂದರ್ಭದಲ್ಲಿ ರೆಸಾರ್ಟ್‌ಗಳಲ್ಲಿ ಶಾಸಕರು ಮತ್ತು ಸಂಸದರನ್ನು ರಕ್ಷಿಸುವ ಮೂಲಕ ಪಕ್ಷದ ನೆರವಿಗೆ ಬಂದಿರುವುದು ಅವರ ಪ್ಲಸ್ ಪಾಯಿಂಟ್ ಆಗಿದೆ.

ಈ ಇಬ್ಬರು ನಾಯಕರಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಾರನ್ನು ಆಯ್ಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.